ಶನಿವಾರಸAತೆ, ಸೆ. ೧೪: ಪಟ್ಟಣದ ಬಾಪೂಜಿ ವಿದ್ಯಾಸಂಸ್ಥೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸಂಭ್ರಮದಿAದ ಆಚರಿಸಲಾಯಿತು.
ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಲಿಂಗರಾಜ್ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯ ಕುರಿತು ಮಾತನಾಡಿದರು.
ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಶ್ರೀಕೃಷ್ಣ-ರಾಧೆಯ ವೇಷ ಧರಿಸಿ ಕಾರ್ಯಕ್ರಮಕ್ಕೆ ಮೆರಗು ತಂದರು. ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ, ಸಿಹಿ ಹಂಚಿ ಪ್ರೋತ್ಸಾಹಿಸಲಾಯಿತು.
ಸಂಸ್ಥೆಯ ಕಾರ್ಯದರ್ಶಿ ಮನೋಹರ್, ನಿರ್ದೇಶಕರು, ಮುಖ್ಯಶಿಕ್ಷಕ ಉಲ್ಲಾಸ್, ಶಿಕ್ಷಕರು, ಸಿಬ್ಬಂದಿ, ಪೋಷಕರು ಹಾಜರಿದ್ದರು.