ಮಡಿಕೇರಿ, ಸೆ. ೧೪: ಶ್ರೀ ಭಗಂಡೇಶ್ವರ -ತಲಕಾವೇರಿ ದೇವಾಲಯದಲ್ಲಿ ತಾ. ೧೯ ರಂದು “ಗಣೇಶ ಚತುರ್ಥಿ” ಹಬ್ಬ ನಡೆಯಲಿದೆ.

ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ತಾ. ೧೯ ರಂದು ಬೆಳಿಗ್ಗೆ ೯.೩೦ ಗಂಟೆಗೆ ಗಣಪತಿ ಹೋಮ, ಮಧ್ಯಾಹ್ನ ೧೨ ಗಂಟೆಗೆ ಪೂರ್ಣಾಹುತಿ, ಮಹಾಮಂಗಳಾರತಿ, ಪ್ರಸಾದ ವಿತರಣೆ ಮತ್ತು ಅನ್ನ ಸಂತರ್ಪಣೆ ನಡೆಯಲಿದೆ.

ಶ್ರೀ ತಲಕಾವೇರಿ ದೇವಾಲಯದಲ್ಲಿ ಬೆಳಿಗ್ಗೆ ೯.೩೦ ಗಂಟೆಗೆ ಗಣಪತಿ ಹೋಮ, ಮಧ್ಯಾಹ್ನ ೧೨ ಗಂಟೆಗೆ ಪೂರ್ಣಾಹುತಿ, ಮಹಾಮಂಗಳಾರತಿ ಮತ್ತು ಪ್ರಸಾದ ವಿತರಣೆ ನಡೆಯಲಿದೆ.

ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ದೇವಾಲಯಗಳಲ್ಲಿ ನಡೆಯಲಿರುವ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಆಡಳಿತಾಧಿಕಾರಿಗಳ ಪರವಾಗಿ ಶ್ರೀ ಭಗಂಡೇಶ್ವರ-ತಲಕಾವೇರಿ ಮತ್ತು ಸಮೂಹ ದೇವಾಲಯಗಳ ಕಾರ್ಯನಿರ್ವಾಹಕಾಧಿಕಾರಿ ಅವರು ತಿಳಿಸಿದ್ದಾರೆ.