ಮಡಿಕೇರಿ, ಸೆ. ೨೦ : ಮೈಸೂರಿನ ಕೊಡಗು ಗೌಡ ಸಮಾ ಜದ ಆಶ್ರಯದಲ್ಲಿ ವಿಜಯನಗರ ೨ನೇ ಹಂತದಲ್ಲಿರುವ ಸಮಾಜದ ಸಭಾ ಭವನದಲ್ಲಿ ಕೊಡಗಿನ ಸಾಂಪ್ರ ದಾಯಿಕ ನಾಡಹಬ್ಬ ಕೈಲು ಮುಹೂರ್ತ ಹಬ್ಬವನ್ನು ವಿಜೃಂ ಭಣೆಯಿಂದ ಆಚರಿಸಲಾಯಿತು.

ಭಕ್ತಿ ಪೂರ್ವಕವಾಗಿ ಆಯುಧ ಪೂಜೆ ನೆರವೇರಿಸಿದ ನಂತರ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಸಭಾ ಕಾರ್ಯಕ್ರಮ ನಡೆಯಿತು. ಸಮಾಜದ ಅಧ್ಯಕ್ಷ ತೋಟಂಬೈಲ್ ಮನೋಹರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅತಿಥಿ ಗಳಾಗಿ ಕೊಡಗು ಗೌಡ ವಿದ್ಯಾ ಸಂಘದ ಅಧ್ಯಕ್ಷ ಅಂಬೆಕಲ್ಲು ನವೀನ್ ಕುಶಾಲಪ್ಪ, ಶಾಸಕ ಹರೀಶ್ ಗೌಡ, ಮಾಜಿ ಶಾಸಕ ವಾಸು , ಪಾಲಿಕೆ ಸದಸ್ಯ ಕೆ.ವಿ.ಶ್ರೀಧರ್ ಉಪಸ್ಥಿತರಿದ್ದರು.

ಹಬ್ಬದ ಪ್ರಯುಕ್ತ ನಡೆದ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು, ಕ್ರೀಡಾ ಕೂಟದ ವಿಜೇತರಿಗೆ ಬಹುಮಾನ ವಿತರಣೆ, ಸಮಾಜದ ಸದಸ್ಯರ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ವಿವಿಧ ಕ್ಷೇತ್ರ ಗಳಲ್ಲಿ ರಾಷ್ಟಿçÃಯ, ಅಂತರರಾಷ್ಟಿçÃಯ ಮಟ್ಟದಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು. ಉಪನ್ಯಾಸಕ ಪಟ್ಟಡ ಶಿವಕುಮಾರ್ ಕಾರ್ಯಕ್ರಮ ನಿರೂಪಿಸಿದರೆ, ಚೆರಿಯ ಮನೆ ನರೇಶ್ ಕುಮಾರ್ ವಂದಿಸಿದರು.