ಶನಿವಾರಸಂತೆ, ಸೆ. ೧೪: ಪಟ್ಟಣದ ಶ್ರೀ ವಿಘ್ನೇಶ್ವರ ಬಾಲಕಿಯರ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಕಾಲೇಜು ಕ್ಯಾಂಪಸ್‌ನಲ್ಲಿ ಸಾಂಪ್ರದಾಯಿಕ ದಿನವನ್ನು ಸಂಭ್ರಮ-ಸಡಗರದಿAದ ಆಚರಿಸಿದರು.

ಭಾರತೀಯ ಸಂಸ್ಕೃತಿಯನ್ನು ಪ್ರತಿನಿಧಿಸುವಂತೆ ವಿದ್ಯಾರ್ಥಿನಿಯರು ಬಣ್ಣಬಣ್ಣದ ಸೀರೆ, ಲಂಗದಾವಣಿ, ಇತರೆ ಸಾಂಪ್ರದಾಯಿಕ ಉಡುಗೆ-ತೊಡುಗೆ ಧರಿಸಿ ಬಂದು ಸಂಭ್ರಮಿಸಿದರು.

ಕಾಲೇಜು ಪ್ರಾಂಶುಪಾಲ ಟಿ.ಪಿ. ಶಿವಪ್ರಕಾಶ್ ಮಾತನಾಡಿ, ಇಂದಿನ ಫ್ಯಾಷನ್ ಯುಗದಲ್ಲಿ ಯುವಜನತೆ ಆಧುನಿಕ ಉಡುಗೆ-ತೊಡುಗೆಗಳಿಗೆ ಮಾರು ಹೋಗುತ್ತಿದ್ದು ಸಂಸ್ಕೃತಿ, ಸಂಸ್ಕಾರವನ್ನೇ ಮರೆಯುತ್ತಿದ್ದಾರೆ. ಭಾರತೀಯ ಸಂಸ್ಕೃತಿ, ಸಂಪ್ರದಾಯದ ಬಗ್ಗೆ ವಿದ್ಯಾರ್ಥಿನಿಯರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾಲೇಜು ಕ್ಯಾಂಪಸ್‌ನಲ್ಲಿ ಸಾಂಪ್ರದಾಯಿಕ ದಿನವನ್ನು ಆಚರಿಸಲಾಗುತ್ತಿದೆ ಎಂದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರು, ಶಿಕ್ಷಕರು, ಸಿಬ್ಬಂದಿ ಹಾಜರಿದ್ದರು.