ಮAಡ್ಯ, ಸೆ. ೨೨: ಕಾವೇರಿ ನೀರಿನ ವಿಚಾರಕ್ಕೆ ಸಂಬAಧಿಸಿದAತೆ ತಾ. ೨೩ ರಂದು (ಇಂದು) ಮಂಡ್ಯ ಜಿಲ್ಲಾ ಹಿತರಕ್ಷಣಾ ಸಮಿತಿ ವತಿಯಿಂದ ಮಂಡ್ಯ ನಗರ ಬಂದ್‌ಗೆ ಕರೆ ನೀಡಲಾಗಿದೆ.

ತಮಿಳುನಾಡಿಗೆ ಕಾವೇರಿ ನೀರು ಬಿಡಬೇಕೆಂದು ಸುಪ್ರೀಂಕೋರ್ಟ್ ಆದೇಶಿಸಿರುವ ಹಿನ್ನೆಲೆಯಲ್ಲಿ ಬಂದ್‌ಗೆ ಕರೆ ನೀಡಿದ್ದು, ಅಂಗಡಿ ಮುಂಗಟ್ಟು ಮುಚ್ಚಿ ಬಂದ್‌ಗೆ ಬೆಂಬಲ ಕೊಡಬೇಕೆಂದು ಮನವಿ ಮಾಡಲಾಗಿದೆ. ಬೆಳಿಗ್ಗೆ ೮ ಗಂಟೆಯಿAದ ಸಂಜೆ ೬ ಗಂಟೆವರೆಗೆ ಬಂದ್ ಇರಲಿದ್ದು, ಹೊಟೇಲ್ ಮಾಲೀಕರು ಹಾಗೂ ವರ್ತಕರ ಸಂಘದವರು ಬೆಂಬಲ ನೀಡುವಂತೆ ಮನವಿ ಮಾಡಿದ್ದು, ಈಗಾಗಲೇ ಬಂದ್ ಸಂಬAಧ ಹಲವು ವರ್ತಕರ ಸಂಘಟನೆಗಳೊAದಿಗೆ ಸಮಿತಿ ಸಭೆ ನಡೆಸಿದೆ.

ಖಾಸಗಿ ಬಸ್ ಮಾಲೀಕರ ಸಂಘ, ಆಟೋ ಚಾಲಕ, ಮಾಲೀಕರ ಸಂಘ ಸೇರಿ ಹಲವು ಸಂಘಟನೆಗಳಿಗೆ ಬಂದ್‌ಗೆ ಸಹಕರಿಸುವಂತೆ ಮನವಿ ಮಾಡಿದ್ದು, ಬಹುತೇಕ ಎಲ್ಲಾ ಸಂಘ ಸಂಸ್ಥೆಗಳು ರೈತರ ಹೋರಾಟಕ್ಕೆ ಬೆಂಬಲ ನೀಡುವ ಸಾಧ್ಯತೆ ಇದೆ. ಬೆಳಿಗ್ಗೆ ೮ ಗಂಟೆಯಿAದ ಮಂಡ್ಯ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಲಿದ್ದು, ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆಯಿಂದ ಜಯಚಾಮರಾಜೇಂದ್ರ ಒಡೆಯರ್ ವೃತ್ತ, ಮಹಾವೀರ ವೃತ್ತ, ವಿ.ವಿ. ರಸ್ತೆ, ವಿವೇಕಾನಂದ ರಸ್ತೆ, ನೂರಡಿ ರಸ್ತೆ ಸೇರಿದಂತೆ ನಗರದ ