ಕೂಡಿಗೆ, ಸೆ. ೨೧: ಶಿಕ್ಷಕರ ದಿನಾಚರಣೆಯ ಅಂಗವಾಗಿ ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ತಾ. ೨೨ ರಂದು (ಇಂದು) ಕೂಡಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಟಿ.ಕೆ. ಬಸವರಾಜು ತಿಳಿಸಿದ್ದಾರೆ.