ಶನಿವಾರಸಂತೆ, ಸೆ. ೧೨: ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಉತ್ತಮ ವೇದಿಕೆಯಾಗಿದೆ ಎಂದು ಶಿಕ್ಷಣ ತಜ್ಞ ಬೆಂಗಳೂರಿನ ಎ.ಎಸ್.ಸಾಗರ್ ಹೇಳಿದರು.
ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ, ಕೊಡ್ಲಿಪೇಟೆ ಸಮೂಹ ಸಂಪನ್ಮೂಲ ಕೇಂದ್ರ ಹಾಗೂ ವಿದ್ಯಾಸಂಸ್ಥೆ ಸಹಭಾಗಿತ್ವದಲ್ಲಿ ನಡೆದ ಕೊಡ್ಲಿಪೇಟೆ-ಬೆಸೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ-ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಕೇವಲ ಪರೀಕ್ಷೆ ಯಲ್ಲಿ ಪಾಸಾಗಲು ಮಾತ್ರ ಯೋಚನೆ ಮಾಡಬೇಡಿ. ಉತ್ತಮ ಜ್ಞಾನ ಗಳಿಸಿಕೊಂಡಲ್ಲಿ ಎಲ್ಲಾ ಪರೀಕ್ಷೆಗಳನ್ನು ಪಾಸ್ ಮಾಡುವ ಸಾಮರ್ಥ್ಯ ಬರುತ್ತದೆ. ಪಠ್ಯ-ಪಠ್ಯೇತರ ಚಟು ವಟಿಕೆಗಳೆರಡರಲ್ಲೂ ತೊಡಗಿಸಿ ಕೊಂಡು ಜ್ಞಾನಾರ್ಜನೆ ಹೊಂದಿದರೆ ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬಹುದು ಎಂದರು. ಅಲ್ಲದೇ ಅವರು ವಿದ್ಯಾರ್ಥಿಗಳ ಜತೆ ಸಂವಾದ ನಡೆಸಿದರು.
ವಿದ್ಯಾಸಂಸ್ಥೆ ಅಧ್ಯಕ್ಷರೂ ಹೈಕೋರ್ಟ್ ಹಿರಿಯ ವಕೀಲ ಎಚ್.ಎಸ್. ಚಂದ್ರಮೌಳಿ ಮಾತ ನಾಡಿ, ವಿದ್ಯಾರ್ಥಿಗಳಲ್ಲಿ ಸುಪ್ರತ ವಾಗಿರುವ ಪ್ರತಿಭೆ ಹೊರಹೊಮ್ಮಲು ಸ್ಪರ್ಧಾ ಕಾರ್ಯಕ್ರಮ ತುಂಬ ಸಹಕಾರಿಯಾಗಿದೆ. ಭವಿಷ್ಯದಲ್ಲಿ ಮಕ್ಕಳು ಯಾವ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದಾರೆ ಎಂಬುದನ್ನು ಗುರುತಿಸಲೂ ಕಾರ್ಯಕ್ರಮ ಪೂರಕವಾಗಿದೆ ಎಂದರು.
ಸAಪನ್ಮೂಲ ವ್ಯಕ್ತಿ ಆರ್.ರವೀಶ್ ಮಾತನಾಡಿ, ಮಕ್ಕಳ ಪ್ರತಿಭೆ ಗುರುತಿಸಲು ಶಿಕ್ಷಣ ಇಲಾಖೆ ಪ್ರತಿಭಾ ಕಾರಂಜಿ ಸ್ಪರ್ಧಾ ಕಾರ್ಯಕ್ರಮಗಳ ಮೂಲಕ ಉತ್ತಮ ಅವಕಾಶಗಳನ್ನು ಒದಗಿಸಿಕೊಡುತ್ತಿದೆ ಎಂದರು.
ವಿದ್ಯಾರ್ಥಿಗಳು ವೈಯಕ್ತಿಕ ಸ್ಪರ್ಧೆಗಳಾದ ಕಂಠಪಾಠ, ಧಾರ್ಮಿಕ ಶ್ಲೋಕ, ಸುಗಮ ಸಂಗೀತ, ಛದ್ಮವೇಶ, ಚಿತ್ರಕಲೆ, ಕಥೆ ಹೇಳುವುದು, ಕ್ಲೇ ಮಾಡೆಲಿಂಗ್, ಶಾಸ್ತಿçÃಯ ಸಂಗೀತ, ಭರತ ನಾಟ್ಯ, ಪ್ರಬಂಧ, ಚರ್ಚಾ ಸ್ಪರ್ಧೆಗಳಲ್ಲಿ ಭಾಗವಹಿಸಿದರು. ಸಾಮೂಹಿಕ ಸ್ಪರ್ಧೆಗಳಾದ ಜಾನಪದ ನೃತ್ಯ, ದೇಶಭಕ್ತಿ ಗೀತೆ, ಕೋಲಾಟ, ಗಝಲ್, ರಸಪ್ರಶ್ನೆ ಇತ್ಯಾದಿ ಸ್ಪರ್ಧೆಗಳಲ್ಲೂ ಭಾಗವಹಿಸಿದರು.
ಮುಖ್ಯ ಶಿಕ್ಷಕ ಅಬ್ದುಲ್ ರಬ್ ಸ್ವಾಗತಿಸಿ, ಉಪನ್ಯಾಸಕರಾದ ರಮ್ಯಾ ನಿರೂಪಿಸಿ, ಅಭಿಲಾಷ್ ವಂದಿಸಿದರು.