ಮಡಿಕೇರಿ, ಸೆ. ೨೦: ಕೊಡಗು ಜಿಲ್ಲೆಯಲ್ಲಿ ಪ್ರತಿವರ್ಷ ಅಕ್ಟೋಬರ್ ೧೭ ಹಾಗೂ ೧೮ರಂದು ನಡೆಯುವ ತುಲಾ ಸಂಕ್ರಮಣದ ಕಾವೇರಿ ತೀರ್ಥೋದ್ಭವ ಕ್ಷಣ ಅತ್ಯಂತ ಪವಿತ್ರವಾದದ್ದು ಹಾಗೂ ಸ್ಥಳೀಯವಾಗಿ ಇದು ಅತೀ ವಿಜೃಂಭಣೆಯಿAದ ಆಚರಿಸುವ ಹಬ್ಬ ಕೂಡ ಎನ್ನುವುದನ್ನು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ ಮರೆತು ಹೋದಂತಿದ್ದು, ಇದೇ ದಿನ ಇಂಜಿನಿಯರಿAಗ್ ವಿದ್ಯಾರ್ಥಿಗಳಿಗೆ ಪರೀಕ್ಷಾ ವೇಳಾಪಟ್ಟಿಯನ್ನು ಹೊರಡಿಸಿದೆ. ಕೊಡಗು ಜಿಲ್ಲೆಯ ಹಳ್ಳಿಗಟ್ಟುವಿನಲ್ಲಿರುವ ಸಿಐಟಿ ಕಾಲೇಜು ಸೇರಿದಂತೆ ಇಂಜಿನಿಯರಿAಗ್ ವಿದ್ಯಾರ್ಥಿಗಳು ಮಾತ್ರವಲ್ಲದೆ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ಮತ್ತು ಪೋಷಕರಿಗೂ ಕಿರಿಕಿರಿ ಉಂಟಾಗಿದ್ದು ಈ ಕೂಡಲೇ ಈ ಎರಡು ದಿನಗಳ ಪರೀಕ್ಷಾ ವೇಳಾಪಟ್ಟಿಯನ್ನು ಬದಲಾಯಿಸಬೇಕು ಎಂದು ಅಖಿಲ ಕೊಡವ ಸಮಾಜ ಹಾಗೂ ಅಂಗಸAಸ್ಥೆಗಳು ಸಂಬAಧಪಟ್ಟವರಿಗೆ ಪತ್ರ ಬರೆಯುವ ಮೂಲಕ ಎಚ್ಚರಿಸಿದ್ದು ಸ್ಥಳೀಯ ಸಿಐಟಿ ಕಾಲೇಜಿನ ಪ್ರಮುಖರ ಗಮನಕ್ಕೂ ತಂದಿದೆ.

ಈ ಕುರಿತು ಜಂಟಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅಖಿಲ ಕೊಡವ ಸಮಾಜ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ, ಅಖಿಲ ಕೊಡವ ಸಮಾಜ ಯೂತ್ ವಿಂಗ್ ಅಧ್ಯಕ್ಷ ಚಮ್ಮಟೀರ ಪ್ರವೀಣ್ ಉತ್ತಪ್ಪ ಹಾಗೂ ಪೊಮ್ಮಕ್ಕಡ ಪರಿಷತ್ ಅಧ್ಯಕ್ಷೆ ಬಾಚರಣಿಯಂಡ ರಾಣು ಅಪ್ಪಣ್ಣ ಅವರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ ಇದರ ನಡೆಯನ್ನು ಖಂಡಿಸಿರುವುದಲ್ಲದೆ ಈ ಕೂಡಲೇ ಪರೀಕ್ಷಾ ವೇಳಾಪಟ್ಟಿಯನ್ನು ಬದಲಾಯಿಸಬೇಕು ಎಂದು ಒತ್ತಾಯಿಸಿದ್ದು, ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರವೇ ತೀರ್ಥೋದ್ಭವದ ಎರಡು ದಿವಸ ಅಂದರೆ ಅಕ್ಟೋಬರ್ ೧೭ ಹಾಗೂ ೧೮ರಂದು ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಿಸುವ ಮೂಲಕ ಕಾವೇರಿ ಮಾತೆಗೆ ಕನಿಷ್ಟ ಕೃತಜ್ಞತೆ ಸಲ್ಲಿಸಬೇಕಾಗಿದೆ ಎಂದು ಅವರು ಒತ್ತಾಯಿಸಿದ್ದಾರೆ.

ಸಿಐಟಿ ಕಾಲೇಜು ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಅಧೀನಕ್ಕೆ ಒಳಪಡುತ್ತಿದ್ದು ಈಗಾಗಲೇ ವಿಶ್ವವಿದ್ಯಾಲಯದ ಉಪ ಕುಲಪತಿಗಳು ಹಾಗೂ ರಿಜಿಸ್ಟಾçರ್‌ಗೆ ಪತ್ರ ಬರೆದು ಮನವರಿಕೆ ಮಾಡಿಕೊಡುವ ಮೂಲಕ ಎಚ್ಚರಿಕೆಯನ್ನು ನೀಡಲಾಗಿದೆ. ಅದರ ಪ್ರತಿಯನ್ನು ಸ್ಥಳೀಯ ಸಿಐಟಿ ಕಾಲೇಜಿಗೂ ರವಾನಿಸಲಾಗಿದೆ ಎಂದು ತಿಳಿಸಿದ್ದಾರೆ.

(ಮೊದಲ ಪುಟದಿಂದ) ಸರ್ಕಾರ ಕೂಡ ಈ ನಿಟ್ಟಿನಲ್ಲಿ ಗಮನ ಹರಿಸಬೇಕು ಎಂದು ಆಗ್ರಹಿಸಲಾಗಿದೆ. ಸರ್ಕಾರಕ್ಕೆ ಹಾಗೂ ಸಂಬAಧಪಟ್ಟವರಿಗೆ ದಕ್ಷಿಣ ಭಾರತದಲ್ಲಿಯೇ ಅತ್ಯಂತ ಪವಿತ್ರ ಪುಣ್ಯಕ್ಷೇತ್ರವಾಗಿರುವ ತಲಕಾವೇರಿಯ ಬಗ್ಗೆ ಹಾಗೂ ಕೊಡಗಿನ ಬಗ್ಗೆ ಇಷ್ಟೊಂದು ಅಸಡ್ಡೆ ಸರಿಯಲ್ಲ. ಈ ಕೂಡಲೇ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ ವಿದ್ಯಾರ್ಥಿಗಳ ಪರೀಕ್ಷಾ ವೇಳಾಪಟ್ಟಿಯನ್ನು ಬದಲಿಸಬೇಕಿದೆ ಎಂದು ಅವರು ಒತ್ತಾಯಿಸಿದ್ದಾರೆ.

ಕಾವೇರಿ ನದಿ ನೀರನ್ನು ನಾವು ಸಾರ್ವತ್ರಿಕವಾಗಿ ಬಳಸುತ್ತಿಲ್ಲ ಕರ್ನಾಟಕ, ಕೇರಳ, ತಮಿಳುನಾಡು ಈ ಮೂರು ರಾಜ್ಯಗಳು ಕೂಡ ಕಾವೇರಿ ನದಿ ನೀರಿನ ಉಪಯೋಗವನ್ನು ಪಡೆದುಕೊಳ್ಳುತ್ತಿವೆ. ಒಂದು ರೀತಿಯಲ್ಲಿ ಇದಕ್ಕೆ ಕೇಂದ್ರ ಸರ್ಕಾರವೇ ರಜೆ ಘೋಷಿಸಬೇಕು. ಕನಿಷ್ಟ ರಾಜ್ಯ ಸರಕಾರವಾದರೂ ರಾಜ್ಯಾದ್ಯಂತ ರಜೆ ಘೋಷಿಸುವ ಮೂಲಕ ಕಾವೇರಿ ಮಾತೆಗೆ ಗೌರವ ನೀಡಬೇಕಿದೆ ಹಾಗೂ ಕಾವೇರಿ ನದಿ ನೀರಿನ ಋಣವನ್ನು ತೀರಿಸಲು ಮುಂದಾಗಬೇಕಿದೆ, ಈ ನಿಟ್ಟಿನಲ್ಲಿ ನಮ್ಮ ಶಾಸಕರುಗಳು ಸ್ಪಂದಿಸಬೇಕಿದೆ ಎಂದು ಅವರು ಒತ್ತಾಯಿಸಿದ್ದಾರೆ.