ಅಮ್ಮತ್ತಿ, ಸೆ. ೧೪: ಕಾರ್ಮಾಡು ವಿನ ಶ್ರೀ ಚೌಡೇಶ್ವರಿ ಗಣಪತಿ ಸೇವಾ ಸಮಿತಿ ವತಿಯಿಂದ ೩೩ನೇ ವರ್ಷದ ಅದ್ಧೂರಿ ಗಣೇಶೋತ್ಸವ ವಿವಿಧ ಪೂಜಾ ಕಾರ್ಯಗಳೊಂದಿಗೆ ವಿಜೃಂ ಭಣೆಯಿಂದ ನಡೆಯಲಿದೆ ಎಂದು ಸಮಿತಿ ಪ್ರಮುಖರು ತಿಳಿಸಿದ್ದಾರೆ.
ತಾ. ೧೯ ರಂದು ಗಣೇಶನ ಪ್ರತಿಷ್ಠಾಪನೆಯು ನಡೆಯಲಿದ್ದು, ನಂತರದ ೧೨ ದಿನಗಳು ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿದೆ ಹಾಗೂ ಈ ಎಲ್ಲಾ ದಿನಗಳಲ್ಲಿ ರಾತ್ರಿ ಶಾಲಾ ಮಕ್ಕಳು ಸೇರಿದಂತೆ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ತಾ.೩೦ ರಂದು ರಾತ್ರಿ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಬೆಳಿಗ್ಗೆ ಕೆರೆಯಲ್ಲಿ ಉತ್ಸವ ಮೂರ್ತಿಯ ವಿಸರ್ಜನೆ ಮಾಡಲಾ ಗುತ್ತದೆ ಎಂದು ಸಮಿತಿ ಅಧ್ಯಕ್ಷ ವಿ. ಆರ್. ಸತೀಶ್ ತಿಳಿಸಿದ್ದಾರೆ.