ಮಡಿಕೇರಿ, ಸೆ. ೧೪: ಮದುವೆ ಸಮಾರಂಭದಲ್ಲಿ ಜಗಳ ಏರ್ಪಟ್ಟು ಗುಂಪೊAದು ಇನ್ನೊಂದು ಗುಂಪಿನ ಮೇಲೆ ಹಲ್ಲೆ ಮಾಡಿದ ಘಟನೆ ಕಗ್ಗೋಡ್ಲಿನಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬAಧಿಸಿದAತೆ ಮೂವರು ಆರೋಪಿಗಳನ್ನು ಮಡಿಕೇರಿ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ತಲೆಮರೆಸಿಕೊಂಡಿರುವ ಓರ್ವ ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಕಗ್ಗೋಡ್ಲಿನ ಅಂಬರ ಹಾಲ್ನಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭದಲ್ಲಿ ಕ್ಷÄಲ್ಲಕ ಕಾರಣಕ್ಕೆ ಅಭಿ ಹಾಗೂ ಇನ್ನಿತರರ ಮೇಲೆ ಹಲ್ಲೆ ಮಾಡಿದ ಅಜಿತ್, ಪವನ್, ಚಂದನ್ ಎಂಬವರನ್ನು ಪೊಲೀಸರು ಬಂಧಿಸಿದ್ದು, ಸುಬ್ಬಯ್ಯ ಎಂಬಾತ ತಲೆಮರೆಸಿಕೊಂಡಿದ್ದು ಆತನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ ೩೦೭ ಹಾಗೂ ಜಾತಿ ನಿಂದನೆ ಆರೋಪದಡಿ ಪ್ರಕರಣ ದಾಖಲಾಗಿದೆ.