ಮೂರು ಡಿಸಿಎಂ ಸ್ಥಾನಕ್ಕೆ ಬೇಡಿಕೆ: ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದ ಸಿಎಂ

ಕಲಬುರಗಿ, ಸೆ. ೧೭: ರಾಜ್ಯದಲ್ಲಿ ಇನ್ನೂ ಮೂರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸಬೇಕು ಎಂಬ ತಮ್ಮ ಸಂಪುಟದ ಸಚಿವರ ಬೇಡಿಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಕುರಿತು ಪಕ್ಷದ ಹೈಕಮಾಂಡ್ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ ಮತ್ತು ಹೈಕಮಾಂಡ್ ನಿರ್ಧಾರಕ್ಕೆ ತಾವು ಬದ್ಧ ಎಂದು ಭಾನುವಾರ ಹೇಳಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಇನ್ನೂ ಮೂವರು ಡಿಸಿಎಂಗಳನ್ನು ಮಾಡಬೇಕು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಶನಿವಾರ ಹೇಳಿದ್ದರು ಮತ್ತು ೨೦೨೪ ರ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಹೈಕಮಾಂಡ್‌ಗೆ ಈ ಸಂಬAಧ ಪತ್ರ ಬರೆಯುವುದಾಗಿ ತಿಳಿಸಿದ್ದರು. ಇದು ಸಚಿವರ ವೈಯಕ್ತಿಕ ಅಭಿಪ್ರಾಯವಾಗಿದ್ದು, ಅದನ್ನು ಪಕ್ಷದ ನಾಯಕತ್ವದ ಮುಂದೆ ಪ್ರಸ್ತಾಪಿಸುವುದಾಗಿ ತಿಳಿಸಿದ ಸಿಎಂ, ಈ ಬಗ್ಗೆ ತಾವು ಯಾವುದೇ ಹೇಳಿಕೆ ನೀಡುವುದಿಲ್ಲ ಮತ್ತು ಅದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ. ಒಬ್ಬ ಉಪಮುಖ್ಯಮಂತ್ರಿ ಸಾಕು ಎಂದು ಹೈಕಮಾಂಡ್ ಹೇಳಿತ್ತು ಮತ್ತು ಒಬ್ಬರನ್ನು ನೇಮಿಸಿದೆ. ಇನ್ನೂ ಮೂರು ಡಿಸಿಎಂ ಸ್ಥಾನಕ್ಕಾಗಿ ಅವರು (ರಾಜಣ್ಣ) ಹೈಕಮಾಂಡ್ ಜೊತೆ ಮಾತನಾಡುವುದಾಗಿ ಹೇಳಿದ್ದಾರೆ. ಮಾತನಾಡಲಿ ಎಂದು ಸಿದ್ದರಾಮಯ್ಯ ನುಡಿದರು.

