ಮಡಿಕೇರಿ, ಸೆ. ೨೦: ಜಿಲ್ಲಾ ಮಟ್ಟದಲ್ಲಿ ಸಾರ್ವಜನಿಕರ ಅಹವಾಲುಗಳಿಗೆ ಸೂಕ್ತ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಪ್ರತಿ ತಿಂಗಳು ‘ಜನತಾ ದರ್ಶನ’ ಕಾರ್ಯಕ್ರಮ ಹಮ್ಮಿಕೊಂಡು ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಒದಗಿಸುವ ಸಂಬAಧ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತಾ. ೨೫ ರಂದು ಏಕಕಾಲದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಂಬAಧಿಸಿದ ಚುನಾಯಿತ ಪ್ರತಿನಿಧಿಗಳನ್ನು ಒಳಗೊಂಡAತೆ ‘ಜನತಾ ದರ್ಶನ’ ಕಾರ್ಯಕ್ರಮ ಹಮ್ಮಿಕೊಳ್ಳಲು ಮುಖ್ಯಮಂತ್ರಿ ಅವರು ಸೂಚನೆ ನೀಡಿದ್ದಾರೆ.

ಅದರಂತೆ, ಕೊಡಗು ಜಿಲ್ಲೆಯಲ್ಲಿ ತಾ. ೨೫ ರಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ “ಜನತಾ ದರ್ಶನ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕೊಡಗು ಜಿಲ್ಲಾಡಳಿತವು ‘ಜನತಾ ದರ್ಶನ’ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಆಯೋಜಿಸಿ ಸಾರ್ವಜನಿಕರಿಗೆ ಅದರ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ, ತಾ. ೨೧ ಮತ್ತು ೨೨ ರಂದು ಬೆಳಿಗ್ಗೆ ೧೦ ರಿಂದ ಸಂಜೆ ೪ ಗಂಟೆವರೆಗೆ ಸಾರ್ವಜನಿಕರು ಅವರ ಲಿಖಿತ ಅಹವಾಲುಗಳನ್ನು ಅಗತ್ಯ ದಾಖಲೆಗಳ ಸಹಿತ ಜಿಲ್ಲಾಡಳಿತ ಭವನದ ನೆಲಮಹಡಿಯಲ್ಲಿರುವ ‘ಸ್ಪಂದನ ಕೇಂದ್ರ’ದಲ್ಲಿ ತೆರೆದಿರುವ ‘ಜನತಾ ದರ್ಶನ’ ಕೋಶ, ವಿಭಾಗದಲ್ಲಿ ಮನವಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಈ ದಿವಸಗಳಂದು ಸ್ವೀಕೃತವಾದ ಮನವಿಗಳನ್ನು ಕ್ರೋಢೀಕರಿಸಿ ಆದ್ಯತೆ ಮೇರೆಗೆ ತಾ. ೨೫ ರಂದು ಪರಿಶೀಲನೆಗೆ ತೆಗೆದುಕೊಳ್ಳಲಾಗುವುದು. ಮುಂದುವರೆದು, ತಾ. ೨೫ ರಂದು ಸಹ ಅಹವಾಲು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು ಈ ಕಾರ್ಯಕ್ರಮವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಅವರು ಕೋರಿದ್ದಾರೆ.