ಮಡಿಕೇರಿ ಸೆ. ೧೨: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ “ಮಹಾತ್ಮಗಾಂಧಿ ಸೇವಾ ಪ್ರಶಸ್ತಿ-ಕರ್ನಾಟಕ’’ಗೆ ಪ್ರಸಕ್ತ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಿದೆ. ಸಾರ್ವಜನಿಕ ಜೀವನದಲ್ಲಿ ಮಹಾತ್ಮ ಗಾಂಧೀಜಿಯವರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಟ ೬೦ ವರ್ಷಗಳಾಗಿರುವ ವ್ಯಕ್ತಿಗಳು ಅಥವಾ ೨೫ ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುತ್ತದೆ. ಪ್ರಶಸ್ತಿಯನ್ನು ಆಯ್ಕೆ ಮಾಡಲು ಆಯ್ಕೆ ಸಮಿತಿಯನ್ನು ರಚಿಸಲಾಗುವುದು. ೨೦೨೩ ರ ಅಕ್ಟೋಬರ್ ೨ ರಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಮಹಾತ್ಮ ಗಾಂಧೀಜಿಯವರು ಪ್ರಚುರುಪಡಿಸಿದ ಜನಪರ ಕಾರ್ಯಕ್ರಮಗಳಾದ ಅಸ್ಪೃಶ್ಯತೆ ನಿವಾರಣೆ, ಅಹಿಂಸೆ, ಮಹಿಳಾ ಸಬಲೀಕರಣ, ಗ್ರಾಮೀಣ ನೈರ್ಮಲ್ಯ, ಮದ್ಯಪಾನ ವಿರೋಧಿ ನೀತಿ, ಖಾದಿ ಮತ್ತು ಸ್ವದೇಶಿ ವಸ್ತು ಬಳಕೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ದಾರ, ಈ ಕ್ಷೇತ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. ಸಂಘ ಸಂಸ್ಥೆಗಳು ಅಥವಾ ವ್ಯಕ್ತಿಗಳು ಶಿಫಾರಸ್ಸನ್ನು ಕೂಡ ಮಾಡಬಹುದಾಗಿದೆ. ತಾ. ೧೫ ರೊಳಗೆ ಅರ್ಜಿಯನ್ನು ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಸೌಧ, ನಂ.೧೭, ಭಗವಾನ್ ಮಹಾವೀರ ರಸ್ತೆ(ಇನ್ಫೆಂಟ್ರಿ ರಸ್ತೆ), ಬೆಂಗಳೂರು-೫೬೦೦೦೧ ಅಥವಾ ಇ-ಮೇಲ್ : iಟಿಜಿoಡಿmಚಿಣioಟಿ ಜiಠಿಡಿಚಿತಿಚಿಡಿಜs@gmಚಿiಟ.ಛಿom ವಿಳಾಸಕ್ಕೆ ಕಳುಹಿಸಬಹುದು ಎಂದು ಪ್ರಕಟಣೆ ತಿಳಿಸಿದೆ.