ಚೈತ್ರಾ ಕುಂದಾಪುರ ಖರೀದಿಸಿದ್ದ ಕಾರು, ಮನೆ, ಸೈಟು ಜಪ್ತಿ

ಬೆಂಗಳೂರು, ಸೆ. ೧೭: ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಭರವಸೆ ನೀಡಿ ಅವರಿಂದ ಕೋಟಿ ಕೋಟಿ ಹಣ ಪಡೆದು ವಂಚಿಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಹಿಂದುತ್ವವಾದಿ ಚೈತ್ರಾ ಕುಂದಾಪುರ ಅವರು ಇತ್ತೀಚಿಗೆ ಖರೀದಿಸಿದ್ದ ಕಿಯಾ ಕೇರೆನ್ಸ್ ಕಾರು, ಮನೆ, ಸೈಟು ಹಾಗೂ ಎರಡು ಕೋಟಿ ರೂಪಾಯಿ ಎಫ್‌ಡಿ ಹಣವನ್ನು ಸಿಸಿಬಿ ಪೊಲೀಸರು ಜಪ್ತಿ ಮಾಡಿದ್ದಾರೆ. ವಂಚನೆ ಹಣದಲ್ಲಿ ಖರೀದಿ ಮಾಡಿದ್ದ ಕಿಯಾ ಕಾರನ್ನು ಸಿಸಿಬಿ ಪೊಲೀಸರು ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು ಚೈತ್ರಾ ಬ್ಯಾಂಕ್‌ನಲ್ಲಿಟ್ಟಿದ್ದ ಹಣ, ಖರೀದಿ ಮಾಡಿದ್ದ ಚಿನ್ನಾಭರಣವನ್ನೂ ಸಹ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೊಲ್ಲಾಪುರದ ಒಂದು ಬಾರ್ ಆ್ಯಂಡ್ ರೆಸ್ಟೊರೆಂಟ್ ಮುಂದೆ ನಿಲ್ಲಿಸಿದ್ದ ಚೈತ್ರಾ ಅವರ ಕಾರನ್ನು ಅವರ ಸ್ನೇಹಿತ ಎಂದು ಹೇಳಲಾಗುವ ಕಿರಣ್ ಎನ್ನುವವರು ಸೆಪ್ಟೆಂಬರ್ ೯ ರಂದು ಮುಧೋಳಕ್ಕೆ ತಂದಿದ್ದರು. ಕಿರಣ್ ಸೊಲ್ಲಾಪುರಕ್ಕೆ ಹೋಗಿ ಕಿಯಾ ಕಾರು ತಂದು ತನ್ನ ಡ್ರೆöÊವಿಂಗ್ ಸ್ಕೂಲ್‌ನಲ್ಲಿಟ್ಟುಕೊಂಡಿದ್ದರು. ಚೈತ್ರಾ ಕುಂದಾಪುರ, ಪಿಎ ಶ್ರೀಕಾಂತ್, ಕಿರಣ್ ಕರೆಯನ್ನು ಸಿಸಿಬಿ ಪೊಲೀಸರು ಟ್ರೇಸೌಟ್ ಮಾಡಿದ್ದಾರೆ. ಈ ಆಧಾರದ ಮೇಲೆ ಕಿರಣ್‌ನನ್ನು ವಶಕ್ಕೆ ಪಡೆದು ಕಾರು ಜಪ್ತಿ ಮಾಡಿ ವಿಚಾರಣೆಗೆ ಒಳಪಡಿಸಿದ್ದಾರೆ. ಇನ್ನು ಚೈತ್ರಾ ಕುಂದಾಪುರ ಅವರಿಗೆ ಸೇರಿದ್ದ ರೂ. ೩ ಕೋಟಿ ಮೌಲ್ಯದ ಸ್ವತ್ತನ್ನು ಸಹ ಪೊಲೀಸರು ಜಪ್ತಿ ಮಾಡಿದ್ದಾರೆ. ಚೈತ್ರಾ ಮತ್ತು ಶ್ರೀಕಾಂತ್ ಹೆಸರಲ್ಲಿ ಫಿಕ್ಸೆಡ್ ಡೆಪಾಸಿಟ್ ಇಟ್ಟಿದ್ದ ರೂ. ೧.೮ ಕೋಟಿ ಹಣವನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಸ್ಥಳೀಯ ಸೊಸೈಟಿಯಲ್ಲಿದ್ದ ರೂ. ೪೦ ಲಕ್ಷ ಹಣವನ್ನು, ರೂ. ೬೫ ಲಕ್ಷ ಮೊತ್ತದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ಬಂದೂಕು ಸಿಡಿದು ಸೇನಾ ಯೋಧ ಸಾವು

ಬಂಡಿಪೋರಾ, ಸೆ. ೧೭: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ತಮ್ಮ ಸಹೋದ್ಯೋಗಿ ಆಕಸ್ಮಿಕವಾಗಿ ಬಂದೂಕನ್ನು ಒತ್ತಿದ್ದರಿಂದ ಓರ್ವ ಸೇನಾ ಯೋಧ ಮೃತಪಟ್ಟು, ಮತ್ತೊಬ್ಬ ಯೋಧ ಗಾಯಗೊಂಡಿದ್ದಾರೆ. ಪೊಲೀಸರ ಹೇಳಿಕೆಯ ಪ್ರಕಾರ, ಆರೋಪಿ ಸೇನಾ ಸಿಬ್ಬಂದಿಯನ್ನು ವಶಕ್ಕೆ ಪಡೆಯಲಾಗಿದೆ ಮತ್ತು ಘಟನೆ ಕುರಿತು ತನಿಖೆಯನ್ನು ಪ್ರಾರಂಭಿಸಲಾಗಿದೆ. ಆಕಸ್ಮಿಕವಾಗಿ ಗುಂಡು ಹಾರಿದ ಪರಿಣಾಮ ಸೇನಾ ಯೋಧರೊಬ್ಬರು ಸಾವಿಗೀಡಾಗಿದ್ದು, ಮತ್ತೋರ್ವ ಸೇನಾ ಸಿಬ್ಬಂದಿಗೆ ಗಾಯವಾಗಿದೆ. ಆರೋಪಿ ಸೇನಾ ಸಿಬ್ಬಂದಿಯನ್ನು ಬಂಧಿಸಲಾಗಿದೆ. ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲಾ ಪೊಲೀಸ್ ಟ್ವೀಟ್ ಮಾಡಿದೆ.

ಒಂದೇ ಕುಟುಂಬದ ನಾಲ್ವರ ಸಾವು!

ದೊಡ್ಡಬಳ್ಳಾಪುರ, ಸೆ. ೧೭: ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಲೆಯರಹಳ್ಳಿ ಬಳಿ ಕಳೆದ ರಾತ್ರಿ ನಡೆದಿದೆ. ದೊಡ್ಡಬಳ್ಳಾಪುರದ ಬಳಿ ಕೋಳಿಫಾರಂನಲ್ಲಿ ಕೆಲಸ ಮಾಡುತ್ತಿದ್ದ ಪಶ್ಚಿಮ ಬಂಗಾಳದ ಅಲ್ಲಿಪುರ ಮೂಲದ ೬೦ ವರ್ಷದ ಕಾಲೇ ಸರೇರಾ, ೫೦ ವರ್ಷದ ಲಕ್ಷ್ಮಿ ಸರೇರಾ, ೪೦ ವರ್ಷದ ಉಷಾ ಸರೇರಾ ಮತ್ತು ೧೬ ವರ್ಷದ ಪೂಲ್ ಸರೇರಾ ಮೃತದೇಹ ಶೇಡ್ ನಲ್ಲಿ ಪತ್ತೆಯಾಗಿದೆ. ಕಳೆದ ರಾತ್ರಿ ಚಳಿಯಿಂದ ತಪ್ಪಿಸಿಕೊಳ್ಳಲು ಇದ್ದಿಲಿನ ಪೆಟ್ಟಿಗೆಗೆ ಬೆಂಕಿ ಹಚ್ಚಿ ಮಲಗಿದ್ದಾರೆ. ನಂತರ ಹೊಗೆ ಹೆಚ್ಚಾಗಿ ಸಾವನ್ನಪ್ಪಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಕಳೆದ ೧೦ ದಿನಗಳ ಹಿಂದಷ್ಟೇ ಕಾಲೇ ಸರೇರಾ ಕುಟುಂಬ ಮೋಹನ್ ಎಂಬುವರಿಗೆ ಸೇರಿದ ಕೋಳಿಫಾರಂನಲ್ಲಿ ಕೆಲಸಕ್ಕೆ ಸೇರಿದ್ದರು ಎಂದು ತಿಳಿದುಬಂದಿದ್ದು ದೊಡ್ಡಬೆಳವಂಗಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಣಿಪುರದಲ್ಲಿ ಸೇನಾ ಯೋಧನನ್ನು ಅಪಹರಿಸಿ ಹತ್ಯೆ

ಇಂಫಾಲ್, ಸೆ. ೧೭: ಮಣಿಪುರದ ಇಂಫಾಲ್ ಪೂರ್ವ ಜಿಲ್ಲೆಯ ಖುನಿಂಗ್‌ಥೆಕ್ ಗ್ರಾಮದಲ್ಲಿ ಭಾರತೀಯ ಸೇನೆಯ ಯೋಧನ ಶವ ಭಾನುವಾರ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹುತಾತ್ಮ ಯೋಧನನ್ನು ಕಾಂಗ್‌ಪೊಕ್ಪಿ ಜಿಲ್ಲೆಯ ಲೀಮಾಖೋಂಗ್‌ನಲ್ಲಿ ಸೇನೆಯ ಡಿಫೆನ್ಸ್ ಸೆಕ್ಯುರಿಟಿ ಕಾರ್ಪ್ಸ್(ಡಿಎಸ್‌ಸಿ) ಸಿಪಾಯಿ ಸೆರ್ಟೊ ತಂಗ್‌ಥಾAಗ್ ಕೋಮ್ ಎಂದು ಗುರುತಿಸಲಾಗಿದ್ದು, ಅವರು ಇಂಫಾಲ್ ಪಶ್ಚಿಮದ ತರುಂಗ್‌ನವರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಶನಿವಾರ ಬೆಳಿಗ್ಗೆ ೧೦ ಗಂಟೆ ಸುಮಾರಿಗೆ ಅಪರಿಚಿತ ಶಸ್ತçಸಜ್ಜಿತ ವ್ಯಕ್ತಿಗಳು, ರಜೆಯಲ್ಲಿದ್ದ ಸಿಪಾಯಿ ಕೋಮ್ ಅವರನ್ನು ಅವರ ಮನೆಯಿಂದ ಅಪಹರಿಸಿದ್ದಾರೆ. ಏಕೈಕ ಪ್ರತ್ಯಕ್ಷದರ್ಶಿಯಾಗಿರುವ ಯೋಧನ ೧೦ ವರ್ಷದ ಮಗ ‘ನಾನು ಮತ್ತು ನನ್ನ ತಂದೆ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಮೂವರು ಪುರುಷರು ಮನೆಗೆ ಪ್ರವೇಶಿಸಿದರು. ಶಸ್ತçಸಜ್ಜಿತ ವ್ಯಕ್ತಿಗಳು ನನ್ನ ತಂದೆ ತಲೆಗೆ ಪಿಸ್ತೂಲ್ ಇರಿಸಿ, ಬಿಳಿಯ ವಾಹನದಲ್ಲಿ ಬಲವಂತವಾಗಿ ಕರೆದೊಯ್ದರು’ ಎಂದು ಹೇಳಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಭಾನುವಾರ ಬೆಳಿಗ್ಗೆ ತನಕ ಸಿಪಾಯಿ ಕೋಮ್ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ. ಬೆಳಿಗ್ಗೆ ೯.೩೦ ರ ಸುಮಾರಿಗೆ, ಇಂಫಾಲ್ ಪೂರ್ವದ ಖುನಿಂಗ್‌ಥೆಕ್ ಗ್ರಾಮದಲ್ಲಿ ಅವರ ಶವ ಪತ್ತೆಯಾಗಿದೆ. ಅವರ ಗುರುತನ್ನು ಅವರ ಸಹೋದರ ಮತ್ತು ಸೋದರ ಮಾವ ಖಚಿತಪಡಿಸಿದ್ದಾರೆ. ಸೈನಿಕನ ತಲೆಗೆ ಒಂದು ಗುಂಡಿನ ಗಾಯವಾಗಿತ್ತು," ಎಂದು ಅಧಿಕಾರಿಗಳು ಹೇಳಿದ್ದಾರೆ.

