ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಸೆ. ೧೩: ಕಳೆದ ೧೨೩ ವರ್ಷಗಳಲ್ಲೇ ರಾಜ್ಯ ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ತೀವ್ರ ಮಳೆ ಕೊರತೆಯಾಗಿದೆ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ. ಈ ಸಂಬAಧ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ. ತಮಿಳುನಾಡಿಗೆ ಇನ್ನೂ ೧೫ ದಿನ ಪ್ರತಿನಿತ್ಯ ೫ ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಸೂಚಿಸಿರುವ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವ ಪಕ್ಷ ಸಭೆ ಕರೆಯಲಾಗಿತ್ತು. ವಿಧಾನಸೌಧದಲ್ಲಿ ನಡೆದ ಸರ್ವಪಕ್ಷ ಸಭೆ ನಂತರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿಎಂ, ಕಾವೇರಿ ನೀರು ನಿರ್ವಹಣಾ ಸಮಿತಿ ಆದೇಶವನ್ನು ಮರು ಪರಿಶೀಲನೆ ಮಾಡುವಂತೆ ಮನವಿ ಮಾಡಲು ನಿರ್ಧರಿಸಿದ್ದೇವೆ. ವಸ್ತುಸ್ಥಿತಿ ವಿವರಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮತ್ತೆ ಪತ್ರ ಬರೆಯುತ್ತೇವೆ ಎಂದು ಸಿಎಂ ತಿಳಿಸಿದರು.
ಸರಣಿ ಅಪಘಾತ: ದಂಪತಿ ಸ್ಥಳದಲ್ಲೇ ದುರ್ಮರಣ
ಚಿಕ್ಕಮಗಳೂರು, ಸೆ. ೧೩: ಕಡೂರು- ಮೂಡಿಗೆರೆ ಹೆದ್ದಾರಿ ಹಿರೇಗೌಜ ಬಳಿ ಟಿಪ್ಪರ್ ಲಾರಿ, ಕಾರು ಮತ್ತು ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿ ದಂಪತಿ ಮೃತಪಟ್ಟಿದ್ದು, ೧೪ ತಿಂಗಳ ಮಗುವಿನ ಸ್ಥಿತಿ ಗಂಭೀರವಾಗಿದೆ. ಬೈಕ್ನಲ್ಲಿದ್ದ ದಂಪತಿ ಶಿವಮೊಗ್ಗ ಮೂಲದ ಸಯ್ಯದ್ ಆಸೀಫ್ (೩೮), ಮಾಜಿನಾ (೩೩) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರ ಜತೆಗಿದ್ದ ೧೪ ತಿಂಗಳ ಮಗುವಿಗೆ ಗಂಭೀರ ಗಾಯಗಳಾಗಿವೆ.
ದರೋಡೆಗೆ ಯತ್ನ ಪ್ರಕರಣ; ಮೂವರ ಬಂಧನ
ಬೆAಗಳೂರು, ಸೆ. ೧೩: ೩೪ ವರ್ಷದ ವಿಜ್ಞಾನಿಯ ಕಾರನ್ನು ದರೋಡೆ ಮಾಡಲು ಬೈಕ್ಗಳಲ್ಲಿ ಹಿಂಬಾಲಿಸಿ ಗಾಜಿಗೆ ಹಾನಿ ಮಾಡಿದ್ದ ಐವರ ತಂಡದ ಮೂವರನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್ ೨೪ ರಂದು ನಗರದ ಹೊರವಲಯದ ರಾವುತನಹಳ್ಳಿ ಬಳಿ ಘಟನೆ ನಡೆದಿದ್ದು, ದಾಸನಪುರದ ಸೆಂಟರ್ ಫಾರ್ ನ್ಯಾನೋ ಮತ್ತು ಸಾಫ್ಟ್ ಮ್ಯಾಟರ್ ಸೈನ್ಸಸ್ನ ಡಾ.ಅಶುತೋಷ್ ಕುಮಾರ್ ಸಿಂಗ್ ಅವರನ್ನು ದರೋಡೆಗೆ ಗ್ಯಾಂಗ್ ಯತ್ನಿಸಿತ್ತು. ಸೋಮವಾರ ರಾತ್ರಿ ರಾವುತನಹಳ್ಳಿ ಬಳಿ ದರೋಡೆಗೆ ಯೋಜಿಸುತ್ತಿದ್ದಾಗ ಆರೋಪಿಗಳಾದ ಮೈಲಾರಿ (೨೨), ನವೀನ್ (೨೨) ಮತ್ತು ಶಿವರಾಜ್ (೩೦) ಅವರನ್ನು ಬಂಧಿಸಲಾಗಿದೆ. ಶಸ್ತಾçಸ್ತç ಹಾಗೂ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.
