ಮಡಿಕೇರಿ, ಸೆ. ೧೪: ಗೌರಿ-ಗಣೇಶ ಹಬ್ಬ ಆಚರಣೆ ಸಂಬAಧ ಅಗತ್ಯ ಮುಂಜಾಗ್ರತೆ ವಹಿಸುವ ನಿಟ್ಟಿನಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ ಜಿ.ಪಂ. ಸಿಇಓ ವರ್ಣಿತ್ ನೇಗಿ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಪೂರ್ವಭಾವಿ ಸಭೆ ನಡೆಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬವನ್ನು ಆಚರಿಸುವ ನಿಟ್ಟಿನಲ್ಲಿ ಎಲ್ಲರೂ ಜಿಲ್ಲಾಡಳಿತದ ಜೊತೆ ಸಹಕರಿಸುವಂತೆ ವರ್ಣಿತ್ ನೇಗಿ ಕೋರಿದರು.
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಗೌರಿ-ಗಣೇಶ ಹಬ್ಬ ಆಚರಿಸುವ ಸಂಬAಧ ಹಲವು ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಅದನ್ನು ಪಾಲಿಸುವಂತೆ ಜಿ.ಪಂ. ಸಿಇಓ ಮನವಿ ಮಾಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಮಾತನಾಡಿ ಪೊಲೀಸ್ ಇಲಾಖೆಯಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು. ಆ ನಿಟ್ಟಿನಲ್ಲಿ ಕಾನೂನು ಮತ್ತು ನಿಯಮಗಳನ್ನು ಚಾಚು ತಪ್ಪದೆ ಪಾಲಿಸಬೇಕು. ಏನಾದರೂ ಸಮಸ್ಯೆಗಳು ಇದ್ದಲ್ಲಿ ಗಮನಕ್ಕೆ ತರುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಡಿಕೇರಿ ನಗರದ ಚೇತನ್ ಅವರು ನಗರದ ಗೌರಿ ಕೆರೆಯಲ್ಲಿ ಹೂಳು ತುಂಬಿದ್ದು, ಹೂಳು ತೆಗೆಯಬೇಕಿದೆ. ಜೊತೆಗೆ ಸ್ವಚ್ಛತಾ ಕಾರ್ಯ ಆಗಬೇಕು. ವಿದ್ಯುತ್ ವ್ಯವಸ್ಥೆ ಮಾಡಬೇಕು. ಹದಗೆಟ್ಟಿರುವ ರಸ್ತೆಯನ್ನು ಸರಿಪಡಿಸ ಬೇಕು ಎಂದು ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಅವರು ಸ್ಥಳೀಯ ಸಂಸ್ಥೆಗಳು ಕಾರ್ಯ ನಿರ್ವಹಿಸಲಿವೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸುವಂತೆ ಸೂಚಿಸಿದರು.
ನಗರಸಭೆ ಸದಸ್ಯ ಅರುಣ್ ಶೆಟ್ಟಿ ಮಾತನಾಡಿ, ಗೌರಿ-ಗಣೇಶ ವಿಸರ್ಜನೆ ಸಂದರ್ಭದಲ್ಲಿ ನಗರದ ಗಣಪತಿ ಬೀದಿಯಿಂದ ಮಹದೇವಪೇಟೆ ಮತ್ತು ಬನ್ನಿ ಮಂಟಪದವರೆಗೆ ಸಂಚಾರ ದಟ್ಟಣೆಯನ್ನು ನಿಯಂತ್ರಣ ಮಾಡ ಬೇಕು ಎಂದರು.
ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ. ಸುಕುಮಾರ್ ಮಾತನಾಡಿ, ಹಾಕತ್ತೂರು ಬಳಿಯ ತೊಂಬತ್ತುಮನೆಯ ಭಜನಾ ಮಂದಿರ ಬಳಿ ವಿದ್ಯುತ್ ಮಾರ್ಗ ಹಾದು ಹೋಗಿದ್ದು, ವಿದ್ಯುತ್ ತಂತಿ ತಾಗುವಂತಿದೆ. ಇದನ್ನು ಸರಿಪಡಿಸ ಬೇಕು ಎಂದು ಗಮನ ಸೆಳೆದರು.
ಸಿದ್ದಾಪುರದ ಪ್ರಮುಖರೊಬ್ಬರು ಗೌರಿ-ಗಣೇಶ ವಿಸರ್ಜನೆ ಸಂದರ್ಭ ದಲ್ಲಿ ಲೈಟಿಂಗ್ ವ್ಯವಸ್ಥೆ ಮಾಡುವಂತಾ ಗಬೇಕು ಎಂದು ಕೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿ.ಪಂ. ಸಿಇಓ ಅವರು ಸ್ಥಳೀಯವಾಗಿ ಕೆಲವು ಕಾಮಗಾರಿಗಳು ಆಗಬೇಕಿದ್ದಲ್ಲಿ, ಸ್ಥಳೀಯ ಗ್ರಾ.ಪಂ., ಪುರಸಭೆ, ಪಟ್ಟಣ ಪಂಚಾಯಿತಿ, ನಗರಸಭೆ ಗಮನಕ್ಕೆ ತರುವಂತೆ ಸಲಹೆ ನೀಡಿದರು.
