ಮಡಿಕೇರಿ, ಸೆ. ೧೯: ರಾಷ್ಟçಪಿತ ಮಹಾತ್ಮ ಗಾಂಧೀಜಿಯವರ ೧೫೪ನೇ ಜಯಂತಿಯ ದಿನಾಚರಣೆ ಪ್ರಯುಕ್ತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರö್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಮತ್ತಿತರ ವಿಚಾರಗಳ ಕುರಿತು ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ/ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದ್ದು, ಆ ನಿಟ್ಟಿನಲ್ಲಿ ತಾ.೨೦ ರಂದು ಪ್ರಬಂಧ ಬರೆಸಿ, ಆಯಾಯ ಶಾಲಾ ಕಾಲೇಜಿನಿಂದ ಎರಡು ಪ್ರಬಂಧವನ್ನು ಪ್ರಾಂಶು ಪಾಲರ ನೇತೃತ್ವದಲ್ಲಿ ಮೌಲ್ಯಮಾಪನ ನಡೆಸಿ ತಾ.೨೨ ರೊಳಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಡಿಕೇರಿ ಕಚೇರಿಗೆ ಕಳುಹಿಸಿಕೊಡುವಂತೆ ಜಿ.ಪಂ.ಸಿಇಒ ವರ್ಣಿತ್ ನೇಗಿ ಸೂಚಿಸಿದ್ದಾರೆ.

ನಗರದ ಗಾಂಧಿ ಭವನದ ಸಭಾಂಗಣದಲ್ಲಿ ‘ಬಾಪೂಜಿ ಪ್ರಬಂಧ ಸ್ಪರ್ಧೆ’ ಸಂಬAಧ ಮಂಗಳವಾರ ನಡೆದ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಪ್ರತೀ ಪ್ರೌಢಶಾಲಾ/ ಕಾಲೇಜಿ ನಿಂದ ಬಂದ ಪ್ರಬಂಧವನ್ನು ಮೌಲ್ಯಮಾಪನ ಮಾಡಲು ಜಿಲ್ಲಾ ಮಟ್ಟದಲ್ಲಿ ತಜ್ಞರ ಸಮಿತಿ ರಚಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ತಜ್ಞರ ಸಮಿತಿಯು ತಾ.೨೫ ರಂದು ಮೂರು ವಿಭಾಗದ (ಪ್ರೌಢಶಾಲೆ, ಪದವಿ ಪೂರ್ವ ಮತ್ತು ಪದವಿ/ ಸ್ನಾತಕೋತ್ತರ ಪದವಿ) ಆಯಾಯ ಹಂತದಲ್ಲಿ ಮೌಲ್ಯ ಮಾಪನ ನಡೆಯಲಿದ್ದು, ಮೌಲ್ಯ ಮಾಪನದಲ್ಲಿ ಒಂದು ವಿಭಾಗದಲ್ಲಿ ಹತ್ತು ಪ್ರಬಂಧಗಳನ್ನು ಆಯ್ಕೆ ಮಾಡಲಾಗುತ್ತದೆ.

ಬಳಿಕ ಮತ್ತೊಂದು ತಜ್ಞರ ಸಮಿತಿಯು ಮೌಲ್ಯಮಾಪನ ಮಾಡಲಿದೆ ಎಂದು ಜಿ.ಪಂ. ಸಿಇಒ ವರ್ಣಿತ್ ನೇಗಿ ಅವರು ತಿಳಿಸಿದರು.

ತಾ.೨೫ ರಂದು ಜಿಲ್ಲಾ ಮಟ್ಟದಲ್ಲಿ ಮೌಲ್ಯಮಾಪನ ಮಾಡಲಾಗುತ್ತದೆ. ಮೂರು ವಿಭಾಗದಲ್ಲಿ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಆಯ್ಕೆಯಾದ ಪ್ರಥಮ ಸ್ಥಾನ ಪಡೆದವರನ್ನು ರಾಜ್ಯ ಮಟ್ಟಕ್ಕೆ ತಾ.೨೭ ರೊಳಗೆ ಕಳುಹಿಸಬೇಕಿದೆ. ಆ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸುವಂತೆ ಜಿ.ಪಂ. ಸಿಇಒ ಸಂಬAಧಿಸಿದವರಿಗೆ ನಿರ್ದೇಶನ ನೀಡಿದರು.

ಪ್ರೌಢಶಾಲಾ ವಿಭಾಗ, ಪದವಿ ಪೂರ್ವ ಶಿಕ್ಷಣ ವಿಭಾಗ, ಪದವಿ/ ಸ್ನಾತಕೋತ್ತರ ಪದವಿ ವಿಭಾಗಗಳಿಗೆ ಪ್ರತ್ಯೇಕ ವಿಷಯಗಳನ್ನು ನೀಡಲಾಗಿದೆ. ಜೊತೆಗೆ ಪ್ರೌಢ ಶಾಲೆ ವಿದ್ಯಾರ್ಥಿಗಳು ೯೦೦ ಪದಗಳು, ಪದವಿ ಪೂರ್ವ ವಿದ್ಯಾರ್ಥಿಗಳು ೧೫೦೦ ಪದಗಳು ಹಾಗೂ ಪದವಿ/ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ೨೦೦೦ ಪದಗಳಿಗೆ ಮೀರದಂತೆ ಪ್ರಬಂಧ ಬರೆಯಬೇಕಿದೆ ಎಂದರು.

ವಾರ್ತಾಧಿಕಾರಿ ಚಿನ್ನಸ್ವಾಮಿ ಮಾತನಾಡಿ ಪ್ರೌಢಶಾಲೆ, ಪದವಿ ಪೂರ್ವ, ಪದವಿ ಹಾಗೂ ಸ್ನಾತಕೋತ್ತರ ಮೂರು ಪ್ರತ್ಯೇಕ ವಿಭಾಗದಲ್ಲಿ ಪ್ರಬಂಧ ಸ್ಪರ್ಧೆ ವಿಜೇತರಿಗೆ ಜಿಲ್ಲಾ ಮಟ್ಟದಲ್ಲಿ ಪ್ರಥಮ ಬಹುಮಾನ ೩ ಸಾವಿರ ರೂ., ದ್ವಿತೀಯ ಬಹುಮಾನ ೨ ಸಾವಿರ, ತೃತೀಯ ಬಹುಮಾನ ೧ ಸಾವಿರ ರೂ ಬಹುಮಾನ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ಸರ್ವೋದಯ ಸಮಿತಿ ನಿಕಟ ಪೂರ್ವ ಅಧ್ಯಕ್ಷ ಟಿ.ಪಿ.ರಮೇಶ್ ಪ್ರತಿ ವಿಭಾಗದಲ್ಲಿ ಶಾಲಾ ಕಾಲೇಜುಗಳಿಂದ ಕನಿಷ್ಠ ಎರಡು ಪ್ರಬಂಧವನ್ನು ತರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಸರ್ವೋದಯ ಸಮಿತಿ ಅಧ್ಯಕ್ಷರಾದ ಅಂಬೆಕಲ್ಲು ಕುಶಾಲಪ್ಪ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಪುಟ್ಟರಾಜು, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಹಾಗೂ ನೋಡಲ್ ಅಧಿಕಾರಿ ವೆಂಕಟೇಶ್, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ರಾಘವ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಶಿಕ್ಷಣಾಧಿಕಾರಿ ಹರೀಶ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ರಾಡ್ರಿಗಸ್, ಡಾ.ಪ್ರಕಾಶ್, ಇತರರು ಬಾಪೂಜಿ ಪ್ರಬಂಧ ಸ್ಪರ್ಧೆ ಕುರಿತು ಹಲವು ಸಲಹೆ ನೀಡಿದರು.

ಪ್ರಬಂಧ ರಚಿಸಲು ಮಾರ್ಗಸೂಚಿಗಳು:-ಪ್ರಬಂಧವು ಸಂಪೂರ್ಣವಾಗಿ ಸ್ವರಚಿತವಾಗಿ ರಬೇಕು. ಪ್ರಬಂಧವು ಕನ್ನಡದಲ್ಲಿ ಶುದ್ಧ ಕೈಬರಹ ಅಥವಾ ನುಡಿ ಇಲ್ಲವೇ ಯೂನಿಕೋಡ್ ತಂತ್ರಾA ಶದಲ್ಲಿ ಬೆರಳಚ್ಚು ಮಾಡಿರಬೇಕು. ಆಕರವಾಗಿ ಬಳಸಿದ ಪರಾಮರ್ಶನ/ ಆಧಾರ ಗ್ರಂಥಗಳ ವಿವರಗಳನ್ನು ಪ್ರಬಂಧದ ಕೊನೆಯಲ್ಲಿ ನಮೂ ದಿಸಬೇಕು. ಪ್ರಬಂಧಕಾರರ ಹೆಸರು, ವಿಳಾಸ ನಮೂದಿಸಿರಬೇಕು. ಶಾಲೆ/ ಕಾಲೇಜುಗಳ ಮುಖ್ಯಸ್ಥರ ಮೂಲ ಕವೇ ಜಿಲ್ಲಾ ವಾರ್ತಾಧಿಕಾರಿಗಳಿಗೆ ಪ್ರಬಂಧಗಳನ್ನು ತಲುಪಿಸಬೇಕು. ಪ್ರಬಂಧವು ಈ ಮೊದಲು ಎಲ್ಲಿಯೂ ಪ್ರಕಟವಾಗಿರಬಾರದು. ಆಯ್ದ ಪ್ರಬಂಧಗಳ ಪ್ರಕಟಣೆಯ ಹಕ್ಕನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊಂದಿದೆ.