ಸೋಮವಾರಪೇಟೆ, ಸೆ. ೧೫: ಸಮೀಪದ ದೊಡ್ಡಮಳ್ತೆ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಸ್ವರ್ಣಗೌರಿ ಮಹೋತ್ಸವದ ಅಂಗವಾಗಿ ತಾ. ೧೮ರಂದು ಬಾಗಿನ ಅರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದು ದೇವಾಲಯ ಸಮಿತಿ ಅಧ್ಯಕ್ಷ ಡಿ.ಬಿ. ವೀರೇಶ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾವಿರಾರು ಜನರ ಶ್ರದ್ಧಾಭಕ್ತಿಯ ಕ್ಷೇತ್ರವಾಗಿ ಹೊನ್ನಮ್ಮನ ಕೆರೆ ಕ್ಷೇತ್ರ ಪ್ರಸಿದ್ಧಿ ಪಡೆದಿದೆ. ನವ ದಂಪತಿ ಕೆರೆಗೆ ಬಾಗಿನ ಅರ್ಪಿಸುವುದು ಕಳೆದ ಹಲವಾರು ವರ್ಷಗಳಿಂದ ನಡೆದುಕೊಂಡು ಬರುತ್ತಿರುವ ಧಾರ್ಮಿಕ ಕಾರ್ಯವಾಗಿದೆ. ಈ ಹಿನ್ನೆಲೆಯಲ್ಲಿ ಹೊನ್ನಮ್ಮ ತಾಯಿಗೆ ಶ್ರೀ ಸಿದ್ಧೇಶ್ವರ ಮತ್ತು ಶ್ರೀ ಬಸವೇಶ್ವರ ಹಾಗೂ ಸ್ವರ್ಣಗೌರಿ ಹೊನ್ನಮ್ಮ ಟ್ರಸ್ಟ್ ವತಿಯಿಂದ ಗೌರಿ ಹಬ್ಬದಂದು ತಾ. ೧೮ ರಂದು ಬೆಳಿಗ್ಗೆ ೯ ರಿಂದ ೧೦.೩೦ ರೊಳಗೆ ಬಾಗಿನ ಅರ್ಪಿಸಲಾಗುವುದು ಎಂದರು. ಬಾಗಿನ ಅರ್ಪಣೆ ಕಾರ್ಯಕ್ರಮಕ್ಕೆ ಸಂಬAಧಿಸಿದAತೆ ಸಮಿತಿಯಿಂದ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಮಧ್ಯಾಹ್ನ ಭಕ್ತಾದಿಗಳಿಗೆ ಅನ್ನದಾನದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಸಮಿತಿಯ ಗೌರವಾಧ್ಯಕ್ಷ ಎಂ.ಬಿ. ವಸಂತಕುಮಾರ, ಉಪಾಧ್ಯಕ್ಷ ಡಿ.ಎಂ. ಪ್ರಸನ್ನ, ಕಾರ್ಯ ದರ್ಶಿ ಎಂ.ಜೆ. ಕಿರಣ್ ಕುಮಾರ್ ಹಾಗೂ ಸದಸ್ಯ ಸತೀಶ್ ಇದ್ದರು.