ಮಡಿಕೇರಿ, ಸೆ. ೧೫: ಕೊಡಗು ಜಿಲ್ಲಾ ವಿಷ್ಣು ಸೇನಾ ಸಮಿತಿ ವತಿಯಿಂದ ತಾ.೧೭ ರಂದು ಕನ್ನಡದ ಹಿರಿಯ ನಟ ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರ ಜನ್ಮದಿನವನ್ನು ಆಚರಿಸಲಾಗುವುದು ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಹೆಚ್.ಎಸ್.ನಾಗರಾಜ್ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅಂದು ಅಪರಾಹ್ನ ೩ ಗಂಟೆಗೆ ನಗರದ ಬಾಲಭವನದಲ್ಲಿ ಕೊಡಗು ವಿಷ್ಣು ಸೇನಾ ಸಮಿತಿ ಅಧ್ಯಕ್ಷ ಎಂ.ಹೆಚ್.ರಫೀಕ್ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆೆ.

ಮುಖ್ಯ ಅತಿಥಿಗಳಾಗಿ ಬ್ರಹ್ಮಗಿರಿ ಕೊಡವ ವಾರಪತ್ರಿಕೆಯ ಸಂಪಾದಕ ಯು.ಎಂ.ಪೂವಯ್ಯ, ಸಾಹಿತಿ ಡಾಟಿ ಪೂವಯ್ಯ, ಕಲಾವಿದ ಜೂ.ವಿಷ್ಣುವರ್ಧನ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.