ಶ್ರೀಮಂಗಲ, ಸೆ. ೧೪: ಪೊನ್ನಂಪೇಟೆ ತಾಲೂಕಿನ ಬಾಡಗರ ಕೇರಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಗಳಾದ ಕಿರಣ್ ಮತ್ತು ಆಕಾಶ್ ಅವರು ಅಥ್ಲೆಟಿಕ್ಸ್ನಲ್ಲಿ ಸಾಧನೆ ಮಾಡಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅಮ್ಮತ್ತಿ ಪ್ರೌಢಶಾಲಾ ಮೈದಾನದಲ್ಲಿ ನಡೆದ ತಾಲೂಕುಮಟ್ಟದ ಕ್ರೀಡಾಕೂಟದಲ್ಲಿ ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಹಾಗೂ ಎತ್ತರ ಜಿಗಿತದಲ್ಲಿ ದ್ವಿತೀಯ ಸ್ಥಾನವನ್ನು ಕಿರಣ್ ಪಡೆದಿದ್ದಾರೆ.
ಬಾಳೆಲೆಯ ಸರಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆದ ಕ್ರೀಡಾಕೂಟದಲ್ಲಿ ಕಿರಣ್ ೪೦೦ ಮೀಟರ್ ಓಟದಲ್ಲಿ ಪ್ರಥಮ ಹಾಗೂ ಆಕಾಶ್ ೨೦೦ ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ನೀಡಿ ಕಿರಣ್ ವೈಯಕ್ತಿಕ ಚಾಂಪಿಯನ್ ಶಿಪ್ ಪ್ರಶಸ್ತಿ ಪಡೆದರು.