ನಾಪೋಕ್ಲು, ಸೆ. ೧೩: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ವತಿಯಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ದುಶ್ಚಟಗಳಿಂದಾಗುವ ಪರಿಣಾಮದ ಕುರಿತು ಅರಿವು ಮೂಡಿಸುವ ಸ್ವಾಸ್ತö್ಯ ಸಂಕಲ್ಪ ಕಾರ್ಯಕ್ರಮ ಸ್ಥಳೀಯ ಕರ್ನಾಟಕ ಪಬ್ಲಿಕ್ ಶಾಲಾ ಸಭಾಂಗಣದಲ್ಲಿ ಜರುಗಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಸ್ಥಳೀಯ ಪೊಲೀಸ್ ಠಾಣಾಧಿಕಾರಿ ಮಂಜುನಾಥ್ ನೆರವೇರಿಸಿದರು. ದುಶ್ಚಟಗಳಿಂದ ಆಗುವ ಸಮಸ್ಯೆಗಳ ಬಗ್ಗೆ ವಿವರಿಸಿದರು.

ಕೊಡಗು ಜಿಲ್ಲಾ ಜನ ಜಾಗೃತಿ ವೇದಿಕೆಯ ಉಪಾಧ್ಯಕ್ಷ ಧನಂಜಯ ಅಗೋಳಕಜೆ ಅವರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಈ ಸಂದರ್ಭ ಗ್ರಾಮಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಪುರುಷೋತ್ತಮ, ನಾಪೋಕ್ಲು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಕುಲ್ಲೇಟಿರ ಹೇಮಾವತಿ ಅರುಣ್, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಹಾರಿಸ್ ಕೆ.ಎ., ಕಾಲೇಜು ಪ್ರಬಾರ ಪ್ರಾಂಶುಪಾಲೆ ವಿಜಿತಾ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ದುಶ್ಚಟದ ಅರಿವು ಮೂಡಿಸಿ ಮಾತನಾಡಿದರು. ಸಭೆಯಲ್ಲಿ ಮೇಲ್ವಿಚಾರಕ ಸುನಿಲ್, ಸೇವಾ ಪ್ರತಿನಿಧಿ ಉಮಾಲಕ್ಷಿö್ಮ, ಗೀತಾ, ಪವಿತಾ, ಸದಸ್ಯೆ ಪೊನ್ನಮ್ಮ, ಕಾಲೇಜು ಬೋಧಕರು, ವಿದ್ಯಾರ್ಥಿ ವೃಂದ ಹಾಜರಿದ್ದರು.