ಮಡಿಕೇರಿ, ಸೆ. ೧೪: ಭಾರತೀಯ ಅಂಚೆ ಇಲಾಖೆಯು ೬ನೇ ತರಗತಿಯಿಂದ ೯ನೇ ತರಗತಿಯವರೆಗೆ ಓದುತ್ತಿರುವ ವಿದ್ಯಾರ್ಥಿಗಳಿಗೆ ‘ದೀನ್ ದಯಾಳ್ ಸ್ಪರ್ಶ್ ಯೋಜನೆ’ಯ ಅಡಿಯಲ್ಲಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಸ್ಪರ್ಶ್ (ಸ್ಕಾಲರ್ಶಿಪ್ ಫಾರ್ ಪ್ರಮೋಷನ್ ಆಫ್ ಆಟಿಟ್ಯೂಡ್ ಅಂಡ್ ರಿಸರ್ಚ್ ಇನ್ ಸ್ಟಾö್ಯಂಪ್ ಹಾಬಿ) ಸ್ಟಾö್ಯಂಪ್ಗಳಲ್ಲಿ ಅಭಿರುಚಿ ಮತ್ತು ಸಂಶೋಧನೆಯನ್ನು ಹವ್ಯಾಸವಾಗಿ ಉತ್ತೇಜಿಸಲು ವಿದ್ಯಾರ್ಥಿ ವೇತನ. ಶೈಕ್ಷಣಿಕ ಪಠ್ಯಕ್ರಮವನ್ನು ಬಲಪಡಿಸಲು ಮತ್ತು ಪೂರಕವಾಗಿ ಸಮರ್ಥನೀಯ ರೀತಿಯಲ್ಲಿ ಚಿಕ್ಕ ವಯಸ್ಸಿನ ಮಕ್ಕಳಲ್ಲಿ ಅಂಚೆ ಚೀಟಿಗಳ ಸಂಗ್ರಹ ಉತ್ತೇಜಿಸುವುದು ವಿದ್ಯಾರ್ಥಿ ವೇತನದ ಉದ್ದೇಶವಾಗಿದೆ.
ಈ ಹವ್ಯಾಸವು ಅವರಿಗೆ ವಿಶ್ರಾಂತಿ ಮತ್ತು ಒತ್ತಡವನ್ನು ನಿವಾರಿಸಲು ಸಹಾಯ ಮಾಡುತ್ತದೆ. ಈ ಯೋಜನೆ ಅಡಿ ೨೦೨೨-೨೩ ಶೈಕ್ಷಣಿಕ ವರ್ಷದಲ್ಲಿ ಶೇ. ೬೦ ಅಂಕಗಳನ್ನು ಹೊಂದಿರುವ ಮತ್ತು ಅಂಚೆ ಚೀಟಿಗಳ ಸಂಗ್ರಹದ ಠೇವಣಿ ಖಾತೆ ಫಿಲಾಟೆಲಿಕ್ ಕ್ಲಬ್ನ ಸದಸ್ಯರು ಮತ್ತು ಅಂಚೆ ಚೀಟಿ ಸಂಗ್ರಹವನ್ನು ಹವ್ಯಾಸವಾಗಿ ಮುಂದುವರಿಸುವ ೬ ರಿಂದ ೯ ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ. ೬ ಸಾವಿರಗಳ ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ಅಂಚೆ ಚೀಟಿಗಳ ಸಂಗ್ರಹದ ರಸಪ್ರಶ್ನೆ (ಲಿಖಿತ) ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಅಂಚೆ ಚೀಟಿಗಳ ಸಂಗ್ರಹದ ರಸಪ್ರಶ್ನೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ಅಂಚೆ ಇಲಾಖೆಯು ನೀಡುವ ಅಂಚೆ ಚೀಟಿಗಳ ಸಂಗ್ರಹ ಯೋಜನೆಯಲ್ಲಿ ಯಶಸ್ವಿಯಾಗಿ ಸ್ಪರ್ಧಿಸಬೇಕಾಗುತ್ತದೆ.
ಕರ್ನಾಟಕ ರಾಜ್ಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಲೆವೆಲ್-೧ ಅಂಚೆ ಚೀಟಿಗಳ ಸಂಗ್ರಹದ ರಸಪ್ರಶ್ನೆ(ಲಿಖಿತ)ನಲ್ಲಿ ಭಾಗವಹಿಸಬಹುದು. ಕರ್ನಾಟಕದ ಎಲ್ಲಾ ಶಾಲೆಗಳು ತಮ್ಮ ವಿದ್ಯಾರ್ಥಿಗಳನ್ನು ಸ್ಕಾಲರ್ಶಿಪ್ ಯೋಜನೆಯಲ್ಲಿ ಭಾಗವಹಿಸುವಂತೆ ಕೋರಲಾಗಿದೆ. ಹೆಚ್ಚಿನ ವಿವರಗಳಿಗೆ ತಿತಿತಿ.iಟಿಜiಚಿಠಿosಣ.gov.iಟಿ ಮತ್ತು ತಿತಿತಿ.ಞಚಿಡಿಟಿಚಿಣಚಿಞಚಿಠಿosಣ.gov.iಟಿ ನಲ್ಲಿ ಮಾಹಿತಿ ಪಡೆಯಬಹುದಾಗಿದೆ ಎಂದು ಕೊಡಗು ವಿಭಾಗದ ಅಂಚೆ ಕಚೇರಿಯ ಅಧೀಕ್ಷಕರು ತಿಳಿಸಿದ್ದಾರೆ.