ಮಡಿಕೇರಿ, ಸೆ. ೧೪ : ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಮುಖರ ನಿಯೋಗ ನಿನ್ನೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರುಗಳನ್ನು ಭೇಟಿ ಮಾಡಿ ಚರ್ಚೆ ನಡೆಸಿತು.

ಕೊಡಗು ಜಿಲ್ಲೆಯ ಮುಂದಿನ ಜಿಲ್ಲಾ ಪಂಚಾಯತ್ ಚುನಾವಣೆಗೆ ಒಟ್ಟು ೨೯ ಚುನಾವಣಾ ಕ್ಷೇತ್ರಗಳ ಪೈಕಿ ೪ ಕ್ಷೇತ್ರಗಳನ್ನು ಕೈ ಬಿಟ್ಟಿದ್ದು ಅದನ್ನು ಮರುಪರಿಶೀಲಿಸಿ ಹಿಂದಿನAತೆ ೨೯ ಕ್ಷೇತ್ರಗಳಿಗೂ ಚುನಾವಣೆ ನಡೆಸಬೇಕೆಂದು ಮತ್ತು ಅಭಿವೃದ್ಧಿಯ ವಿಷಯದಲ್ಲಿ ಕೊಡಗು ಜಿಲ್ಲೆಯು ಹಿಂದುಳಿದಿದ್ದು ಸರ್ಕಾರವು ಈ ಎರಡು ವಿಚಾರಗಳಿಗೆ ಸ್ಪಂದಿಸಬೇಕೆAದು ಒತ್ತಾಯಿಸಿ ಇಬ್ಬರಿಗೂ ಪ್ರತ್ಯೇಕ ಮನವಿ ಸಲ್ಲಿಸಲಾಯಿತು.

ಕೊಡಗು ಜಿಲ್ಲೆಯ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಲು ಮತ್ತು ಮಳೆ ಕೊರತೆ ಹಿನ್ನೆಲೆ ಸರ್ಕಾರ ಘೋಷಣೆ ಮಾಡಿರುವ ಬರಪೀಡಿತ ಪ್ರದೇಶಗಳಿಗೆ ಹೆಚ್ಚಿನ ಅನುದಾನ ನೀಡಬೇಕೆಂದು ಮುಖ್ಯಮಂತ್ರಿ ಯವರೊಂದಿಗೆ ಚರ್ಚಿಸಲಾಯಿತು.

(ಮೊದಲ ಪುಟದಿಂದ) ಈ ಸಂದರ್ಭ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್ ಬೋಸರಾಜು, ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಮತ್ತು ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಎ.ಎಸ್ ಪೊನ್ನಣ್ಣ. ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ, ಜಿಲ್ಲಾ ಕಾಂಗ್ರೆಸ್‌ನ ಅಧ್ಯಕ್ಷ ಧರ್ಮಜ ಉತ್ತಪ್ಪ, ವೀಣಾ ಅಚ್ಚಯ್ಯ, ಟಿ.ಪಿ. ರಮೇಶ್, ಹೆಚ್.ಎಸ್. ಚಂದ್ರಮೌಳಿ, ಕೆ.ಪಿ. ಚಂದ್ರಕಲಾ, ಶಿವು ಮಾದಪ್ಪ, ವಿ.ಪಿ. ಶಶಿಧರ್ ಸೇರಿದಂತೆ ಇತರ ಪ್ರಮುಖರು ಪದಾಧಿಕಾರಿಗಳು ಪಾಲ್ಗೊಂಡಿದ್ದರು.