ಮುಳ್ಳೂರು, ಸೆ. ೧೪: ಶ್ರೀ ಕೃಷ್ಣ ಜನ್ಮಷ್ಠಾಮಿ ಪ್ರಯುಕ್ತ ಸಮೀಪದ ಆಲೂರು-ಸಿದ್ದಾಪುರ ಜಾನಕಿ ಕಾಳಪ್ಪ ಆಂಗ್ಲ ಮಾಧ್ಯಮ ಶಾಲೆಯ ಎಲ್.ಕೆ.ಜಿ., ಯು.ಕೆ.ಜಿ. ಮತ್ತು ಪ್ರಾಥಮಿಕ ಶಾಲಾ ವಿಭಾಗದ ಪುಟಾಣಿಗಳು ಶ್ರೀ ಕೃಷ್ಣನ ವಿವಿಧ ವೇಶಭೂಷಣ ತೊಟ್ಟು ಸಂಭ್ರಮಿಸಿದರು. ಈ ಸಂದರ್ಭ ಮಕ್ಕಳ ಪೋಷಕರು, ಶಾಲೆಯ ಶಿಕ್ಷಕಿಯರು ಇದ್ದರು.ಶನಿವಾರಸಂತೆ, ಸೆ. ೧೪: ಸಮೀಪದ ಕೊಡ್ಲಿಪೇಟೆಯ ಕಲ್ಲುಮಠದ ನಂಜುAಡ ಸ್ವಾಮಿ ವಿದ್ಯಾಸಂಸ್ಥೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಶಿಕ್ಷಕರ ದಿನಾಚರಣೆಯನ್ನು ಸಂಭ್ರಮದಿAದ ಆಚರಿಸಲಾಯಿತು.

ಸಂಸ್ಥೆಯ ಎಲ್.ಕೆ.ಜಿ. ಹಾಗೂ ಯು.ಕೆ.ಜಿ. ವಿದ್ಯಾರ್ಥಿಗಳು ಶ್ರೀಕೃಷ್ಣ ಮತ್ತು ರಾಧೆಯ ವೇಷ ಧರಿಸಿ ಸ್ಪರ್ಧೆಯಲ್ಲಿ ಪಾಲ್ಗೊಂಡರು. ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು ನೃತ್ಯ, ಭಕ್ತಿಗೀತೆ, ಭಾಷಣ ಇತ್ಯಾದಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿ ಮನರಂಜಿಸಿದರು. ಶಿಕ್ಷಕರಿಗೂ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

ಮಠಾಧೀಶ ಹಾಗೂ ಸಂಸ್ಥೆಯ ಅಧ್ಯಕ್ಷರಾದ ಮಹಾಂತಸ್ವಾಮೀಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಆಶೀರ್ವಚನ ನೀಡಿದರು. ಶಿಕ್ಷಕರು ದಿನದ ಮಹತ್ವ ಕುರಿತು ಮಾತನಾಡಿದರು. ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಸಿಹಿ ಹಂಚಿ ಸಂಭ್ರಮಿಸಲಾಯಿತು. ಕಾರ್ಯದರ್ಶಿ ದಿವಾಕರ್, ಶಾಲಾ ಆಡಳಿತಾಧಿಕಾರಿ ಪ್ರದೀಪ್, ಮುಖ್ಯ ಶಿಕ್ಷಕ ಅಭಿಲಾಶ್, ಶಿಕ್ಷಕರು, ಸಿಬ್ಬಂದಿ ಹಾಗೂ ಪೋಷಕರು ಹಾಜರಿದ್ದರು. ಶನಿವಾರಸಂತೆ, ಸೆ. ೧೪: ಪಟ್ಟಣದ ಬಾಪೂಜಿ ವಿದ್ಯಾಸಂಸ್ಥೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸಂಭ್ರಮದಿAದ ಆಚರಿಸಲಾಯಿತು.

ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಲಿಂಗರಾಜ್ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯ ಕುರಿತು ಮಾತನಾಡಿದರು.

ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಶ್ರೀಕೃಷ್ಣ-ರಾಧೆಯ ವೇಷ ಧರಿಸಿ ಕಾರ್ಯಕ್ರಮಕ್ಕೆ ಮೆರಗು ತಂದರು. ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ, ಸಿಹಿ ಹಂಚಿ ಪ್ರೋತ್ಸಾಹಿಸಲಾಯಿತು.

ಸಂಸ್ಥೆಯ ಕಾರ್ಯದರ್ಶಿ ಮನೋಹರ್, ನಿರ್ದೇಶಕರು, ಮುಖ್ಯಶಿಕ್ಷಕ ಉಲ್ಲಾಸ್, ಶಿಕ್ಷಕರು, ಸಿಬ್ಬಂದಿ, ಪೋಷಕರು ಹಾಜರಿದ್ದರು.ಪೊನ್ನಂಪೇಟೆ, ಸೆ. ೧೪: ಪೊನ್ನಂಪೇಟೆ ಸಾಯಿಶಂಕರ ವಿದ್ಯಾಸಂಸ್ಥೆಯಲ್ಲಿ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಎಲ್.ಕೆ.ಜಿ. ಮತ್ತು ಯು.ಕೆ.ಜಿ. ವಿದ್ಯಾರ್ಥಿಗಳಿಗೆ ಛದ್ಮವೇಷ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.

ಪುಟಾಣಿಗಳು ರಾಧೆ, ಕೃಷ್ಣನ ವೇಷಧರಿಸಿ ಸಂಭ್ರಮಿಸಿದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಈ ಸಂದರ್ಭ ಪೋಷಕರು, ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಹಾಜರಿದ್ದರು.