ಕೂಡಿಗೆ, ಸೆ. ೧೪: ಮದಲಾಪುರ ಗ್ರಾಮದಲ್ಲಿರುವ ಹಾಲು ಉತ್ಪಾದಕರ ಸಹಕಾರ ಸಂಘದ ೨೦೨೨-೨೩ನೇ ಸಾಲಿನ ವಾರ್ಷಿಕ ಮಹಾಸಭೆ ತಾ.೧೫ ರಂದು (ಇಂದು) ಸಂಘದ ಆವರಣದಲ್ಲಿ ಸಂಘದ ಅಧ್ಯಕ್ಷ ಎಸ್.ಆರ್. ಸುನೀಲ್ ರಾವ್ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಹಾಸನ ಹಾಲು ಒಕ್ಕೂಟದ ಜಿಲ್ಲಾ ನಿರ್ದೇಶಕ ಕೆ.ಕೆ. ಹೇಮಂತ್ ಕುಮಾರ್, ಒಕ್ಕೂಟದ ವಿಸ್ತರಣಾಧಿಕಾರಿ ಬಿ.ವಿ. ವೀಣಾ, ಅಗಮಿಸಲಿ ದ್ದಾರೆ ಎಂದು ಸಂಘದ ಕಾರ್ಯದರ್ಶಿ ಎಂ.ಎನ್. ಯೋಗೇಶ ತಿಳಿಸಿದ್ದಾರೆ.