ಗೋಣಿಕೊಪ್ಪ ವರದಿ, ಸೆ. ೨೦: ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನ ಪ್ರಯುಕ್ತ ವೀರಾಜಪೇಟೆ ಬಿಜೆಪಿ ಮಂಡಲ ಗೋಣಿಕೊಪ್ಪ ಉಮಾಮಹೇಶ್ವರಿ ದೇವಸ್ಥಾನದಲ್ಲಿ ಪೂಜಾ ಕಾರ್ಯ ನೆರವೇರಿಸಲಾಯಿತು. ನಂತರ ಗೋಣಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರದ ಒಳ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸಲಾಯಿತು. ವೀರಾಜಪೇಟೆ ಬಿಜೆಪಿ ಮಂಡಲ ಅಧ್ಯಕ್ಷ ನೆಲ್ಲೀರ ಚಲನ್ಕುಮಾರ್, ಪ್ರಧಾನ ಕಾರ್ಯದರ್ಶಿ ಅಜ್ಜಿಕುಟ್ಟೀರ ಪ್ರವೀಣ್, ಗೋಣಿಕೊಪ್ಪ ಶಕ್ತಿ ಕೇಂದ್ರ ಪ್ರಮುಖ್ ಸುರೇಶ್ ರೈ, ಗೋಣಿಕೊಪ್ಪ ಗ್ರಾ.ಪಂ. ಸದಸ್ಯರಾದ ರಾಜೇಶ್, ವಿವೇಕ್ ರೈಕರ್, ಗೀತಾ, ಕೊಣಿಯಂಡ ಬೋಜಮ್ಮ ಉತ್ತಪ್ಪ, ಅರ್ವತೊಕ್ಲು ಗ್ರಾ.ಪಂ. ಸದಸ್ಯ ಕಳ್ಳಿಚಂಡ ನವೀನ್, ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣ ನಿರ್ವಾಹಕ ಸುನಿಲ್ ರೈ, ಬೂತ್ ಅಧ್ಯಕ್ಷ ಮದನ್ ಶೆಟ್ಟಿ ಇದ್ದರು.