ಮಡಿಕೇರಿ, ಸೆ.೨೦: ಪ್ರಸಕ್ತ ಸಾಲಿನಲ್ಲಿ ತಾಲೂಕು ಮಟ್ಟದಲ್ಲಿ ಭಾಗವಹಿಸಿದ ಪುರುಷ ಹಾಗೂ ಮಹಿಳೆಯರಿಗೆ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ ಸ್ಪರ್ಧೆಗಳು ಇಲಾಖಾ ವತಿಯಿಂದ ತಾ. ೨೭ ರಂದು ನಡೆಯಲಿದೆ.

ಮಡಿಕೇರಿ ತಾಲೂಕಿನಲ್ಲಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವು ತಾ. ೨೭ ರಂದು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಅಥ್ಲೆಟಿಕ್ಸ್, ವಾಲಿಬಾಲ್, ಫುಟ್ಬಾಲ್ (ಪುರುಷರಿಗೆ ಮಾತ್ರ), ಖೋಖೋ, ಕಬಡ್ಡಿ, ಬಾಸ್ಕೇಟ್ ಬಾಲ್, ಕುಸ್ತಿ, ಷಟಲ್ ಬ್ಯಾಡ್ಮಿಂಟನ್, ಹಾಕಿ, ಹ್ಯಾಂಡ್‌ಬಾಲ್, ಟೇಬಲ್ ಟೆನ್ನಿಸ್, ಥ್ರೋಬಾಲ್, ಬಾಲ್ ಬ್ಯಾಡ್ಮಿಂಟನ್, ಯೋಗ (ಮುಕ್ತ ಪಂದ್ಯಾವಳಿ ಪುರುಷ ಹಾಗೂ ಮಹಿಳೆಯರಿಗೆ).

ಜಿಲ್ಲಾ ಮಟ್ಟದಲ್ಲಿ ಆಯ್ಕೆ ಮಾಡಲಾಗುವ ಕ್ರೀಡೆ: ತಾ. ೨೭ ರಂದು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಟೆನ್ನಿಸ್, ನೆಟ್‌ಬಾಲ್, ಈಜು ಸ್ಪರ್ಧೆ ನಡೆಯಲಿದೆ.

ಈಜು ಸ್ಪರ್ಧೆಯಲ್ಲಿ ಆಯ್ಕೆ ಮಾಡಲಾಗುವ ಕ್ರೀಡೆಗಳು ತಾ. ೨೭ ರಂದು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಈಜು-೧೦೦, ೨೦೦, ೪೦೦ ಮೀ. ಫ್ರೀ ಸ್ಟೆöÊಲ್, ೧೦೦, ೨೦೦ ಬ್ಯಾಕ್ ಸ್ಟೊçÃಕ್, ೧೦೦, ೨೦೦ ಮೀ. ಬ್ರೆಸ್ಟ್, ೧೦೦ ಮೀ. ಬಟರ್ ಫೈ, ೨೦೦ ಮೀ ಇಂಡಿವಿಜ್ಯಲ್ ಮಿಡ್ಲೆ, ೪x೧೦೦ ಮೀ. ಫ್ರೀ ಸ್ಟೆöÊಲ್ ರಿಲೇ (ಮುಕ್ತ ಪಂದ್ಯಾವಳಿ, ಪುರುಷ ಹಾಗೂ ಮಹಿಳೆಯರಿಗೆ). ಹೆಚ್ಚಿನ ಮಾಹಿತಿಗೆ ಮಡಿಕೇರಿ ತಾಲೂಕು ಮನು ೯೪೮೦೦ ೩೨೭೧೨, ಗಣಪತಿ ೮೯೫೧೨೮೭೩೦೧ ಇವರುಗಳನ್ನು ಸಂಪರ್ಕಿಸಬಹುದು.

ತಾಲೂಕು ಮಟ್ಟದಲ್ಲಿ ನಡೆದ ಅಥ್ಲೆಟಿಕ್ಸ್ (ವೈಯಕ್ತಿಕ ಸ್ಪರ್ಧೆ), ಪ್ರಥಮ ಸ್ಥಾನ ಮತ್ತು ದ್ವಿತೀಯ ಸ್ಥಾನ ಹಾಗೂ ಗುಂಪು ಸ್ಪರ್ಧೆ ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳಿಗೆ ಹಾಗೂ ತಂಡಗಳಿಗೆ ಮಾತ್ರ ಅವಕಾಶ. ಜಿಲ್ಲಾ ಮಟ್ಟಕ್ಕೆ ಭಾಗವಹಿಸುವ ಕ್ರೀಡಾಪಟುಗಳು ಆಧಾರ್ ಕಾರ್ಡ್ ಜೆರಾಕ್ಸ್, ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್ ಹಾಗೂ ೨ ಭಾವಚಿತ್ರವನ್ನು ಕಡ್ಡಾಯವಾಗಿ ತರಬೇಕು. ಜಿಲ್ಲಾ ಮಟ್ಟದಲ್ಲಿ ಭಾಗವಹಿಸುವ ಕ್ರೀಡಾ ಪಟುಗಳಿಗೆ ಲಘು ಊಟೋಪಹಾರ ವ್ಯವಸ್ಥೆ ಇರುತ್ತದೆ ಎಂದು ಯುವ ಸಬಲೀ ಕರಣ ಮತ್ತು ಕ್ರೀಡಾಯ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ತಿಳಿಸಿದ್ದಾರೆ.