ಮಡಿಕೇರಿ, ಸೆ. ೧೬: ಕೊಡಗು ಪ್ರೆಸ್‌ಕ್ಲಬ್ ೨೫ ವರ್ಷ ಪೂರೈಸಿರುವ ಹಿನ್ನೆಲೆ ತಾ. ೧೬ ರಂದು (ಇಂದು) ನಗರದ ಕಾವೇರಿ ಹಾಲ್‌ನಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿವೆ.

ಬೆಳಿಗ್ಗೆ ೧೦ ಗಂಟೆಗೆ ಪ್ರೆಸ್‌ಕ್ಲಬ್ ಬೆಳ್ಳಿಮಹೋತ್ಸವ ಆಚರಣಾ ಸಮಿತಿ ಗೌರವಾಧ್ಯಕ್ಷೆ ಬಿ.ಆರ್. ಸವಿತಾ ರೈ ಅಧ್ಯಕ್ಷತೆಯಲ್ಲಿ ಕ್ಲಬ್ ಸದಸ್ಯರು ಹಾಗೂ ಕುಟುಂಬಸ್ಥರಿಗೆ ಮನರಂಜನಾ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆ ನಡೆಯಲಿದ್ದು, ಜಿಲ್ಲಾಧಿಕಾರಿ ವೆಂಕಟ್ ರಾಜಾ ಕಾರ್ಯಕ್ರಮ ಉದ್ಘಾಟಿಸ ಲಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವರ್ಣಿತ್ ನೇಗಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಮಧ್ಯಾಹ್ನ ೧ ಗಂಟೆಯಿAದ ಸಾಂಸ್ಕೃತಿಕ ಕಾರ್ಯಕ್ರಮ ಆರಂಭ ಗೊಳ್ಳಲಿದ್ದು, ಇದನ್ನು ಮಾಜಿ ಶಾಸಕ ಕೆ.ಜಿ. ಬೋಪಯ್ಯ ಉದ್ಘಾಟಿಸಲಿದ್ದು, ಪ್ರೆಸ್‌ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಮಹಾಪೋಷಕ ಜಿ. ರಾಜೇಂದ್ರ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ತು ಮಾಜಿ ಸದಸ್ಯ ಮಂಡೇಪAಡ ಸುನಿಲ್ ಸುಬ್ರಮಣಿ, ಉದ್ಯಮಿ ನಾಪಂಡ ಮುದ್ದಪ್ಪ, ನಗರಸಭೆ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಪ್ರೆಸ್‌ಕ್ಲಬ್ ಬೆಳ್ಳಿಮಹೋತ್ಸವ ಆಚರಣಾ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.ಕೆ. ರೆಜಿತ್ ಕುಮಾರ್, ಕಾರ್ಯದರ್ಶಿ ಬಾಚರಣಿಯಂಡ ಅನು ಕಾರ್ಯಪ್ಪ ಉಪಸ್ಥಿತಿ ಇರಲಿದೆ. ಸಂಜೆ ೬ ಗಂಟೆಗೆ ಪ್ರೆಸ್‌ಕ್ಲಬ್ ಬೆಳ್ಳಿಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಡಾ. ಉಳ್ಳಿಯಡ ಪೂವಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಸಭಾ ಕಾರ್ಯಕ್ರಮವನ್ನು ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಉದ್ಘಾಟಿಸಲಿದ್ದು, ಕ್ಲಬ್ ಮಾಜಿ ಅಧ್ಯಕ್ಷರುಗಳಿಗೆ ಸನ್ಮಾನ ಕಾರ್ಯಕ್ರಮ ವನ್ನು ವೀರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಮಾಡಲಿದ್ದಾರೆ. ೧ ಕೋಟಿ ರೂಪಾಯಿ ಕ್ಷೇಮನಿಧಿ ಸ್ಥಾಪನೆಗೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಚಾಲನೆ ನೀಡಲಿದ್ದು, ಸಂಸದ ಪ್ರತಾಪ್ ಸಿಂಹ ಹಿರಿಯ ಪತ್ರಕರ್ತರನ್ನು ಸನ್ಮಾನಿಸಲಿದ್ದಾರೆ. ಸ್ಮರಣ ಸಂಚಿಕೆಯನ್ನು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಬಿಡುಗಡೆ ಮಾಡಲಿದ್ದು, ಸಹಕಾರಿ ಸಂಘದ ಲಾಂಛನವನ್ನು ಮಡಿಕೇರಿ ಶಾಸಕ ಡಾ. ಮಂಥರ್ ಗೌಡ ಅನಾವರಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ತು ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ, ಉಪಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ತ್ಯಾಗರಾಜ್, ಬೆಳ್ಳಿಮಹೋತ್ಸವ ಆಚರಣಾ ಸಮಿತಿ ಮಹಾಪೋಷಕ ಜಿ. ರಾಜೇಂದ್ರ, ಬೆಳ್ಳಿಮಹೋತ್ಸವ ಆಚರಣಾ ಸಮಿತಿ ಗೌರವಾಧ್ಯಕ್ಷೆ ಬಿ.ಆರ್. ಸವಿತಾ ರೈ ಪಾಲ್ಗೊಳ್ಳಲಿದ್ದಾರೆ.