ಮಡಿಕೇರಿ, ಸೆ.೨೦: ಕಾಲೇಜು ಶಿಕ್ಷಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವತಿಯಿಂದ ೨೦೨೩-೨೪ನೇ ಸಾಲಿನ ಸಾಂಸ್ಕೃತಿಕ ಕ್ರೀಡೆ ಮತ್ತಿತರ ಪಠ್ಯೇತರ ಮತ್ತು ಸಹಪಠ್ಯ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ತಾ. ೨೧ ರಂದು (ಇಂದು) ಬೆಳಗ್ಗೆ ೧೧ ಗಂಟೆಗೆ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.
ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಡಾ.ಮಂಥರ್ ಗೌಡ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಡಿ.ಜೆ. ಜವರಪ್ಪ, ಪತ್ರಕರ್ತರಾದ ಜಿ.ಆರ್. ಪ್ರಜ್ಞಾ ಇತರರು ಪಾಲ್ಗೊಳ್ಳಲಿದ್ದಾರೆ.