ಸೋಮವಾರಪೇಟೆ, ಸೆ. ೧೯: ಇಲ್ಲಿನ ಪೊಲೀಸ್ ಠಾಣೆ ಹಾಗೂ ಕೊಡಗು ಜಿಲ್ಲಾ ವಿಶೇಷ ಮಕ್ಕಳ ಪೊಲೀಸ್ ಘಟಕದ ವತಿಯಿಂದ ತಾಲೂಕಿನ ಐಗೂರು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಮಕ್ಕಳಿಗೆ ಕಾನೂನು ಜಾಗೃತಿ ಕಾರ್ಯಕ್ರಮ ನಡೆಯಿತು.
ಜಿಲ್ಲಾ ವಿಶೇಷ ಮಕ್ಕಳ ಪೊಲೀಸ್ ಘಟಕದ ಸಿಬ್ಬಂದಿ ಸುಮತಿ ಅವರು, ಮಾದಕ ವ್ಯಸನದಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ, ಬಾಲ ಕಾರ್ಮಿಕ ಪದ್ಧತಿ ಹಾಗೂ ಬಾಲ್ಯವಿವಾಹ ನಿಷೇಧ ಕಾಯ್ದೆ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ವಿಶೇಷ ಘಟಕದ ಸಿಬ್ಬಂದಿ ಮಹೇಶ್ ಅವರು ಪೋಕ್ಸೋ ಹಾಗೂ ಜೆ.ಜೆ. ಕಾಯ್ದೆ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.
ವೇದಿಕೆಯಲ್ಲಿ ಹೆಡ್ಕಾನ್ಸ್ಟೇಬಲ್ ವೀಣಾ, ಶಾಲಾ ಮುಖ್ಯ ಶಿಕ್ಷಕ ಯಶ್ವಂತ್ಕುಮಾರ್ ಇದ್ದರು.