ಶನಿವಾರಸAತೆ, ಸೆ. ೧೫: ಪ್ರತಿಭಾ ಕಾರಂಜಿ-ಕಲೋತ್ಸವ ಗ್ರಾಮೀಣ ವಿದ್ಯಾರ್ಥಿಗಳ ಸುಪ್ತ ಪ್ರತಿಭೆಗೆ ಮೆರುಗು ಕೊಡುವ ಮಹತ್ವದ ಕಾರ್ಯಕ್ರಮವಾಗಿದ್ದು ಶಿಕ್ಷಕರು ಹಾಗೂ ಪೋಷಕರ ಪಾತ್ರ ಮುಖ್ಯವಾಗಿದೆ ಎಂದು ನಿಡ್ತ ಗ್ರಾಮ ಪಂಚಾಯಿತಿ ಅಧ್ಯಕ್ಷ ಮನು ಅಭಿಪ್ರಾಯ ವ್ಯಕ್ತಪಡಿಸಿದರು.
ಸಮೀಪದ ಗೋಪಾಲಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಹಂಡ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮುಖ್ಯ ಅತಿಥಿ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಸಿ.ಎಲ್. ಸುಬ್ಬಯ್ಯ ಮಾತನಾಡಿ, ಮಕ್ಕಳ ಸುಪ್ತ ಪ್ರತಿಭೆಯನ್ನು ಒರೆ ಹಚ್ಚಿ ನೋಡುವ ಕಾರ್ಯಕ್ರಮ ಪ್ರತಿಭಾ ಕಾರಂಜಿ-ಕಲೋತ್ಸವ, ಪ್ರತಿಭೆ ಬೆಳಕಿಗೆ ಬರಲು ಪ್ರೋತ್ಸಾಹ ಮುಖ್ಯ ಎಂದರು.
ಮತ್ತೋರ್ವ ಮುಖ್ಯ ಅತಿಥಿ ನಿವೃತ್ತ ಉಪ ಪ್ರಾಂಶುಪಾಲ ಜಿ.ಬಿ. ನಾಗಪ್ಪ ಮಾತನಾಡಿ, ಒಂದೊAದು ಮಗುವಿನಲ್ಲೂ ಒಂದೊAದು ಪ್ರತಿಭೆ ಸುಪ್ತವಾಗಿದ್ದು ಪೋಷಕರ ಪ್ರೋತ್ಸಾಹ ಮುಖ್ಯವಾಗಿರುತ್ತದೆ. ಶಿಕ್ಷಕರು ನಿಸ್ವಾರ್ಥ ಮನೋಭಾವದಿಂದ ಆ ಪ್ರತಿಭೆ ಗುರುತಿಸಿ, ಪ್ರದರ್ಶನಕ್ಕೆ ಅವಕಾಶ ಕಲ್ಪಿಸಬೇಕು ಎಂದರು.
ನಿಡ್ತ ಗ್ರಾಮ ಪಂಚಾಯಿತಿ ಸದಸ್ಯ ತಸ್ಲೀಮ್ ಮಾತನಾಡಿ, ಮನುಷ್ಯನ ಜೀವನದಲ್ಲಿ ವಿದ್ಯೆ ಅಪಹರಿಸಲಾಗದ ಸಂಪತ್ತು. ಪ್ರೋತ್ಸಾಹದ ಜತೆಗೆ ಶಿಕ್ಷಕರ ಪರಿಶ್ರಮದಿಂದ ಮಕ್ಕಳ ಪ್ರತಿಭೆ ಹೊರಹೊಮ್ಮಬೇಕು ಎಂದರು.
ಹAಡ್ಲಿ ಕ್ಲಸ್ಟರ್ನ ಸಮೂಹ ಸಂಪನ್ಮೂಲ ವ್ಯಕ್ತಿ ಮನೋಹರ್ ಪ್ರಾಸ್ತಾವಿಕ ನುಡಿಗಳನ್ನಾಡಿ, ಪ್ರತಿಭೆಗಳನ್ನು ಗುರುತಿಸುವ ಪ್ರತಿಭಾ ಕಾರಂಜಿ ಸ್ಪರ್ಧಾ ಕಾರ್ಯಕ್ರಮದಲ್ಲಿ ತೀರ್ಪುಗಾರರ ಪಾತ್ರ ಮುಖ್ಯವಾಗಿದೆ ಎಂದರು.
ಶನಿವಾರಸAತೆ ಕ್ಲಸ್ಟರ್ನ ಸಮೂಹ ಸಂಪನ್ಮೂಲ ವ್ಯಕ್ತಿ ಸಿ.ಕೆ. ದಿನೇಶ್ ಮಾತನಾಡಿ, ಬಹುಮಾನ ಗಳಿಸುವುದಕ್ಕಿಂತಲೂ ಪ್ರತಿಭಾ ಕಾರಂಜಿ ಸ್ಪರ್ಧಾ ಕಾರ್ಯಕ್ರಮವಾಗಿದ್ದು ಸೋಲು-ಗೆಲುವು ಮುಖ್ಯವಲ್ಲ; ಭಾಗವಹಿಸುವಿಕೆ ಮುಖ್ಯವಾಗಿದ್ದು ಪ್ರತಿಭೆ ಅನಾವರಣಗೊಳ್ಳಲಿ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಸೌಮ್ಯ ಮಾತನಾಡಿ, ಶುಭ ಹಾರೈಸಿದರು. ಉಪಾಧ್ಯಕ್ಷೆ ಸುಮಿತ್ರಾ, ಸದಸ್ಯರು, ನಿವೃತ್ತ ಸೈನಿಕರಾದ ಯಶವಂತ್, ಉದಯಭಾನು, ಯೋಗ ಶಿಕ್ಷಕ ಒಡೆಯನಪುರ ಸುರೇಶ್, ಮುಖ್ಯಶಿಕ್ಷಕ ಚಂದ್ರಶೇಖರ್, ವಿವಿಧ ಶಾಲಾ ಮುಖ್ಯಶಿಕ್ಷಕರು, ಸಹಶಿಕ್ಷಕರು ಹಾಜರಿದ್ದರು. ದೈಹಿಕ ಶಿಕ್ಷಣ ಶಿಕ್ಷಕಿ ಕವಿತಾ ನಿರೂಪಿಸಿ, ಶಿಕ್ಷಕಿ ಯಶೋದಾ ಸ್ವಾಗತಿಸಿದರು. ಮುಖ್ಯಶಿಕ್ಷಕ ಚಂದ್ರಶೇಖರ್ ವಂದಿಸಿದರು.