ವೋಚರ್ಗಳಿಗಾಗಿ ‘ರಿವಾರ್ಡ್ ೩೬೦' ಸರ್ವರ್ಗೆ ಕನ್ನ-ಬಂಧನ!
ಬೆAಗಳೂರು, ಸೆ. ೧೩: ಇತ್ತೀಚೆಗೆ ‘ರಿವಾರ್ಡ್ ೩೬೦' ರ ಸರ್ವರ್ ಹ್ಯಾಕ್ ಮಾಡಿದ ಮತ್ತು ಗ್ರಾಹಕರಿಗೆ ತಲುಪಬೇಕಿದ್ದ ವೋಚರ್ಗಳನ್ನು ತೆಗೆದುಕೊಂಡಿದ್ದಕ್ಕಾಗಿ ಆಂಧ್ರಪ್ರದೇಶದ ೨೩ ವರ್ಷದ ಐಐಐಟಿ ಪದವೀಧರನೊಬ್ಬನನ್ನು ಬಂಧಿಸಲಾಗಿದೆ. ಈತ ಈ ವೋಚರ್ಗಳನ್ನು ಬಳಸಿ ಆನ್ಲೈನ್ ಖರೀದಿ ಮಾಡುತ್ತಿದ್ದ ಎನ್ನಲಾಗಿದೆ. ಗ್ರಾಹಕರ ದೂರಿನ ಮೇರೆಗೆ ಎಚ್ಎಸ್ಆರ್ ಲೇಔಟ್ ೬ನೇ ವಲಯದಲ್ಲಿರುವ ರಿವಾರ್ಡ್ ೩೬೦ ಸಂಸ್ಥೆಯು ಆಗ್ನೇಯ ಸಿಇಎನ್ ಠಾಣೆ ಪೊಲೀಸರಿಗೆ ದೂರು ನೀಡಿತ್ತು. ಆರೋಪಿಯನ್ನು ಆಂಧ್ರಪ್ರದೇಶದಲ್ಲಿ ಬಂಧಿಸಿರುವ ಪೊಲೀಸರು, ಆತನಿಂದ ಸುಮಾರು ೫.೨ ಕಿಲೋಗ್ರಾಂ ಚಿನ್ನ, ೨೭.೨ ಕೆ.ಜಿ. ಬೆಳ್ಳಿ, ಆಟೋಮೊಬೈಲ್ ಮತ್ತು ಇತರ ಸುಮಾರು ೪.೧೬ ಕೋಟಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ಆಂಧ್ರಪ್ರದೇಶದ ಚಿತ್ತೂರು ಮೂಲದ ಬೊಮ್ಮಲೂರು ಲಕ್ಷ್ಮೀಪತಿ ಬಂಧಿತ ಆರೋಪಿ.
ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿ ೬ ಮಂದಿ ಸಿಸಿಬಿ ಕಸ್ಟಡಿಗೆ!
ಬೆಂಗಳೂರು, ಸೆ. ೧೩: ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ನೀಡುವುದಾಗಿ ನಂಬಿಸಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬAಧಿಸಿದAತೆ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿದಂತೆ ಆರು ಆರೋಪಿಗಳನ್ನು ಸೆಪ್ಟೆಂಬರ್ ೨೩ರವರೆಗೆ ಸಿಸಿಬಿ ಕಸ್ಟಡಿಗೆ ಆದೇಶಿಸಲಾಗಿದೆ. ಪ್ರಕರಣ ಸಂಬAಧ ಕರಾವಳಿ ಮೂಲದ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿದಂತೆ ಶ್ರೀಕಾಂತ್, ರಮೇಶ್, ಗಗನ್, ಪ್ರಜ್ವಲ್, ಧನರಾಜ್ನನ್ನು ಬೆಂಗಳೂರು ಸಿಸಿಬಿ ಬಂಧಿಸಿದ್ದು ಇಂದು ಬೆಂಗಳೂರಿನ ೧ನೇ ಎಸಿಎಂಎA ಕೋರ್ಟ್ಗೆ ಹಾಜರುಪಡಿಸಿತ್ತು. ಈ ವೇಳೆ ಆರೋಪಿಗಳನ್ನು ೧೪ ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡುವಂತೆ ಪೊಲೀಸರು ಮನವಿ ಮಾಡಿದರು. ಆದರೆ ಕೋರ್ಟ್ ಆರು ಮಂದಿ ಆರೋಪಿಗಳನ್ನು ೧೦ ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿದೆ. ಆರೋಪಿಗಳು ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ರೂ. ೫ ಕೋಟಿ ಪಡೆದು ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ.
