ಮಡಿಕೇರಿ, ಸೆ. ೧೨: ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಆಯೋಜಿಸಲಾಗಿದ್ದ ವಲಯಮಟ್ಟದ ಕ್ರೀಡಾಕೂಟದಲ್ಲಿ ಪೊನ್ನಂಪೇಟೆಯ ಸಂತ ಅಂತೋಣಿ ಶಿಕ್ಷಣ ಸಂಸ್ಥೆಯ ಪ್ರೌಢಶಾಲೆ ಮತ್ತು ಕಾಲೇಜು ವಿಭಾಗ ಗೆಲುವು ಸಾಧಿಸಿದೆ.

ಪ್ರೌಢಶಾಲಾ ವಿಭಾಗದ ವಲಯ ಮಟ್ಟದಲ್ಲಿ ಶಟಲ್ ಬ್ಯಾಡ್ಮಿಂಟನ್ ಬಾಲಕರ ವಿಭಾಗದಲ್ಲಿ ಪ್ರಥಮ, ಬಾಲ್ ಬ್ಯಾಡ್ಮಿಂಟನ್‌ನಲ್ಲಿ ಬಾಲಕ ಮತ್ತು ಬಾಲಕಿಯರ ತಂಡ ಪ್ರಥಮ, ವಾಲಿಬಾಲ್‌ನಲ್ಲಿ ದ್ವಿತೀಯ ಸ್ಥಾನ, ಶಟಲ್ ಬ್ಯಾಡ್ಮಿಂಟನ್ ಬಾಲಕೀಯರ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದೆ. ಅಥ್ಲೆಟಿಕ್ ವಿಭಾಗದಲ್ಲಿ ರಿಲ್ಲೆಯಲ್ಲಿ ಪ್ರಥಮ ಸ್ಥಾನವನ್ನು ಪ್ರೌಢಶಾಲೆಯ ನಿಶಾಂತ್, ಕ್ರಶಾಂಕ್ ದೇವಯ್ಯ, ತನುಷ್ ಪಡೆದು ಕೊಂಡಿದ್ದಾರೆ, ಭಾರದ ಗುಂಡು ಎಸೆತದಲ್ಲಿ ದೀಕ್ಷಿತ್ ಪ್ರಥಮ ಸ್ಥಾನ ಪಡೆದಿದ್ದು, ೮೦೦, ೫೦೦, ೩೦೦೦, ೧೦೦ ಮೀಟರ್ ಓಟದ ಸ್ಪರ್ಧೆಯಲ್ಲಿ ತನಿಷ್ ತಮ್ಮಯ್ಯ, ನಿಶಾಂತ್, ಶೋಹನ್ ಪ್ರಥಮ ಸ್ಥಾನವನ್ನು ಪಡೆದುಕೊಂಡರೆ, ದೇವಯ್ಯ, ಪವನ್, ಮೋಹನ್ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ತಾಲೂಕು ಮಟ್ಟದ ಬಾಲಕರ ಬಾಸ್ಕೆಟ್‌ಬಾಲ್ ಹಾಗೂ ಹಾಕಿ ಪಂದ್ಯಾವಳಿಯಲ್ಲಿ ಪ್ರೌಢಶಾಲಾ ವಿಭಾಗದ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.

ಕಾಲೇಜು ವಿಭಾಗದ ಬಾಲಕ ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಸಂತ ಅಂತೋಣಿ ಪದವಿ ಪೂರ್ವ ಕಾಲೇಜಿನ ಬಾಲಕ ಬಾಲಕಿಯರ ತಂಡಗಳು ವಿಜೇತರಾಗುವ ಮೂಲಕ ಜಿಲ್ಲಾಮಟ್ಟಕ್ಕೆ ಆಯ್ಕೆ ಯಾಗಿವೆ. ಟೆನ್ನಿಕೋಯೊಟ್‌ನಲ್ಲೂ ಸಂತ ಅಂತೋಣಿ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದಿದೆ.