ಕುಶಾಲನಗರ, ಸೆ. ೧೩: ತಾ. ೧೫ ರಂದು ಅಂತರರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮ ರಾಜ್ಯದ ಎಲ್ಲೆಡೆ ಏಕಕಾಲದಲ್ಲಿ ನಡೆಯಲಿದೆ ಎಂದು ಕುಶಾಲನಗರ ತಾಲೂಕು ತಹಶೀಲ್ದಾರ್ ಕಿರಣ್ ಗೌರಯ್ಯ ತಿಳಿಸಿದ್ದಾರೆ.
ಅವರು ಕುಶಾಲನಗರ ಸಮೀಪದ ಮುಳ್ಳುಸೋಗೆ ತಾಲೂಕು ಪಂಚಾಯಿತಿ ಕಾರ್ಯಾಲಯದ ಸಭಾಂಗಣದಲ್ಲಿ ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿ ಎಲ್ಲಾ ಸರ್ಕಾರಿ ಕಚೇರಿಗಳು ಇಲಾಖೆಗಳು ಸಂಘ-ಸAಸ್ಥೆಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ತಾ. ೧೫ ರಂದು ಬೆಳಿಗ್ಗೆ ೧೦ ಗಂಟೆಗೆ ಏಕಕಾಲದಲ್ಲಿ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಸಂಬAಧ ಪ್ರತಿಯೊಬ್ಬರೂ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಅವರು ಮನವಿ ಮಾಡಿದರು.
ಕಾರ್ಯಕ್ರಮಕ್ಕೆ ಸಂಬAಧಿಸಿದAತೆ ಸಮಾಜ ಕಲ್ಯಾಣ ಇಲಾಖೆ ಮೂಲಕ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಎಲ್ಲಾ ಸಂಘ ಸಂಸ್ಥೆಗಳ ಹಾಗೂ ಸಾರ್ವಜನಿಕರ ಬಗ್ಗೆ ನೋಂದಾಯಿಸಿಕೊಳ್ಳುವ ಕಾರ್ಯ ನಡೆಯುತ್ತಿದೆ. ಪ್ರತಿಯೊಂದು ಗ್ರಾಮ ಹಾಗೂ ವಿಶೇಷವಾಗಿ ಹಾಡಿಗಳಲ್ಲಿ ಈ ಕಾರ್ಯಕ್ರಮಗಳು ನಡೆಯುವಂತೆ ಸಂಘ-ಸAಸ್ಥೆಗಳು ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಅವರು ಕೋರಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಬಾಲಕೃಷ್ಣ ರೈ, ಪೊಲೀಸ್ ಇನ್ಸ್ಪೆಕ್ಟರ್ ಯಶವಂತ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಿಬ್ಬಂದಿಗಳು ಮತ್ತು ಸಂಘ ಸಂಸ್ಥೆ ಪ್ರತಿನಿಧಿಗಳು ಉಪಸ್ಥಿತರಿದ್ದರು.