ವೀರಾಜಪೇಟೆ, ಸೆ. ೨೨: ಕಾಫಿ ತೋಟದಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳನ್ನು ಕಾಡಿಗೆ ಅಟ್ಟುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.
ವೀರಾಜಪೇಟೆ ತಾಲೂಕಿನ ನಾಂಗಾಲ ಮತ್ತು ಒಂದನೇ ರುದ್ರಗುಪ್ಪೆ ಗ್ರಾಮಗಳ ಕಾಫಿ ತೋಟಗಳಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟು ದಾಂಧಲೆ ನಡೆಸಿ ಕಾಫಿ ಫಸಲುಗಳನ್ನು ನಾಶಗೊಳಿಸಿತ್ತು. ಅಪಾರ ಪ್ರಮಾಣದಲ್ಲಿ ಕಾಫಿ ಫಸಲು ಸೇರಿದಂತೆ ಇನ್ನಿತರ ಕೃಷಿ ಫಸಲು ಗಳಿಗೆ ಹಾನಿಯಾಗಿತ್ತು. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಸಲ್ಲಿಸಿದರು. ಇಂದು ಗ್ರಾಮದ ವಿವಿಧ ತೋಟಗಳಲ್ಲಿ ಬೀಡುಬಿಟ್ಟೀರುವ ಕಾಡಾನೆಗಳನ್ನು ಕಾಡಿಗೆ ಓಡಿಸುವ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆ ವೀರಾಜಪೇಟೆ ಆನೆ ಕಾರ್ಯಪಡೆ ಮತ್ತು ಮಾಕುಟ್ಟ ವನ್ಯಜೀವಿ ವಲಯ ಅರಣ್ಯ ಇಲಾಖೆಯ ಸಿಬ್ಬಂದಿಗಳು ಅರಣ್ಯ ಇಲಾಖೆಯ ಅಧಿಕಾರಿ ದೇಚಮ್ಮ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ಕಾಫಿ ತೋಟಗಳಲ್ಲಿ ಒಟ್ಟು ೬ ಕಾಡಾನೆಗಳನ್ನು ಸಮೀಪದ ಕಾಡಿಗೆ ಅಟ್ಟಲಾಯಿತು. ಕಾಡಾನೆಗಳ ಕಾರ್ಯಾಚರಣೆ ಯಶಸ್ವಿಯಾಗಿ ನೆರವೇರಿತು.