ಪೊನ್ನಂಪೇಟೆ, ಸೆ. ೧೪: ಪೊನ್ನಂಪೇಟೆ ತಾಲೂಕಿನ ಬಾಳೆಲೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಬೆಕ್ಕೆಸೊಡ್ಲೂರು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷೆ ಜಯಲಕ್ಷಿö್ಮ ಅಧ್ಯಕ್ಷತೆಯಲ್ಲಿ ನಡೆಯಿತು.

ಗ್ರಾಮ ಪಂಚಾಯಿತಿ ಸದಸ್ಯೆ ಮಲ್ಲಮಾಡ ರಶ್ಮಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳಲ್ಲಿ ಅಡಗಿರುವ ಪ್ರತಿಭೆಗಳನ್ನು ಅನಾವರಣಗೊಳಿಸಲು ಪ್ರತಿಭಾ ಕಾರಂಜಿಯAತಹ ಕಾರ್ಯಕ್ರಮ ಗಳು ಸಹಕಾರಿಯಾಗಿವೆ ಎಂದರು.

ಬಿ.ಆರ್.ಪಿ. ವಾಮನ ಪ್ರಾಸ್ತಾವಿಕ ಮಾತನಾಡಿದರು. ವಿದ್ಯಾರ್ಥಿಗಳು ಹಲವಾರು ಸ್ಪರ್ಧೆಗಳಲ್ಲಿ ಭಾಗವಹಿಸಿ ಸಂಭ್ರಮಿಸುವ ಮೂಲಕ ನೆರೆದಿದ್ದವರನ್ನು ರಂಜಿಸಿದರು. ಗುರುವಂದನಾ ಕಾರ್ಯಕ್ರಮ ಗಮನ ಸೆಳೆಯಿತು. ಕಾರ್ಯಕ್ರಮದಲ್ಲಿ ಶಿಕ್ಷಣ ಸಂಯೋಜಕಿ ವಿಶಾಲಾಕ್ಷಿ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಗಳು, ವಿವಿಧ ಕ್ಲಸ್ಟರ್‌ನ ಸಂಪನ್ಮೂಲ ವ್ಯಕ್ತಿಗಳು, ಬಿ.ಆರ್.ಪಿ.ಗಳು, ೧೬ ಶಾಲೆಗಳ ಶಿಕ್ಷಕರುಗಳು, ವಿದ್ಯಾರ್ಥಿಗಳು, ತೀರ್ಪುಗಾರರು ಹಾಗೂ ಇನ್ನಿತರರು ಇದ್ದರು.

ಸಂಪನ್ಮೂಲ ವ್ಯಕ್ತಿ ಅರುಣ್ ಕುಮಾರ್ ಸ್ವಾಗತಿಸಿ, ಮುಖ್ಯ ಶಿಕ್ಷಕ ಕೃಷ್ಣ ವಂದಿಸಿದರು. ಅತಿಥಿ ಶಿಕ್ಷಕಿ ನೇತ್ರಾವತಿ ನಿರೂಪಿಸಿದರು.