ನಾಪೋಕ್ಲು, ಸೆ. ೧೬ : ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಸಂಪನ್ಮೂಲ ಕೇಂದ್ರ ವತಿಯಿಂದ ನಾಪೋಕ್ಲುವಿನ ಕೆಪಿಎಸ್ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಜರುಗಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ಪಬ್ಲಿಕ್ ಶಾಲೆಯ ಉಪಾಧ್ಯಕ್ಷ ಹ್ಯಾರಿಸ್ ಭಾಗವಹಿಸಿ ಮಕ್ಕಳಿಗೆ ಕಿವಿಮಾತನ್ನು ಹೇಳಿದರು. ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಮಂಜುಳ ಚಿತ್ರಾಪುರ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ಮಾತುಗಳಾಡಿzರು. ಈ ಸಂದರ್ಭ ಕೆಪಿಎಸ್ ಶಾಲೆಯ ಮುಖ್ಯ ಶಿಕ್ಷಕಿ ಚಂದ್ರಕಲಾ, ಶಾಲಾ ಆಡಳಿತ ಮಂಡಳಿ ಸದಸ್ಯರು, ವಿವಿಧ ಶಾಲೆಗಳ ಶಿಕ್ಷಕ ವೃಂದದವರು ಪಾಲ್ಗೊಂಡಿದ್ದರು. ಬಳಿಕ ಕ್ಲಸ್ಟರಿಗೆ ಸಂಬAಧಿಸಿದ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಲಾಯಿತು.

ವಿದ್ಯಾರ್ಥಿಗಳು ಭಾಷಣ, ಜಾನಪದ ಗೀತೆ, ನೃತ್ಯ, ಚಿತ್ರಕಲೆ, ಛದ್ಮವೇಷ, ರಸಪ್ರಶ್ನೆ, ಧಾರ್ಮಿಕ ಪಠಣ ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡಿದ್ದರು. ಕ್ಲಸ್ಟರಿಗೆ ಸಂಬAಧಿಸಿದ ೧೮ ಶಾಲೆಗಳ ೪೩೫ ವಿದ್ಯಾರ್ಥಿಗಳು ಹಲವು ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ವಿಜೇತರಿಗೆ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು.