ಮಡಿಕೇರಿ, ಸೆ. ೧೯: ಪ್ರಸಕ್ತ ಸಾಲಿ ನಲ್ಲಿ ಯುವಜನೋತ್ಸವ ಕಾರ್ಯ ಕ್ರಮದ ಪ್ರಯುಕ್ತ ಎಚ್‌ಐವಿ ಏಡ್ಸ್ ಜಾಗೃತಿಗಾಗಿ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಸನ್ ಸೊಸೈಟಿ ವತಿ ಯಿಂದ ಮ್ಯಾರಥಾನ್ ಸ್ಪರ್ಧೆಗೆ ತಾ.೨೦ ರಂದು ಬೆಳಿಗ್ಗೆ ೭.೩೦ ಗಂಟೆಗೆ ನಗ ರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂ ಗಣದಲ್ಲಿ ಚಾಲನೆ ದೊರೆಯಲಿದೆ.

ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಿAದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತ, ಜನರಲ್ ತಿಮ್ಮಯ್ಯ ವೃತ್ತ ಮೂಲಕ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ ತಲುಪಲಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಡಿಕೇರಿ ರೋಟರಿ ವುಡ್ಸ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಇವರ ಸಹಯೋಗದಲ್ಲಿ ಮ್ಯಾರಥಾನ್ ಸ್ಪರ್ಧೆ ನಡೆಯಲಿದೆ. ಜಿಲ್ಲೆಯ ವಿವಿಧ ಕಾಲೇಜುಗಳ ೧೭ ರಿಂದ ೨೫ ವರ್ಷದ ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾ ಏಡ್ಸ್ ನಿಯಂ ತ್ರಣಾಧಿಕಾರಿ ತಿಳಿಸಿದ್ದಾರೆ.