ಪೊನ್ನಂಪೇಟೆ, ಸೆ. ೧೯: ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ವತಿಯಿಂದ ಕೊಡವ ಮುಸ್ಲಿಂ ಶಿಕ್ಷಣ ನಿಧಿಯ ಸಹಯೋಗ ದಲ್ಲಿ ಕೆ.ಎಂ.ಎ. ಪ್ರತಿಭಾ ಪುರಸ್ಕಾರ-೨೦೨೩ ವಿತರಣೆ ಮತ್ತು ಜನಾಂಗದ ಸಾಧಕರಿಗೆ ಸನ್ಮಾನ ಸಮಾರಂಭವನ್ನು ತಾ. ೨೪ ರಂದು ವೀರಾಜಪೇಟೆಯಲ್ಲಿ ಆಯೋಜಿಸಲಾಗಿದೆ. ಸಮಾರಂಭ ದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು ಮತ್ತು ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಪಾಲ್ಗೊಳ್ಳಲಿದ್ದಾರೆ ಎಂದು ಕೆ.ಎಂ.ಎ. ಅಧ್ಯಕ್ಷ ದುದ್ದಿಯಂಡ ಹೆಚ್. ಸೂಫಿ ಹಾಜಿ ಅವರು ತಿಳಿಸಿದ್ದಾರೆ.

ಈ ಕುರಿತು ಕರೆದಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಜನಾಂಗದ ಪ್ರತಿಭಾನ್ವಿತ ವಿದ್ಯಾರ್ಥಿ ಗಳನ್ನು ಶೈಕ್ಷಣಿಕವಾಗಿ ಉತ್ತೇಜಿಸಲು ಮತ್ತು ಜನಾಂಗದ ಸಾಧಕರನ್ನು ಗುರುತಿಸಿ ಸನ್ಮಾನಿಸುವುದರ ಮೂಲಕ ಇತರರಿಗೆ ಪ್ರೇರೇಪಣೆ ಮೂಡಿಸಲು ಕೆ. ಎಂ.ಎ. ವತಿಯಿಂದ ಪ್ರತಿ ವರ್ಷ ಈ ಕಾರ್ಯಕ್ರಮವನ್ನು ಆಯೋಜಿಸ ಲಾಗುತ್ತಿದೆ. ಕಾರ್ಯಕ್ರಮದಲ್ಲಿ ಕಳೆದ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಇಡೀ ಕೊಡಗು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿರುವ ತಲಾ ಓರ್ವ ಸಾಧಕ ವಿದ್ಯಾರ್ಥಿಗೆ ದಿ.ಅಕ್ಕಳತಂಡ ಎಸ್ ಹಂಸ ಸ್ಮರಣಾರ್ಥವಾಗಿ ಪ್ರಾಯೋಜಿ ಸಿರುವ ಕೆ.ಎಂ.ಎ. ವಿಶೇಷ ಪ್ರತಿಭಾ ಪುರಸ್ಕಾರ-೨೦೨೩ ನೀಡಿ ಗೌರವಿಸ ಲಾಗುವುದು ಎಂದು ತಿಳಿಸಿದರು.

ಕಳೆದ ಶೈಕ್ಷಣಿಕ ಸಾಲಿನ ದ್ವಿತೀಯ ಪಿ.ಯು.ಸಿ., ಎಸ್.ಎಸ್. ಎಲ್.ಸಿ. ಹಾಗೂ ಮದರಸಾ ವಿಭಾಗದ ೫ನೇ, ೭ನೇ ಮತ್ತು ೧೦ನೇ ತರಗತಿಯ ಪರೀಕ್ಷೆಗಳಲ್ಲಿ ಅತೀ ಹೆಚ್ಚು ಅಂಕ ಪಡೆದು ತೇರ್ಗಡೆ ಹೊಂದಿರುವ ಜನಾಂಗದ ಪ್ರತಿಭಾನ್ವಿತ ವಿದ್ಯಾರ್ಥಿ ಗಳಿಗೆ ಈ ಕಾರ್ಯಕ್ರಮದಲ್ಲಿ ಕೆ.ಎಂ.ಎ. ಪ್ರತಿಭಾ ಪುರಸ್ಕಾರವನ್ನು ಪಾರಿತೋಷಕ ಮತ್ತು ನಗದು ಬಹುಮಾನ ನೀಡಿ ಅವರನ್ನು ಮುಂದಿನ ವಿದ್ಯಾಭ್ಯಾಸಕ್ಕಾಗಿ ಪ್ರೋತ್ಸಾಹಿಸಲಾಗುವುದು. ಅಲ್ಲದೆ, ಪ್ರತಿಭಾ ಪುರಸ್ಕಾರ ವಿತರಣೆ ಎಂಬ ಸಂಸ್ಥೆಯ ವಾರ್ಷಿಕ ಕಾರ್ಯಕ್ರಮವು ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಮಟ್ಟವನ್ನು ಅಭಿವೃದ್ಧಿಗೊಳಿಸುವ ಜೊತೆಗೆ ಜನಾಂಗದವರನ್ನು ಪ್ರತಿ ವರ್ಷ ಒಂದೆಡೆ ಸೇರಿಸುವ ಪ್ರಯತ್ನವಾಗಿದೆ ಎಂದು ಸೂಫಿ ಹಾಜಿ ವಿವರಿಸಿದರು.

ವೀರಾಜಪೇಟೆಯ ಸೇಂಟ್ ಆನ್ಸ್ ಪ್ಯಾರಿಸ್ ಸಭಾಂಗಣದಲ್ಲಿ ಅಂದು ಬೆಳಿಗ್ಗೆ ೧೦.೩೦ ಗಂಟೆಯಿAದ ನಡೆಯುವ ಸಮಾರಂಭವನ್ನು ಕೊಡವ ಮುಸ್ಲಿಂ ಅಸೋಸಿಯೇಷನ್‌ನ ಸ್ಥಾಪಕಾಧ್ಯಕ್ಷ ಕುವೇಂಡ ವೈ. ಹಂಝತುಲ್ಲಾ ಅವರು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವೀರಾಜಪೇಟೆ ಶಾಸಕರು ಮತ್ತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ, ಮಡಿಕೇರಿ ಶಾಸಕ ಡಾ. ಮಂಥರ್ ಗೌಡ ಪಾಲ್ಗೊಳ್ಳಲಿದ್ದಾರೆ. ಪ್ರಸಿದ್ಧ ಚರಿತ್ರೆಗಾರರು ಮತ್ತು ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಹಿರಿಯ ಪ್ರಾಧ್ಯಾಪಕ ಪ್ರೊ. ತಂಬAಡ ವಿಜಯ್ ಪೂಣಚ್ಚ ಸಮಾರಂಭದಲ್ಲಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಸಂಸ್ಥೆಯ ಪೋಷಕರಾದ ಮುಂಬೈನ ಉದ್ಯಮಿ ಅಕ್ಕಳತಂಡ ಎಸ್. ಮೊಯ್ದು ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ನ್ಯಾಯಾಧೀಶರಾಗಿರುವ ವೀರಾಜಪೇಟೆಯ ಆಲೀರ ಎಸ್. ಸಲ್ಮಾ, ಹೊದ್ದೂರು ಗ್ರಾ. ಪಂ.ಯಲ್ಲಿ ೨ನೇ ಬಾರಿಗೆ ಅಧ್ಯಕ್ಷರಾಗಿರುವ ಸಂಸ್ಥೆಯ ಪದಾಧಿಕಾರಿಯಾದ ಕೊಟ್ಟಮುಡಿ ಹೆಚ್.ಎ. ಹಂಸ ಮತ್ತು ಪ್ರಗತಿಪರ ಕೃಷಿಕರಾಗಿರುವ ಚಾಮಿಯಾಲ ಗ್ರಾಮದ ಕೂವಲೆರ ಹೆಚ್. ಹನೀಫ್ ಅವರನ್ನು ಸಂಸ್ಥೆಯ ಪರವಾಗಿ ಸನ್ಮಾನಿಸಿ ಗೌರವಿಸಲಾಗುವುದು ಎಂದು ತಿಳಿಸಿದರು.

ಗೋಷ್ಠಿಯಲ್ಲಿ ಕೆ.ಎಂ.ಎ. ಹಿರಿಯ ನಿರ್ದೇಶಕರಾದ ಚಿಮ್ಮಿಚ್ಚೀರ ಎ. ಅಬ್ದುಲ್ಲಾ ಹಾಜಿ, ಪದಾಧಿಕಾರಿಗಳಾದ ಅಕ್ಕಳತಂಡ ಎಸ್. ಮೊಯ್ದು, ಚಿಮ್ಮಿಚ್ಚೀರ ಕೆ. ಇಬ್ರಾಹಿಂ (ಉಮ್ಣಿ), ಪೊಯಕೆರ ಎಸ್. ಮೊಹಮ್ಮದ್ ರಫೀಕ್ ಉಪಸ್ಥಿತರಿದ್ದರು.