ಮಡಿಕೇರಿ, ಸೆ. ೧೪: ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ ಐಎಎಸ್-ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿ ಸಂಬAಧ “ಆನ್‌ಲೈನ್” ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ ೨೦೨೩-೨೪ನೇ ಸಾಲಿಗೆ ಐ.ಎ.ಎಸ್/ಕೆ.ಎ.ಎಸ್. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಭೇತಿ ಸಂಬAಧ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್‌ನಲ್ಲಿ hಣಣಠಿs://sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಕೂಡಲೇ ಇದರ ಸದುಪಯೋಗ ಪಡಿಸಿಕೊಳ್ಳಲು ಕೋರಿದೆ. ರಾಜ್ಯದ ನಿವಾಸಿಯಾಗಿರಬೇಕು. ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು (ಮುಸ್ಲಿಂ, ಕ್ರ‍್ರಿಶ್ಚಿಯನ್, ಬೌದ್ಧ, ಜೈನ್, ಪಾರ್ಸಿ, ಸಿಖ್) ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಟ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಅಭ್ಯರ್ಥಿಯ ವಯೋಮಿತಿ ೨೧ ರಿಂದ ೩೫ ವರ್ಷಗಳು ಮೀರಿರಬಾರದು. ಈಗಾಗಲೇ ಇಲಾಖೆ-ಖಾಸಾಗಿ ಸಂಸ್ಥೆಗಳಿAದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆದು ಸ್ವಯಂ ಅಧ್ಯಯನ ನಡೆಸುತ್ತಿರುವ ಅಭ್ಯರ್ಥಿಗಳಿಗೂ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರಿಯಲ್ಲಿರುವ ಅಭ್ಯರ್ಥಿಗಳು ಅರ್ಹರಿರುವುದಿಲ್ಲ. ಅರ್ಜಿ ಸಲ್ಲಿಸಲು ತಾ. ೧೬ ಕೊನೆ ದಿನವಾಗಿದೆ. ದೂರವಾಣಿ ಸಂಖ್ಯೆ: ೦೮೨೭೨-೨೨೫೫೨೮/೨೨೦೨೧೪ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.