ಮಡಿಕೇರಿ, ಸೆ. ೨೦: ಭಾರತ್ ಸ್ಕೌಟ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆಯ ಗೈಡ್ ಸಹ ಕಾರ್ಯದರ್ಶಿಯಾಗಿ ಸಾಹಿತಿ, ನಟಿ ಹಾಗೂ ನಿರ್ಮಾಪಕಿ ಈರಮಂಡ ಹರಿಣಿ ವಿಜಯ್ ನೇಮಕಗೊಂಡಿದ್ದಾರೆ.
ಸ್ಕೌಟ್ ಮತ್ತು ಗೈಡ್ಸ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಂಸ್ಥೆಯ ಜಿಲ್ಲಾ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯೂ ಹರಿಣಿ ಅವರಿಗೆ ಆದೇಶದ ಪ್ರತಿಯನ್ನು ನೀಡಿದರು. ಜಿಲ್ಲಾ ಗೈಡ್ ಆಯುಕ್ತೆ ಪದ್ಮಶ್ರೀ ಐಮುಡಿಯಂಡ ರಾಣಿ ಮಾಚಯ್ಯ, ಸ್ಥಾನಿಕ ಆಯುಕ್ತ ಹೆಚ್.ಆರ್.ಮುತ್ತಪ್ಪ, ಜಿಲ್ಲಾ ಸಂಘಟಕಿ ದಮಯಂತಿ, ಜಿಲ್ಲಾ ತರಬೇತಿ ಆಯುಕ್ತೆ ಮೈಥಿಲಿ ರಾವ್, ಜಿಲ್ಲಾ ಸಹ ಕಾರ್ಯದರ್ಶಿ ಬೊಳ್ಳಜಿರ ಅಯ್ಯಪ್ಪ ಇತರರು ಪಾಲ್ಗೊಂಡಿದ್ದರು.