ವೀರಾಜಪೇಟೆ, ಸೆ. ೧೩: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಗ್ಗಳದಲ್ಲಿ ಸುದೀರ್ಘವಾಗಿ ೧೮ ವರ್ಷಗಳ ಕಾಲ ಸೇವೆ ಸಲ್ಲಿಸಿದ ಶಿಕ್ಷಕಿ ಎಂ.ಪಿ. ಲತಾ ಅವರು ಸೇವೆಯಿಂದ ನಿವೃತ್ತರಾಗಿದ್ದು ಅವರನ್ನು ಶಾಲೆಯ ವತಿಯಿಂದ ಬೀಳ್ಕೊಡಲಾಯಿತು.
ಸಮಾರಂಭದಲ್ಲಿ ಶಿಕ್ಷಣ ಇಲಾಖೆ, ವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು. ಇದೇ ಸಂದರ್ಭ ಹೆಗ್ಗಳ ಪ್ರಾಥಮಿಕ ಹಾಗೂ ಪ್ರೌಢಶಾಲೆಗೆ ತಲಾ ೫,೦೦೦ ರೂಪಾಯಿಗಳನ್ನು ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಲು ನೀಡಿದ್ದಾರೆ. ಧ್ವನಿವರ್ಧಕದ ವ್ಯವಸ್ಥೆಯನ್ನು ಕೂಡ ಇವರು ಮಾಡಿದ್ದಾರೆ.
ಶಿಕ್ಷಕ ವೃತ್ತಿ ತೃಪ್ತಿ ತಂದಿದೆ ಎಂದು ಲತಾ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಬೀಳ್ಕೊಡುಗೆ ಸಮಾ ರಂಭದಲ್ಲಿ ಶಾಲೆಯ ಶಿಕ್ಷಕ ವೃಂದ ದವರು, ಎಸ್ಡಿಎಂಸಿ ಸದಸ್ಯರು, ವಿದ್ಯಾರ್ಥಿಗಳು, ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಪ್ರಕಾಶ್, ಸಮನ್ವಯಾಧಿಕಾರಿ ವನಜಾಕ್ಷಿ, ಸಿಆರ್ಪಿ ವೆಂಕಟೇಶ್, ಬಿಆರ್ಪಿ ಗೀತಾಂಜಲಿ ಸೇರಿದಂತೆ ಇತರರು ಇದ್ದರು.