ಮಡಿಕೇರಿ, ಸೆ. ೧೪: ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆಯ ಕೊರತೆಯಿಂದಾಗಿ ಆಗಿರುವ ಪರಿಸ್ಥಿತಿಯನ್ನು ಆಧರಿಸಿ ರಾಜ್ಯದಲ್ಲಿ ಕೂಲಂಕಶ ಅಧ್ಯಯನದ ಪ್ರಕಾರ ಒಟ್ಟು ೧೬೧ ತಾಲೂಕುಗಳನ್ನು ಬರಪೀಡಿತ ತಾಲೂಕುಗಳು ಎಂದು ಪರಿಗಣಿಸಿ ಸರಕಾರ ಘೋಷಣೆ ಮಾಡಿದೆ. ಇದರಂತೆ ಕೊಡಗು ಜಿಲ್ಲೆಯ ಮಡಿಕೇರಿ, ವೀರಾಜಪೇಟೆ ಹಾಗೂ ಕುಶಲನಗರ ತಾಲೂಕನ್ನು ಬರಪೀಡಿತ ಎಂದು ಪರಿಗಣಿಸಲಾಗಿದ್ದು, ಸರಕಾರ ಅಧಿಕೃತವಾಗಿ ಘೋಷಣೆ ಮಾಡಿದೆ.

ಒಟ್ಟಾರೆಯಾಗಿ ರಾಜ್ಯದ ೩೧ ಜಿಲ್ಲೆಗಳ ೨೩೬ ತಾಲೂಕುಗಳ ಪೈಕಿ ೧೯೫ ತಾಲೂಕುಗಳಲ್ಲಿ ಬರದ ಪರಿಸ್ಥಿತಿ ಕಂಡುಬAದಿರುವುದಾಗಿ ಸಮೀಕ್ಷೆಯಲ್ಲಿ ಹೇಳಲಾಗಿದೆ. ಈ ಪೈಕಿ ಇದೀಗ ೧೬೧ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ೩೪ ತಾಲೂಕುಗಳನ್ನು ಸಾಧಾರಣ ಬರಪೀಡಿತ ತಾಲೂಕು ಎಂದು ಘೋಷಿಸಲಾಗಿದೆ.

ಜಿಲ್ಲಾಧಿಕಾರಿಗಳಿಂದ ಬೆಳೆಹಾನಿ ಸಮೀಕ್ಷೆಯ (ಉಡಿouಟಿಜ ಖಿಡಿuಣhiಟಿg) ವರದಿಯ ಆಧಾರದ ಹಿನ್ನೆಲೆಯಲ್ಲಿ ಈ ಘೋಷಣೆ ಮಾಡಲಾಗಿದೆ. ಕೊಡಗು ಜಿಲ್ಲೆಗೆ ಸಂಬAಧಿಸಿದAತೆ ಈ ಬಾರಿ ಮುಂಗಾರು ಮಳೆ ವಾಡಿಕೆಗಿಂತ ತೀರಾ ಕಡಿಮೆಯಾಗಿದ್ದು, ಇಡೀ ಜಿಲ್ಲೆಯನ್ನು (ಐದು ತಾಲೂಕುಗಳು) ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ರೈತ ಸಂಘಟನೆಗಳು, ಬೆಳೆಗಾರರ ಸಂಘಗಳಿAದ ಒತ್ತಾಯ ಕೇಳಿಬಂದಿತ್ತು. ಆದರೆ, ಇದೀಗ ಸರಕಾರ ನಡೆಸಿರುವ ಬರ ಕುರಿತಾದ ಮಾರ್ಗಸೂಚಿಯ ಸಮೀಕ್ಷೆಯ ವರದಿಯಂತೆ ಮಡಿಕೇರಿ- ವೀರಾಜಪೇಟೆ ಹಾಗೂ ಕುಶಾಲನಗರ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ.

ಕೇಂದ್ರ ಸರಕಾರದ ಬರ ಕೈಪಿಡಿ-೨೦೨೦ರನ್ವಯ ಕಡ್ಡಾಯ ಮತ್ತು ತತ್ಪರಿಣಾಮ ಸೂಚಕಗಳ ನಿರಂತರ ಮೇಲ್ವಿಚಾರಣೆಯ ಆಧಾರದ ಮೇಲೆ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಏSಓಆಒಅ) ತಾ.೧.೬.೨೦೨೩ರಿಂದ ೧೯.೦೮.೨೦೨೩ರ ಅವಧಿಯ ವರದಿಯಂತೆ ಶೇ.೨೩ರಷ್ಟು ಮಳೆ ಕೊರತೆ ಕಂಡುಬAದಿದೆ. ಬರ ಕೈಪಿಡಿ-೨೦೨೦ರ ಮಾರ್ಗಸೂಚಿಯನ್ವಯ ಬರ ಘೋಷಿಸಲು ಸೂಚಿಸಿರುವ ಕಡ್ಡಾಯ ಮಾನದಂಡಗಳಾದ ಶೇ.೬೦ಕ್ಕಿಂತ ಹೆಚ್ಚು ಮಳೆ ಕೊರತೆ ಅಥವಾ ಸತತ ಮೂರು ವಾರಗಳಲ್ಲಿ ಶುಷ್ಕ ವಾತಾವರಣ, ಬೆಳೆ ಬಿತ್ತನೆ ಪ್ರದೇಶ ಹಾಗೂ ಜಲ ಸಂಪನ್ಮೂಲ ಸೂಚ್ಯಂಕದಲ್ಲಿನ ತೀವ್ರತೆಯನ್ನು ಆಧರಿಸಿ ಮೌಲ್ಯಮಾಪನ ಮಾಡಿ ಬರಪರಿಸ್ಥಿತಿಯನ್ನು ಅಂದಾಜಿಸಲಾಗಿದೆ.