ತನಿಖಾ ಸಂಸ್ಥೆಗಳು ಒಂದು ಹೆಜ್ಜೆ ಮುಂದಿರಬೇಕು: ಸಿದ್ದರಾಮಯ್ಯ
ಬೆಂಗಳೂರು, ಸೆ. ೧೩: ತನಿಖಾ ಸಂಸ್ಥೆಗಳು ಅಪರಾಧಿಗಳಿಗಿಂತ ಒಂದು ಹೆಜ್ಜೆ ಮುಂದಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಕ್ಷಿಣ ಭಾರತ ರಾಜ್ಯಗಳ ಪೊಲೀಸ್ ಮಹಾನಿದೇರ್ಶಕರ ಸಮನ್ವಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ಹಗಲಿರುಳು ಎನ್ನದೇ ಕಾರ್ಯನಿರ್ವಹಿಸುವ ಪೊಲೀಸ್ ಪಡೆಗಳ ಕಾರ್ಯವನ್ನು ಶ್ಲಾಘಿಸಿದ ಮುಖ್ಯಮಂತ್ರಿಗಳು, ಸೈಬರ್ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪೊಲೀಸರು ಕ್ರಿಯಾತ್ಮಕವಾಗಿರಬೇಕು. ಕಳೆದ ಹಲವು ವರ್ಷಗಳಲ್ಲಿ ಸೈಬರ್ ದಾಳಿಗಳು ವಿವಿಧ ರೀತಿಯಲ್ಲಿ ಹೆಚ್ಚಾಗುತ್ತಿದ್ದು, ಆನ್ಲೈನ್ ಮೂಲಕ ಮೋಸ ಮಾಡುವುದು ಅಧಿಕವಾಗಿದೆ. ಇದು ವ್ಯಕ್ತಿಗತವಾಗಿ ಹಾನಿಯಲ್ಲದೇ ರಾಷ್ಟಿçÃಯ ಭದ್ರತೆಗೂ ಅಪಾಯಕಾರಿಯಾಗಿದೆ ಎಂದರು. ಅತ್ಯಾಧುನಿಕ ವಿಧಿವಿಜ್ಞಾನ ಸಾಧನಗಳು ಸೈಬರ್ ಅಪರಾಧಿಗಳನ್ನು ಮಟ್ಟಹಾಕಲು ಸಹಾಯಕವಾಗಿವೆ. ೨೦೦೩ ರಲ್ಲಿ ಸೈಬರ್ ಅಪರಾಧಗಳ ಪೊಲೀಸ್ ಠಾಣೆಯನ್ನು ತೆರೆದ ಮೊದಲ ರಾಜ್ಯ ಕರ್ನಾಟಕ. ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಸೈಬರ್ ಅಪರಾಧ ತಡೆಗಾಗಿ ಸಿಇಎನ್ ಪೊಲೀಸ್ ಠಾಣೆಗಳನ್ನು ರಾಜ್ಯ ಹೊಂದಿದೆ. ಇಂಥ ಪ್ರಕರಣಗಳನ್ನು ನಿರ್ವಹಿಸಲೆಂದೇ ಸೈಬರ್ ಠಾಣೆಯ ಪೋಲಿಸ್ ಅಧಿಕಾರಿಗಳು ವಿಶೇಷ ತರಬೇತಿ ಪಡೆದಿದ್ದಾರೆ ಎಂದರು. ನಮ್ಮ ದೇಶದ ಬುನಾದಿ ಹಾಗೂ ಸಮಾಜದ ಸಂರಚನೆಗೆ ಸವಾಲಾಗಿರುವ ಆಂತರಿಕ ಭದ್ರತಾ ವಿಷಯಗಳು ತಮ್ಮ ಸಂಪೂರ್ಣ ಗಮನ ಮತ್ತು ಸಹಯೋಗ ಅಗತ್ಯ ಎಂದರು. ಕಾನೂನು ಸುವ್ಯವಸ್ಥೆ ಕಾಪಾಡುವುದು, ಸಾರ್ವಜನಿಕ ವ್ಯವಸ್ಥೆ ಹಾಗೂ ತಮ್ಮ ಪ್ರದೇಶದ ಪ್ರತಿಯೊಬ್ಬರ ಸುರಕ್ಷತೆ ಹಾಗೂ ಭದ್ರತೆಯ ಜವಾಬ್ದಾರಿಯನ್ನು ಹೊತ್ತಿರುವ ಪೊಲೀಸರಿಂದ ಅಚಲ ಬದ್ಧತೆ, ಸಮರ್ಪಣೆ ಹಾಗೂ ಕರ್ತವ್ಯಪರತೆಯನ್ನು ನಿರೀಕ್ಷಿಸಲಾಗುತ್ತದೆ ಎಂದರು. ಇತ್ತೀಚಿನ ದಿನಗಳಲ್ಲಿ ಸಾಂಪ್ರದಾಯಿಕ ಅಪರಾಧಿ ಚಟುವಟಿಕೆಗಳಿಂದ ಹಿಡಿದು ಡಿಜಿಟಲ್ ವಲಯದ ಬೆದರಿಕೆಗಳನ್ನೂ ದೇಶ ಎದುರಿಸುತ್ತಿದೆ. ಆಧುನಿಕ ಸಮಾಜದ ಸಂಕೀರ್ಣತೆಗಳೂ ಕೂಡ ಹೊಸ ಮಾದರಿಯ ಅಪರಾಧಗಳನ್ನು ಹೆಚ್ಚಿಸಿವೆ. ಇದರಿಂದಾಗಿ ಪೊಲೀಸ್ ತಂತ್ರಗಾರಿಕೆಯಲ್ಲಿಯೂ ನಿರಂತರವಾಗಿ ಮಾರ್ಪಾಡು ತರಬೇಕಾದ ಅವಶ್ಯಕತೆ ಇದೆ ಎಂದರು.
ಎರಡು ಗುಂಪುಗಳ ನಡುವೆ ಗುಂಡಿನ ಚಕಮಕಿ; ಐವರು ಸಾವು
ದಾತಿಯಾ, ಸೆ. ೧೩: ಮಧ್ಯಪ್ರದೇಶದ ದಾತಿಯಾ ಜಿಲ್ಲೆಯಲ್ಲಿ ಬುಧವಾರ ಸಾಕು ಪ್ರಾಣಿಗಳನ್ನು ಮೇಯಿಸುವ ವಿಚಾರಕ್ಕೆ ಸಂಬAಧಿಸಿದAತೆ ಎರಡು ಗುಂಪುಗಳು ನಡುವೆ ಗುಂಡಿನ ಚಕಮಕಿ ನಡೆದಿದ್ದು, ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ ಮತ್ತು ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಜ್ಯದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರ ತವರು ಕ್ಷೇತ್ರದ ರೆಂಡಾ ಗ್ರಾಮದಲ್ಲಿ ಇಂದು ಬೆಳಗ್ಗೆ ೯ ಗಂಟೆ ಸುಮಾರಿಗೆ ಡಾಂಗಿ ಮತ್ತು ಪಾಲ್ ಸಮುದಾಯದ ಸದಸ್ಯರ ನಡುವೆ ಗುಂಡಿನ ಚಕಮಕಿ ನಡೆದಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಮೂರು ದಿನಗಳ ಹಿಂದೆ ಸಾಕು ಪ್ರಾಣಿಗಳನ್ನು ಮೇಯಿಸುವ ವಿಚಾರದಲ್ಲಿ ಪ್ರಕಾಶ್ ಡಾಂಗಿ ಮತ್ತು ಪ್ರೀತಮ್ ಪಾಲ್ ನಡುವೆ ವಾಗ್ವಾದ ನಡೆದಿತ್ತು ಎಂದು ದಾತಿಯಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಪ್ರದೀಪ್ ಶರ್ಮಾ ಅವರು ತಿಳಿಸಿದ್ದಾರೆ.