ಶನಿವಾರಸಂತೆ, ಸೆ. ೧೩: ಪಟ್ಟಣದ ಸುಪ್ರಜ ಗುರುಕುಲ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳು ಶಿಕ್ಷಕರಿಗಾಗಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಿದರು.

ದಿನದ ಅಂಗವಾಗಿ ಡಾ. ಸರ್ವಪಲ್ಲಿ ರಾಧಕೃಷ್ಣನ್ ಅವರ ಭಾವಚಿತ್ರಕ್ಕೆ ಶಿಕ್ಷಕರು ಪುಷ್ಪಾರ್ಚನೆ ಮಾಡಿ, ಜ್ಯೋತಿ ಬೆಳಗಿಸಿ ಗೌರವ ನಮನ ಸಲ್ಲಿಸಿದರು.

ಶಿಕ್ಷಕರಿಗಾಗಿ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಡಾ. ರಾಧಕೃಷ್ಣನ್ ಅವರ ಜೀವನ ಚರಿತ್ರೆ ಹಾಗೂ ಗುರುವಿನ ಮಹತ್ವದ ಕುರಿತು ಮಾತನಾಡಿದರು. ವಿದ್ಯಾರ್ಥಿಗಳಿಗಾಗಿ ಶಿಕ್ಷಕರು ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶಿಸಿ ರಂಜಿಸಿದರು. ಸ್ಪರ್ಧಾ ವಿಜೇತ ಶಿಕ್ಷಕರಿಗೆ ಬಹುಮಾನ ನೀಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷೆ ಹಾಗೂ ಪ್ರಾಂಶುಪಾಲೆ ಡಿ. ಸುಜಲಾ ದೇವಿ ಮಾತನಾಡಿ, ಡಾ. ರಾಧಕೃಷ್ಣನ್ ಅವರ ಜನ್ಮ ದಿನವನ್ನು ಅವರಿಚ್ಛೆಯಂತೆ ಶಿಕ್ಷಕರ ದಿನಾಚರಣೆಯಾಗಿ ದೇಶದಾದ್ಯಂತ ಆಚರಿಸಲ್ಪಡುತ್ತಿದೆ. ಶಿಕ್ಷಕ ಶಿಸ್ತು, ಕ್ಷಮೆ, ಕರ್ತವ್ಯ ಪ್ರಜ್ಞೆಯ ಸಂಗಮವಾಗಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ರೂವಾರಿ ಎಂದರು.ಶನಿವಾರಸAತೆ, ಸೆ. ೧೩: ಪಟ್ಟಣದ ಶ್ರೀ ವಿಘ್ನೇಶ್ವರ ವಿದ್ಯಾಸಂಸ್ಥೆಯ ಬಾಲಿಕಾ ಪದವಿ ಪೂರ್ವ ಕಾಲೇಜು ಹಾಗೂ ಗೋಲ್ಡನ್ ಸ್ಕೂಲ್ ವಿದ್ಯಾರ್ಥಿನಿಯರು ಶಿಕ್ಷಕರ ದಿನಾಚರಣೆಯನ್ನು ಆಚರಿಸಿದರು.

ಉಪನ್ಯಾಸಕರು ಹಾಗೂ ಶಿಕ್ಷಕರಿಗೆ ಥ್ರೋಬಾಲ್, ವಾಲಿಬಾಲ್ ಹಾಗೂ ಕ್ರೇಜಿ ಗೇಮ್ ಇತ್ಯಾದಿ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿದ್ದರು. ವಿದ್ಯಾರ್ಥಿನಿಯರು ಉತ್ಸಾಹದಿಂದ ಸ್ಪರ್ಧೆಗಳನ್ನು ನಡೆಸಿ, ಶಿಕ್ಷಕರನ್ನು ಪ್ರೋತ್ಸಾಹಿಸಿದರು. ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶಿಸಿ ಮನ ರಂಜಿಸಿದರು. ವಿದ್ಯಾಸಂಸ್ಥೆಯ ೩೫ ಶಿಕ್ಷಕರನ್ನು ಸನ್ಮಾನಿಸಿ, ಗೌರವಿಸಿದರು. ಉಡುಗೊರೆಗಳನ್ನು ನೀಡಿ, ಭೋಜನ ವ್ಯವಸ್ಥೆಯನ್ನು ಏರ್ಪಡಿಸಿದ್ದರು.

ನಂತರ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಟಿ.ಪಿ. ಶಿವಪ್ರಕಾಶ್ ವಹಿಸಿದ್ದರು. ಮುಖ್ಯ ಅತಿಥಿ ಸಮೂಹ ಸಂಪನ್ಮೂಲ ವ್ಯಕ್ತಿ ಸಿ.ಕೆ.ದಿನೇಶ್ ಮಾತನಾಡಿ, ದಿನದ ಮಹತ್ವದ ಕುರಿತು ಮಾತನಾಡಿದರು. ಕಾರ್ಯಕ್ರಮ ಉದ್ಘಾಟಿಸಿದ ವಿದ್ಯಾಸಂಸ್ಥೆ ಆಡಳಿತ ಮಂಡಳಿ ನಿರ್ದೇಶಕಿ ನಿತ್ಯಾನಿಧಿ ಮಾತನಾಡಿ, ಮಕ್ಕಳಿಗೆ ಶುಭ ಹಾರೈಸಿದರು.

ಮಾರ್ಗದರ್ಶಕ ಶಿಕ್ಷಕ ಕೆ.ಪಿ.ಜಯಕುಮಾರ್, ಉಪನ್ಯಾಸಕರು, ಗೋಲ್ಡನ್ ಸ್ಕೂಲ್‌ನ ಮುಖ್ಯಶಿಕ್ಷಕ ಷಣ್ಮುಖ, ಶಿಕ್ಷಕರು, ಆಡಳಿ ಮಂಡಳಿ ಪದಾಧಿಕಾರಿಗಳು ಉಪಸ್ಥಿತರಿದ್ದರು.