ನಾಪೋಕ್ಲು: ದಾರ್ಶನಿಕ, ತತ್ವಜ್ಞಾನಿ, ಶಿಕ್ಷಣ ತಜ್ಞ, ಪ್ರಾಧ್ಯಾಪಕ, ಕುಲಪತಿಗಳಾಗಿ ಡಾ. ಸರ್ವಪಲ್ಲಿ ರಾಧಾಕೃಷ್ಣ ಅವರು ಸಲ್ಲಿಸಿದ ಅಪ್ರತಿಮ ಸೇವೆ ಸ್ಮರಣೀಯ ಎಂದು ನಿರ್ದೇಶಕ ಕಲ್ಯಾಟಂಡ ಪೂಣಚ್ಚ ಹೇಳಿದರು. ಇಲ್ಲಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಏರ್ಪಡಿಸಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಶಾಲೆಯ ಪ್ರಾಂಶುಪಾಲೆ ಕಲ್ಯಾಟಂಡ ಶಾರದ ಅಪ್ಪಣ್ಣ ಮಾತನಾಡಿ, ಶಿಕ್ಷಕರ ಸ್ವಾರ್ಥ ರಹಿತ ಸೇವೆಯಿಂದ ವಿದ್ಯಾರ್ಥಿಗಳು ಮುಂದಿನ ಸಮಾಜದ ಉತ್ತಮ ಪ್ರಜೆಗಳಾಗಬಲ್ಲರು ಎಂದರು. ಹಿರಿಯ ಶಿಕ್ಷಕಿ ಮುಂಡAಡ ಕವಿತಾ ಅಯ್ಯಣ್ಣ, ಶಿಕ್ಷಕಿ ಮರ್ಲಿನ್ ಪ್ರಿಯಾ ಮಾತನಾಡಿದರು.

ವಿದ್ಯಾಸಂಸ್ಥೆಯ ಅಧ್ಯಕ್ಷ ಡಾ.ಬೊಪ್ಪಂಡ ಜಾಲಿ ಬೋಪಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ದಿನದ ಮಹತ್ವದ ಬಗ್ಗೆ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ನಿರ್ದೇಶಕ ಬೊಳ್ಳಚೆಟ್ಟಿರ ಸುರೇಶ್ ಉಪಸ್ಥಿತರಿದ್ದರು.

ಶಿಕ್ಷಕರ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

ವಿದ್ಯಾರ್ಥಿ ನಸೀರಾ, ವರ್ಷ ಮತ್ತು ದೀಕ್ಷಾ ತಂಡ ಪ್ರಾರ್ಥಿಸಿ, ವಿದ್ಯಾರ್ಥಿನಿ ಫಾತಿಮತ್ ನಿಹಾಲ ಸ್ವಾಗತಿಸಿದರು. ಬಿ.ಎಸ್. ಸಹನಾ ವಂದಿಸಿದರು.ಸುAಟಿಕೊಪ್ಪ: ಗುರುವು ತೋರಿದ ಮಾರ್ಗದರ್ಶನದಂತೆ ವಿದ್ಯಾರ್ಥಿಗಳು ಭವಿಷ್ಯದ ಗುರಿ ತಲುಪಿ ಸತ್ಪçಜೆಗಳಾಗಿ ಜೀವನ ನಡೆಸಬೇಕು ಎಂದು ಸುಂಟಿಕೊಪ್ಪ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಶ್ರೀಲತಾ ಹೇಳಿದರು.

ಸುಂಟಿಕೊಪ್ಪ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಡಾ. ಸರ್ವಪಲ್ಲಿ ರಾಧಕೃಷ್ಣ ಅವರ ಆದರ್ಶ ವ್ಯಕ್ತಿತ್ವವನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕೆಂದು ಹೇಳಿದರು.

ಡಾ. ಸರ್ವಪಲ್ಲಿ ರಾಧಕೃಷ್ಣ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಅಧ್ಯಕ್ಷತೆಯನ್ನು ಪ್ರಾಂಶುಪಾಲೆ ಶ್ರೀಲತಾ ವಹಿಸಿದ್ದು, ಕಾಲೇಜಿನ ಉಪನ್ಯಾಸಕರುಗಳಾದ ಈಶ, ಕವಿತಾ, ಸರಳ, ಸುನಿತಾ, ಪದ್ಮಾವತಿ, ಸುಚಿತ್ರಾ, ಅಭಿಷೇಕ್, ಅನುಷಾ, ಸಂದ್ಯಾ, ಸೀಮ ಮತ್ತು ಕನಕ ಅವರುಗಳು ಅತಿಥಿಗಳಾಗಿ ಭಾಗವಹಿಸಿದ್ದರು.ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ಬೆಸೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಸಂಭ್ರಮದಿAದ ಆಚರಿಸಲಾಯಿತು. ವಿದ್ಯಾರ್ಥಿಗಳೆ ಕಾರ್ಯಕ್ರಮದ ಮುಂದಾಳತ್ವ ವಹಿಸಿದ್ದು ಅಚ್ಚುಕಟ್ಟಾಗಿ ನಡೆಸಿ ಶಿಕ್ಷಕರ ಹಾಗೂ ಪೋಷಕರ ಮೆಚ್ಚುಗೆಗೆ ಪಾತ್ರರಾದರು.

ದಿನಾಚರಣೆ ಹಿನ್ನೆಲೆ ಶಿಕ್ಷಕರು ಹಾಗೂ ಪೋಷಕರಿಗೆ ವಿದ್ಯಾರ್ಥಿಗಳು ಸ್ವರಚಿತ ಆಮಂತ್ರಣ ಪತ್ರಿಕೆ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು. ಪೋಷಕರ ಸಮಕ್ಷಮದಲ್ಲಿ ಶಿಕ್ಷಕರಿಗೆ ಕ್ರೀಡಾ ಸ್ಪರ್ಧೆಗಳನ್ನು ನಡೆಸಿ ವಿಜೇತ ಶಿಕ್ಷಕರಿಗೆ ಬಹುಮಾನಗಳ್ನು ನೀಡಿ, ಸನ್ಮಾನಿಸಿದರು.

ಮುಖ್ಯಶಿಕ್ಷಕಿ ಶಶಿಕಲಾ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶಿಸಿ ರಂಜಿಸಿದರು. ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳು ಹಾಗೂ ಶಿಕ್ಷಕರು ಹಾಜರಿದ್ದರು.