ಶನಿವಾರಸಂತೆ, ಸೆ. ೧೯: ಪಟ್ಟಣದ ರೋಟರಿ ಸಂಸ್ಥೆ ವತಿಯಿಂದ ಶ್ರೀ ವಿಘ್ನೇಶ್ವರ ವಿದ್ಯಾಸಂಸ್ಥೆ ಬಾಲಿಕಾ ಪದವಿಪೂರ್ವ ಕಾಲೇಜಿನಲ್ಲಿ ಇಂರ‍್ಯಾಕ್ಟ್ ಸಂಸ್ಥೆಯ ಪದಗ್ರಹಣ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಪದಗ್ರಹಣ ಅಧಿಕಾರಿಯಾಗಿ ಆಗಮಿಸಿದ್ದ ಪಿಹೆಚ್‌ಎಫ್ ಪಿ.ಕೆ. ರವಿ ಸಂಸ್ಥೆಯ ನೂತನ ಅಧ್ಯಕ್ಷೆಯಾಗಿ ಆಯ್ಕೆಯಾದ ದ್ವಿತೀಯ ಪಿ.ಯು. ವಿದ್ಯಾರ್ಥಿನಿ ಸುಸ್ಮಿತಾ ಹಾಗೂ ಕಾರ್ಯದರ್ಶಿಯಾಗಿ ಆಯ್ಕೆಯಾದ ದ್ವಿತೀಯ ಪಿ.ಯು. ವಿದ್ಯಾರ್ಥಿನಿ ಅಂಕಿತಾ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ನಂತರ ಅವರು ಮಾತನಾಡಿ, ವಿಶ್ವ ವ್ಯಾಪಿ ಸಮಾಜ ಸೇವೆಯಲ್ಲಿ ರೋಟರಿ ಸಂಸ್ಥೆಯ ಸಾಧನೆ, ಗುರಿ ಹಾಗೂ ಸಂಸ್ಥೆಯ ಜವಾಬ್ದಾರಿ, ಕರ್ತವ್ಯಗಳ ಬಗ್ಗೆ ಮಾಹಿತಿ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಟಿ.ಪಿ. ಶಿವಪ್ರಕಾಶ್ ಪ್ರಾಸ್ತಾವಿಕ ನುಡಿಗಳನ್ನಾಡಿ, ಶುಭ ಕೋರಿದರು. ಸಂಸ್ಥೆಯ ಸದಸ್ಯರಾದ ವಿದ್ಯಾರ್ಥಿನಿಯರು ಅನಿಸಿಕೆ ಹಂಚಿಕೊAಡರು.

ಕೆ.ಪಿ. ಜಯಕುಮಾರ್ ಮಾತನಾಡಿ, ನಿಸ್ವಾರ್ಥ ಸಮಾಜ ಸೇವೆಯೇ ರೋಟರಿ ಸಂಸ್ಥೆಯ ಉದ್ದೇಶ ಹಾಗೂ ಗುರಿ ಎಂದರು. ಅಧ್ಯಕ್ಷತೆ ವಹಿಸಿದ್ದ ರೋಟರಿ ಸಂಸ್ಥೆಯ ಅಧ್ಯಕ್ಷ ಎ.ಹೆಚ್. ಚಂದ್ರಕಾAತ್ ಮಾತನಾಡಿ, ರೋಟರಿ ಸಂಸ್ಥೆ ವಿಶ್ವದಲ್ಲಿ ಭರವಸೆ ಮೂಡಿಸುವ ಸಂಸ್ಥೆಯಾಗಿದೆ. ಮನುಷ್ಯ ಜಗತ್ತಿನಲ್ಲಿ ಭರವಸೆ ಮೂಡಿಸುವ ಸೇವೆ ಮುಖ್ಯವಾಗಿದ್ದು ರೋಟರಿ ಎಲ್ಲಾ ಪ್ರಕಾರದ ಸಮಾಜಮುಖಿ ಕೆಲಸಗಳನ್ನು ಮಾಡುವ ಸಂಸ್ಥೆಯಾಗಿದೆ ಎಂದರು.

ರೋಟರಿ ಸಂಸ್ಥೆ ಕಾರ್ಯದರ್ಶಿ ಸೋಮಶೇಖರ್, ರೊಟೇರಿಯನ್‌ಗಳಾದ ಎ.ಡಿ. ಮೋಹನ್ ಕುಮಾರ್, ಅರವಿಂದ್, ಸಂತೋಷ್, ಹೆಚ್.ಎಸ್. ವಸಂತ್ ಕುಮಾರ್, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.