ಸಭೆಯ ಆರಂಭದಲ್ಲಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರು ಬಣ್ಣ ರಹಿತ ಮಣ್ಣಿನ ಗಣೇಶ ಮೂರ್ತಿಗಳೊಂದಿಗೆ ಹಬ್ಬ ಆಚರಿಸಿ. ನಂತರ ಸ್ಥಳೀಯ ಸಂಸ್ಥೆಗಳು ನಿಗದಿಪಡಿಸಿದ ಸ್ಥಳಗಳಲ್ಲಿಯೇ ಮೂರ್ತಿ ವಿಸರ್ಜಿಸಬೇಕು.
ನಗರ ಪಟ್ಟಣಗಳಲ್ಲಿ ಅನಧಿಕೃತ ಫ್ಲೆಕ್ಸ್, ಪ್ಲಾಸ್ಟಿಕ್ ಬ್ಯಾನರ್ಗಳನ್ನು ಅಳವಡಿಸಲು ಅನುಮತಿ ಪಡೆಯಬೇಕು. ಸಾರ್ವಜನಿಕವಾಗಿ ಗಣೇಶ ವಿಗ್ರಹಗಳನ್ನು ಇಡಲು ಇಚ್ಚಿಸುವ ಸಮಿತಿಯವರು ಉತ್ಸವ ಆಚರಿಸಲು ಬೇಕಾಗುವ ಪೂರ್ವ ತಯಾರಿಗೆ ಸಂಬAಧಿಸಿದAತೆ, ಧ್ವನಿವರ್ಧಕಗಳಿಗೆ ಸಂಬAಧಿಸಿದAತೆ ಹಾಗೂ ಇತರೆ ಪರವಾನಗಿಗಳಿಗೆ ಸಂಬAಧಿಸಿದAತೆ ಸಕ್ಷಮ ಪ್ರಾಧಿಕಾರಗಳಿಂದ ಅನುಮೋದನೆ ಪಡೆಯುವುದು ಕಡ್ಡಾಯವಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ತಿಳಿಸಿದರು.
ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕ ಗಣೇಶ ಪೆಂಡಾಲ್ಗಳಲ್ಲಿ ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳಾದ ಬಲೂನ್ಗಳು, ಬಲೂನ್ಗಳಿಗೆ ಬಳಸುವ ಪ್ಲಾಸ್ಟಿಕ್ ಸ್ಟಿಕ್ಗಳು, ಪ್ಲಾಸ್ಟಿಕ್ ಕ್ಯಾಂಡಿ ಸ್ಟಿಕ್ಗಳು, ಪ್ಲಾಸ್ಟಿಕ್ ಐಸ್ಕ್ರೀಮ್ ಸ್ಟಿಕ್ಗಳು, ಅಲಂಕಾರಕ್ಕಾಗಿ ಬಳಸುವ ಪಾಲಿಸ್ಟೆöÊರೀನ್(ಥರ್ಮೊಕೋಲ್) ಬಳಸದಂತೆ ನಿಗಾವಹಿಸುವುದು.
ಎಲ್ಲಾ ರೀತಿಯ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ಗಳು (ಕಾಂಪೋಸ್ಟೇಬಲ್, ಬಯೋ ಡಿಗ್ರಿಡೇಬಲ್ ಇತರೆ) ಪ್ಲಾಸ್ಟಿಕ್ ಧ್ವಜಗಳು, ಅಂಟಿಕೊಳ್ಳುವ ಫಿಲ್ಮ್ಗಳು, ಡೈನಿಂಗ್ ಟೇಬಲ್ನಲ್ಲಿ ಹರಡಲು ಬಳಸುವ ಪ್ಲಾಸ್ಟಿಕ್ ಹಾಳೆಗಳು, ಸ್ಟಾçಗಳು, ಪ್ಲಾಸ್ಟಿಕ್ ಮೈಕ್ರೋ ಮಣಿಗಳಿಂದ ಮಾಡಿದ ವಸ್ತುಗಳು, ಪ್ಲಾಸ್ಟಿಕ್ ಪ್ಲೇಟ್ಗಳು, ಪ್ಲಾಸ್ಟಿಕ್ ಕಪ್ಗಳು ಮತ್ತು ಲೋಟಗಳು, ಪೋರ್ಕ್, ಚಮಚ, ಚಾಕುಗಳು, ಪ್ಲಾಸ್ಟಿಕ್ ಟ್ರೇಗಳು, ಸ್ವೀಟ್ ಬಾಕ್ಸ್ಗಳು, ಆಮಂತ್ರಣ ಪತ್ರಗಳು, ಸ್ವೀಟ್ ಪ್ಯಾಕೆಟ್ಗಳ ಸುತ್ತ ಸುತ್ತುವ ಪದರ ಅಥವಾ ಪ್ಯಾಕಿಂಗ್ ಫಿಲ್ಮ್ಗಳು ಮತ್ತು ಪ್ಲಾಸ್ಟಿಕ್ ಸ್ಟಿಕ್ಕರ್ಗಳನ್ನು ಬಳಸದಂತೆ ಕ್ರಮವಹಿಸುವುದು ಎಂದು ತಿಳಿಸಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.