ಮಡಿಕೇರಿ, ಸೆ. ೧೫ : ಶಿಕ್ಷಕರ ದಿನಾಚರಣೆ ಅಂಗವಾಗಿ ಅತ್ಯುತ್ತಮ ಸೇವೆಗಾಗಿ ರಾಜ್ಯ ಸರಕಾರದಿಂದ ಕೊಡಮಾಡುವ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿರುವ ದೈಹಿಕ ಶಿಕ್ಷಣ ಶಿಕ್ಷಕ ಪೂರ್ಣೇಶ್ ಅವರು ಬೆಂಗಳೂರಿನ ವಿಕಾಸ ಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಶಸ್ತಿ ಸ್ವೀಕಾರ ಮಾಡಿದರು. ಸರಕಾರದ ವಿವಿಧ ಸಚಿವರುಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಪೂರ್ಣೇಶ್ ಅವರು ೩೧ ವರ್ಷಗಳ ಕಾಲದ ತಮ್ಮ ಸೇವಾವಧಿಯಲ್ಲಿ ಬೋಯಿಕೇರಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿಯೇ ೩೦ವರ್ಷಗಳ ಕಾಲ ಸೇವೆ ಸಲ್ಲಿಸುವದರೊಂದಿಗೆ ಶಾಲೆಯ ಮಕ್ಕಳಿಗೆ ಕ್ರೀಡಾ ತರಬೇತಿ ನೀಡಿ ಮಕ್ಕಳು ರಾಜ್ಯ, ರಾಷ್ಟç ಮಟ್ಟದಲ್ಲಿ ಪ್ರತಿನಿಧಿಸುವಲ್ಲಿ ಕಾರಣೀಭೂತರಾಗಿದ್ದಾರೆ. ಪ್ರಸ್ತುತ ಬಡ್ತಿಯೊಂದಿಗೆ ಚೆಯ್ಯಂಡಾಣೆ ಶಾಲೆಗೆ ವರ್ಗಾವಣೆಗೊಂಡು ಅಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.