ಕೂಡಿಗೆ, ಸೆ. ೧೪: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೋಮವಾರಪೇಟೆ, ಪೋಷಣಾ ಅಭಿಯಾನ, ಪೌಷ್ಟಿಕ ಆಹಾರ ಸಪ್ತಾಹದಡಿಯಲ್ಲಿ ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ೧೦ ಅಂಗನವಾಡಿ ಕೇಂದ್ರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ಕೂಡುಮಂಗಳೂರು ಅಂಗನವಾಡಿ ಕೇಂದ್ರದ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ. ಭಾಸ್ಕರ್ ನಾಯಕ್ ನೆರವೇರಿಸಿ ಮಾತನಾಡಿ, ಸರ್ಕಾರದ ಯೋಜನೆಯನ್ನು ಮಹಿಳೆಯರು ಸದುಪಯೋಗ ಪಡಿಸಿಕೊಳ್ಳುವ ಮೂಲಕ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ಮನವಿ ಮಾಡಿದರು.
ಈ ಸಂದರ್ಭ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಸಾವಿತ್ರವ್ವ ಇಲಾಖೆಯ ಮಾಹಿತಿಯನ್ನು ತಿಳಿಸಿದರು. ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯರಾದ ಎಂ.ಡಿ. ಹರೀಶ್, ಕೆ.ಎಸ್. ಮಂಜು, ಚೈತ್ರಾ ಮಂಜುನಾಥ, ಅಭಿವೃದ್ಧಿ ಅಧಿಕಾರಿ ಸಂತೋಷ್, ಘೋಷಣಾ ಅಭಿಯಾನ ತಾಲೂಕು ಸಂಯೋಜಕ ಕೆ.ಎನ್. ರಂಜಿತ್, ಆರೋಗ್ಯ ಇಲಾಖೆ ಅಧಿಕಾರಿಗಳಾದ ಮುಖೇಶ್, ಸಗೀನ್ ಸೇರಿದಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ೧೦ ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ವ್ಯಾಪ್ತಿಯ ೧೫ ಮಂದಿ ಗರ್ಭಿಣಿ ಮಹಿಳೆಯರಿಗೆ ಸೀಮಂತ ಕಾರ್ಯವನ್ನು ನೆರವೇರಿಸಲಾಯಿತು.