ಜನವರಿ ನಂತರ ಸರ್ಕಾರ ಪತನ: ಯತ್ನಾಳ್

ಹುಬ್ಬಳ್ಳಿ, ಸೆ. ೧೭: ನಮ್ಮ ಸಂಪರ್ಕದಲ್ಲಿ ೪೫ ಜನ ಶಾಸಕರಿದ್ದು, ಮುಂದಿನ ಜನವರಿ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗುವುದು ಖಚಿತ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಭಾನುವಾರ ಹೊಸ ಬಾಂಬ್ ಸಿಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಯಾತ್ನಾಳ್, ಬಿಜೆಪಿಯೇ ಅಧಿಕಾರಕ್ಕೆ ಬರುವ ಸಾಧ್ಯತೆಗಳಿರುವುದರಿಂದ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಿಲ್ಲ. ಮುಂದಿನ ಜನವರಿ ವೇಳೆಗೆ ರಾಜ್ಯದಲ್ಲಿ ಬದಲಾವಣೆಯಾಗಲಿದೆ. ಜನವರಿಯಲ್ಲಿ ರಾಜ್ಯ ಸರ್ಕಾರ ಪತನವಾಗುತ್ತೆ. ಅವರ ಪಕ್ಷದವರೇ ಅವರ ಸರ್ಕಾರವನ್ನ ಬೀಳಿಸಲಿದ್ದಾರೆ ಎಂದರು. ಕಾಂಗ್ರೆಸ್ ಎಂಎಲ್‌ಸಿ ಬಿ.ಕೆ. ಹರಿಪ್ರಸಾದ್ ಅವರನ್ನು ಕೇವಲ ಅಸ್ತçವಾಗಿ ಬಳಸಿಕೊಳ್ಳಲಾಗುತ್ತಿದೆ. ಇದನ್ನೆಲ್ಲ ಗಮನಿಸಿದರೆ ಜನವರಿ ಬಳಿಕ ಕಾಂಗ್ರೆಸ್ ಸರ್ಕಾರ ಪತನ ಖಚಿತ ಎಂದು ಯತ್ನಾಳ್ ಹೇಳಿದ್ದಾರೆ. ಹರಿಪ್ರಸಾದ್ ಅವರಿಗೆ ನೋವಿರುವುದರಿಂದ ಬಹಿರಂಗವಾಗಿ ಹೇಳಿಕೊಂಡಿದ್ದಾರೆ. ಬಿ.ಕೆ. ಹರಿಪ್ರಸಾದ್ ಯಾರ ಕುಮ್ಮಕ್ಕಿನಿಂದ ಮಾತನಾಡುತ್ತಿದ್ದಾರೆ? ಸಿದ್ಧರಾಮಯ್ಯ ಅವರನ್ನ ಸಿಎಂ ಸ್ಥಾನದಿಂದ ಕೆಳಗಿಳಿಸಲು ಈ ತಂತ್ರ ನಡೆಸಿದ್ದಾರೆ. ವೇಟಿಂಗ್ ಸಿಎಂ ಕುಮ್ಮಕ್ಕಿನಿಂದ ಹರಿಪ್ರಸಾದ್ ಅಸಮಾಧಾನ ಹೊರಹಾಕುತ್ತಿದಾರೆ ಎಂದು ಪರೋಕ್ಷವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.