ಸೂರ್ಯನತ್ತ ಸಾಗಿದ ಆದಿತ್ಯ ಎಲ್-೧
ಬೆಂಗಳೂರು, ಸೆ. ೧೯: ತಾ. ೨ ರಂದು ಶ್ರೀಹರಿಕೋಟಾದ ಸತೀಶ್ ಧವಾನ್ ಬಾಹ್ಯಾಕಾಶ ಕೇಂದ್ರದಿAದ ಉಡಾವಣೆಗೊಂಡ ಇಸ್ರೋದ ಆದಿತ್ಯ ಎಲ್-೧ ನೌಕೆಯು ಭೂಮಿಯ ಸುತ್ತದ ಕಕ್ಷೆಯಲ್ಲಿನ ತನ್ನ ಪಯಣ ಮುಗಿಸಿ ಭೂಮಿಯಿಂದ ಸೂರ್ಯನ ಮಾರ್ಗದಲ್ಲಿ ಸುಮಾರು ೧೫ ಲಕ್ಷ ಕಿ.ಮೀ. ದೂರದ ಎಲ್-೧ ಪ್ರದೇಶಕ್ಕೆ ತೆರಳಲಾರಂಭಿಸಿದೆ. ತಾ. ೨ ರಂದು ಉಡಾವಣೆಗೊಂಡ ಬಳಿಕ ೪ ಬಾರಿ ಅದರ ಕಕ್ಷೆ ಗಾತ್ರ ಹೆಚ್ಚಿಸುವ ಕಾರ್ಯವನ್ನು ಇಸ್ರೋದ ಬೆಂಗಳೂರು ಕೇಂದ್ರದ ಮೂಲಕ ನೆರವೇರಿಸಲಾಯಿತು. ೪ನೇ ಹಂತದಲ್ಲಿ ೨೫೬ ಕಿ.ಮೀ. ಕನಿಷ್ಟ ಹಾಗೂ ೧,೨೧,೯೭೩ ಗರಿಷ್ಠ ಕಕ್ಷೆಯಲ್ಲಿ ಸುತ್ತಿ ವೇಗ ಹೆಚ್ಚಿಸಿಕೊಂಡ ಆದಿತ್ಯ ಇದೀಗ ತಾ. ೧೯ ರಂದು ಎಲ್-೧ ಪ್ರದೇಶದತ್ತ ಸಾಗಿದೆ. ಇನ್ನು ೧೧೦ ದಿವಸಗಳ ಬಳಿಕ ಎಲ್-೧ ಪ್ರದೇಶ ತಲುಪಲಿದೆ.
ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಅಭಿನವ ಹಾಲಶ್ರೀ ಸ್ವಾಮೀಜಿ ಬಂಧನ
ಬೆAಗಳೂರು, ಸೆ. ೧೯: ಬಿಜೆಪಿ ಟಿಕೆಟ್ ಹಗರಣದಲ್ಲಿ ಮೂರನೇ ಆರೋಪಿಯಾಗಿರುವ ವಿಜಯನಗರ ಜಿಲ್ಲೆಯ ಹಿರೇಹಡಗಲಿ ತಾಲೂಕಿನ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಬೆಂಗಳೂರು ಪೊಲೀಸ್ನ ಅಪರಾಧ ನಿಗ್ರಹ ದಳದ ಪೊಲೀಸರು ಒಡಿಶಾದಲ್ಲಿ ವಶಕ್ಕೆ ಪಡೆದಿದ್ದಾರೆ. ಪ್ರಕರಣ ಬೆಳಕಿಗೆ ಬಂದಾಗಿನಿAದ ಸ್ವಾಮೀಜಿ ನಾಪತ್ತೆಯಾಗಿದ್ದರು. ಅವರು ಆಶ್ರಮದಲ್ಲಿರುವ ಕಾರನ್ನು ಖುದ್ದಾಗಿ ಡ್ರೆöÊವ್ ಮಾಡಿಕೊಂಡು ಬೇರೆಲ್ಲಿಗೋ ಹೋಗಿರುವ ಬಗ್ಗೆ ಮಾಹಿತಿಗಳು ಲಭ್ಯವಾಗಿದ್ದವು. ಹಾಗಾಗಿ, ಅತ್ತ ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದರು. ಮೂರು ದಿನಗಳ ಹಿಂದೆ, ಸ್ವಾಮೀಜಿಯವರ ಖಾಸಗಿ ಡ್ರೆöÊವರ್ ಲಿಂಗರಾಜುನನ್ನು ಬಂಧಿಸಿದ್ದ ಸಿಸಿಬಿ ಪೊಲೀಸರು ಆತನ ವಿಚಾರಣೆ ನಡೆಸಿದಾಗ, ಸ್ವಾಮೀಜಿಯವರು ತಾವೇ ಖುದ್ದಾಗಿ ಕಾರು ಚಲಾಯಿಸಿಕೊಂಡು ಮೈಸೂರಿಗೆ ಹೋಗಿದ್ದಾಗಿಯೂ, ಅಲ್ಲಿ ಕಾರಿನ ನಂಬರ್ ಪ್ಲೇಟ್ಗಳನ್ನು ಕಳಚಿಟ್ಟು ಅಲ್ಲಿಂದ ಹೈದರಾಬಾದ್ಗೆ ತೆರಳಿದ್ದಾಗಿಯೂ ತಿಳಿದುಬಂದಿತ್ತು. ಹಾಗಾಗಿ, ಸಿಸಿಬಿ ಪೊಲೀಸರ ತಂಡವೊAದು ಹೈದರಾಬಾದ್ ತೆರಳಿತ್ತು. ಆದರೆ, ಇಂದು ಬೆಳಿಗ್ಗೆ ಸ್ವಾಮೀಜಿಯವರನ್ನು ಒಡಿಶಾದಲ್ಲಿ ಬಂಧಿಸಲಾಗಿದೆ. ಒಡಿಶಾದ ಕಟಕ್ನಲ್ಲಿನ ಖಾಸಗಿ ಹೊಟೇಲ್ವೊಂದರಲ್ಲಿ ನೆಲೆಸಿದ್ದ ಸ್ವಾಮೀಜಿಯನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಹಾಲಶ್ರೀ ಸ್ವಾಮೀಜಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ಜಾಮೀನು ಸಿಗುವ ಮುನ್ನವೇ ಬಂಧಿಸಲಾಗಿದೆ.
ಅತ್ಯಾಚಾರವೆಸಗಿ ಬರ್ಬರ ಹತ್ಯೆ!
ಗುವಾಹಟಿ, ಸೆ. ೧೯: ಅಸ್ಸಾಂನ ಮೊರಿಗಾಂವ್ ಜಿಲ್ಲೆಯಲ್ಲಿ ಒಂದು ತಿಂಗಳ ಮಗುವಿನ ತಾಯಿಯನ್ನು ಅವರ ಮನೆಯಲ್ಲಿ ಸಾಮೂಹಿಕ ಅತ್ಯಾಚಾರ ಮಾಡಿದ್ದಲ್ಲದೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಜಿಲ್ಲೆಯ ಪಸಾತಿಯಾ ಪ್ರದೇಶದಲ್ಲಿ ಸೋಮವಾರ ರಾತ್ರಿ ಈ ಘಟನೆ ನಡೆದಿದೆ. ಮೃತ ಮಹಿಳೆ ೨೫ ವರ್ಷದ ನಿಕಿತಾ ದೇವಿ ಎಂದು ತಿಳಿದುಬಂದಿದ್ದು, ಆಕೆಯ ಪತಿ ಕೆಲಸ ನಿಮಿತ್ತ ಹೊರಹೋಗಿದ್ದಾಗ ಘಟನೆ ನಡೆದಿದೆ. ಆಕೆ ತನ್ನ ನವಜಾತ ಶಿಶುವಿನೊಂದಿಗೆ ಮನೆಯಲ್ಲಿದ್ದಾಗ ಅಪರಿಚಿತ ದುಷ್ಕರ್ಮಿಗಳು ಬಾಗಿಲು ಮುರಿದು, ಆಕೆಯ ಮೇಲೆ ಅತ್ಯಾಚಾರ ಎಸಗಿ, ನಂತರ ಕತ್ತು ಹಿಸುಕಿ ಕೊಂದಿದ್ದಾರೆ.
