ನಾಪೋಕ್ಲು, ಸೆ. ೧೯: ಸಮುದಾಯದ ಜನರ ಜೊತೆ ಅಂಗನವಾಡಿ, ಆಶಾ ಕಾರ್ಯಕರ್ತೆ ಯರು ಉತ್ತಮ ಬಾಂಧವ್ಯದೊAದಿಗೆ ನಿಸ್ವಾರ್ಥ ಸೇವೆ ಸಲ್ಲಿಸಬೇಕು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ನುಡಿದರು. ಅವರು ಸಮೀಪದ ಹಳೆ ತಾಲೂಕು ಭಗವತಿ ಸಮುದಾಯ ಭವನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ಪೋಷಣ್ ಅಭಿಯಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆರ್ಹ ಫಲಾನುಭವಿಗಳು ಯಾವುದೇ ಸೌಲಭ್ಯದಿಂದ ವಂಚಿತರಾಗದAತೆ ಹಾಗೂ ಅಪೌಷ್ಟಿಕತೆ ಹೋಗಲಾಡಿಸು ವಂತೆ ಕರ್ತವ್ಯ ನಿರ್ವಹಿಸುವಂತೆ ಸಲಹೆ ನೀಡಿದರು.

ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಕುಲ್ಲೇಟಿರ ಹೇಮಾವತಿ ಅರುಣ್ ಅವರು ನಾವು ನಮ್ಮ ಸುತ್ತಮುತ್ತಲಿನಲ್ಲಿ ತರಕಾರಿಗಳನ್ನು ಬೆಳೆಸಿ ಅದನ್ನು ಆಹಾರದ ಜೊತೆ ಬಳಸಿದಾಗ ಅದರ ರುಚಿ ಹಾಗೂ ಪೌಷ್ಟಿಕತೆ ವಿಶೇಷ ವಾಗಿರುತ್ತದೆ ಎಂದರು. ಆರೋಗ್ಯ ಕಾರ್ಯಕರ್ತೆ ಉಮಾ ಮಹೇಶ್ವರಿ ಪೌಷ್ಟಿಕತೆ ಜೊತೆಗೆ ಚುಚ್ಚು ಮದ್ದು ಸಹ ಸರಿಯಾದ ಸಮಯಕ್ಕೆ ತೆಗೆದುಕೊಳ್ಳಬೇಕೆಂದು ಮಾಹಿತಿ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ಶೀಲಾ ಅಶೋಕ್ ಮಾತೃ ವಂದನಾ ಹಾಗೂ ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಪ್ರಜಾಪ್ರಭುತ್ವ ದಿನದ ವಿಶೇಷ ಹಾಗೂ ಪ್ರತಿಜ್ಞಾ ವಿಧಿಯನ್ನು ಮಾಡಲಾಯಿತು. ಈ ಸಂದರ್ಭ ಪ್ರಥಮ್ ಸಂಸ್ಥೆ ಅನುಷಾ, ಸುರಬಿ ಅವರಿಂದ ಶಾಲಾ ಪೂರ್ವ ಶಿಕ್ಷಣ ತರಬೇತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಬಲ್ಲಮಾವಟಿ ಹಾಗೂ ನಾಪೋಕ್ಲು ವೃತ್ತದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರು ಹಾಜರಿದ್ದರು.

ಶೈಲ ಪ್ರಾರ್ಥಿಸಿ, ಭಾಗ್ಯವತಿ ನಿರೂಪಿಸಿ, ಆಶಾಲತಾ ಸ್ವಾಗತಿಸಿ. ವಂದಿಸಿದರು.