ಪೊನ್ನಂಪೇಟೆ, ಸೆ.೧೨: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವೀರಾಜಪೇಟೆಯ ಮೂರ್ನಾಡು ವಲಯದ ಮೂರ್ನಾಡು ಎ ಕಾರ್ಯ ಕ್ಷೇತ್ರದ ಸಮೃದ್ಧಿ ಮಹಿಳಾ ಜ್ಞಾನವಿಕಾಸ ಕೇಂದ್ರವನ್ನು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಲಲಿತ ಅವರು ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು ಮಹಿಳೆಯರು ಕುಟುಂಬ ನಿರ್ವಹಣೆಯ ಜೊತೆಗೆ ಸಮಾಜದಲ್ಲಿ ಸರ್ವ ಕ್ಷೇತ್ರಗಳಲ್ಲಿಯೂ ವಿಶಿಷ್ಟವಾದ ಪಾತ್ರವನ್ನು ನಿಭಾಯಿಸಿಕೊಂಡು ಮುನ್ನಡೆಯುತ್ತಿದ್ದಾರೆ ಎಂದರು. ವೀರಾಜಪೇಟೆ ತಾಲೂಕಿನ ಯೋಜನಾಧಿಕಾರಿ ಬಿ.ದಿನೇಶ್ ಮಹಿಳಾ ಜ್ಞಾನವಿಕಾಸ ಕೇಂದ್ರದ ರೂಪುರೇಷೆಗಳ ಬಗ್ಗೆ ಪ್ರಸ್ತಾವಿಕ ಮಾತನಾಡಿದರು. ಈ ಸಂದರ್ಭ ಪೊಲೀಸ್ ಇಲಾಖೆಯ ಸಿಬ್ಬಂದಿ ದಿಲೀಪ್, ಒಕ್ಕೂಟ ಅಧ್ಯಕ್ಷ ರಾದ ರೋಸ್ಲಿ, ವಲಯ ಮೇಲ್ವಿಚಾ ರಕರಾದ ಪ್ರತಾಪ್, ತಾಲೂಕಿನ ಜ್ಞಾನವಿಕಾಸ ಸಮನ್ವಯಾಧಿಕಾರಿ ಶ್ರೇಯಾ, ಸಂಘಗಳ ಸದಸ್ಯರು ಉಪಸ್ಥಿತರಿದ್ದರು. ದಿವ್ಯ ಸ್ವಾಗತಿಸಿ, ಪೂರ್ಣಿಮ ವಂದಿಸಿದರು.