ಲಷ್ಕರ್ ಕಮಾಂಡರ್ ಉಜೈರ್ ಖಾನ್ ಹತ್ಯೆ
ಶ್ರೀನಗರ(ಜಮ್ಮು ಮತ್ತು ಕಾಶ್ಮೀರ), ಸೆ. ೧೯: ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಲಷ್ಕರ್ ಕಮಾಂಡರ್ ಉಜೈರ್ ಖಾನ್ ಹತ್ಯೆಯಾಗಿದ್ದಾನೆ. ಮತ್ತೊಬ್ಬ ಉಗ್ರನ ಶವವನ್ನು ಸೇನೆ ಪತ್ತೆಮಾಡಿದೆ ಎಂದು ಕಾಶ್ಮೀರ ಎಡಿಜಿಪಿ ವಿಜಯ್ ಕುಮಾರ್ ಮಾಹಿತಿ ನೀಡಿದ್ದಾರೆ. ಭಯೋತ್ಪಾದಕ ಉಜೈರ್ ಖಾನ್ ತಲೆಗೆ ೧೦ ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು. ಉಜೈರ್ ಹತ್ಯೆಯೊಂದಿಗೆ ಒಂದು ವಾರದ ಅನಂತನಾಗ್ ಎನ್ಕೌಂಟರ್ ಅಂತ್ಯಗೊAಡಿದೆ. ಅನಂತ್ನಾಗ್ ಜಿಲ್ಲೆಯ ಗರೋಲ್ ಅರಣ್ಯದಲ್ಲಿ ಒಂದು ವಾರದ ಜಂಟಿ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆ ಕೊನೆಗೊಂಡಿದೆ ಆದರೆ ಶೋಧ ಕಾರ್ಯಾಚರಣೆ ಮುಂದುವರಿಯುತ್ತದೆ ಎಂದು ಕಾಶ್ಮೀರ ಹೆಚ್ಚುವರಿ ಡಿಜಿಪಿ ವಿಜಯ್ ಕುಮಾರ್ ಹೇಳಿದ್ದಾರೆ. ಸೋಮವಾರ ಪತ್ತೆಯಾದ ಶವವನ್ನು ಲಷ್ಕರ್-ಎ-ತೊಯ್ಬಾ ಕಮಾಂಡರ್ ಉಜೈರ್ ಖಾನ್ ಎಂದು ಗುರುತಿಸಲಾಗಿದೆ. ಮತ್ತೋರ್ವ ಭಯೋತ್ಪಾದಕನ ಶವ ಪತ್ತೆಯಾಗಿದೆ ಆದರೆ ಆತನ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಅವರು ಹೇಳಿದ್ದಾರೆ.
ಹೊಂಡಕ್ಕೆ ಬಿದ್ದ ಕಾರು; ಒಂದೇ ಕುಟುಂಬದ ನಾಲ್ವರ ಸಾವು
ವಿದಿಶಾ, ಸೆ. ೧೯: ಮಳೆನೀರು ತುಂಬಿದ ಹೊಂಡಕ್ಕೆ ಕಾರು ಉರುಳಿ ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಾವ್ನಪ್ಪಿರುವ ಘಟನೆ ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ನಡೆದಿದೆ. ಮೂವರು ಅಪ್ರಾಪ್ತ ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಸೋಮವಾರ ರಾತ್ರಿ ಕುಟುಂಬವು ಹೈದರ್ಗಢ ಗ್ರಾಮದಲ್ಲಿ ತಮ್ಮ ಕೃಷಿ ಭೂಮಿಗೆ ಭೇಟಿ ನೀಡಿ ಹಿಂತಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ತಿರುವಿನಲ್ಲಿ ಚಾಲಕನು ರಿವರ್ಸ್ ತೆಗೆದುಕೊಳ್ಳುತ್ತಿದ್ದ ವೇಳೆ ಮಳೆ ನೀರಿನಿಂದ ತುಂಬಿದ ಹೊಂಡಕ್ಕೆ ಕಾರು ಬಿದ್ದಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಮೀರ್ ಯಾದವ್ ಹೇಳಿದ್ದಾರೆ. ಮೃತರನ್ನು ಶಕೀಲಾ ಬಿ (೩೦), ನಿಖತ್ (೧೩), ಅಯಾನ್ (೧೦) ಮತ್ತು ಶಾದ್ (೭) ಎಂದು ಗುರುತಿಸಲಾಗಿದೆ ಎಂದು ಎಎಸ್ಪಿ ತಿಳಿಸಿದ್ದಾರೆ.
ಭಾರತದ ರಾಜತಾಂತ್ರಿಕ ಅಧಿಕಾರಿಯನ್ನು ಉಚ್ಛಾಟಿಸಿದ ಕೆನಡಾ
ಕೆನಡಾ, ಸೆ. ೧೯: ಖಲಿಸ್ತಾನಿ ಭಯೋತ್ಪಾದಕ ಹರ್ದಿಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದು ಆರೋಪಿಸಿರುವ ಕೆನಡಾ ಸರಕಾರ ಒಟ್ಟಾವದಲ್ಲಿರುವ ಭಾರತದ ಹಿರಿಯ ರಾಜತಾಂತ್ರಿಕ ಅಧಿಕಾರಿಯನ್ನು ಉಚ್ಛಾಟನೆ ಮಾಡಿದೆ. ಜೂನ್ನಲ್ಲಿ ಖಲಿಸ್ತಾನಿ ಭಯೋತ್ಪಾದಕ ಹರ್ದಿಪ್ ಸಿಂಗ್ ನಿಜ್ಜರ್ ಹತ್ಯೆಯಾಗಿತ್ತು. ‘ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್’ ಮುಖ್ಯಸ್ಥ ಪವನ್ ಕುಮಾರ್ ರೈ ಉಚ್ಛಾಟನೆಗೊಂಡ ಅಧಿಕಾರಿಯಾಗಿದ್ದಾರೆ. ಖಲಿಸ್ತಾನಿ ಭಯೋತ್ಪಾದಕ ಹತ್ಯೆಯ ಹಿಂದೆ ಭಾರತ ಸರಕಾರದ ಏಜೆಂಟರುಗಳ ಕೈವಾಡವಿದೆ ಎಂಬುವುದಕ್ಕೆ ನಮ್ಮ ಸರಕಾರದ ಬಳಿ ಸಾಕ್ಷಿಗಳಿವೆ ಎಂದು ಕೆನಡಾದ ಪ್ರಧಾನಮಂತ್ರಿ ಜಸ್ಟಿನ್ ಟ್ರುಡೊ ಸೋಮವಾರ ಮಧ್ಯಾಹ್ನ ನಡೆದ ಸಂಸತ್ ಅಧಿವೇಶನದಲ್ಲಿ ತಿಳಿಸಿದ್ದರು.
ಕಾವೇರಿ ವಿವಾದ: ಇಂದು ದೆಹಲಿಯಲ್ಲಿ ರಾಜ್ಯದ ಸಂಸದರು, ಸಚಿವರೊಂದಿಗೆ ಸಿಎಂ ಸಭೆ
ಬೆಂಗಳೂರು, ಸೆ. ೧೯: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಸೇರಿ ರಾಜ್ಯಕ್ಕೆ ಸಂಬAಧಿಸಿದ ಹಲವು ಸಮಸ್ಯೆಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾ. ೨೦ ರಂದು ರಾಷ್ಟç ರಾಜಧಾನಿಯಲ್ಲಿ ಕರ್ನಾಟಕದ ಎಲ್ಲಾ ಸಂಸದರು ಮತ್ತು ಕೇಂದ್ರ ಸಚಿವರೊಂದಿಗೆ ಸಭೆ ನಡೆಸಲಿದ್ದಾರೆ. ಸ್ಥಗಿತಗೊಂಡಿರುವ ಹಲವಾರು ಅಭಿವೃದ್ಧಿ ಯೋಜನೆಗಳು ಮತ್ತು ಕೇಂದ್ರದ ಅನುಮತಿಗಾಗಿ ಕಾಯುತ್ತಿರುವ ಯೋಜನೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸುವ ಸಾಧ್ಯತೆಯಿದೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು, ಕಾವೇರಿ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮಧ್ಯಸ್ಥಿಕೆಗೆ ತಮ್ಮ ಕಚೇರಿಗಳನ್ನು ಬಳಸಿಕೊಳ್ಳುವಂತೆ ರಾಜ್ಯದ ಕೇಂದ್ರ ಸಚಿವರು ಮತ್ತು ಸಂಸದರನ್ನು ಒತ್ತಾಯಿಸುವ ಸಾಧ್ಯತೆಯಿದೆ. ತಮಿಳುನಾಡಿಗೆ ಇನ್ನೂ ೧೫ ದಿನಗಳ ಕಾಲ ನಿತ್ಯ ೫ ಸಾವಿರ ಕ್ಯೂಸೆಕ್ ನೀರು ಬಿಡುವುದನ್ನು ಮುಂದುವರಿಸುವAತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯುಎಂಎ) ಕರ್ನಾಟಕಕ್ಕೆ ಸೋಮವಾರ ಆದೇಶಿಸಿದ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದುಕೊಂಡಿದೆ.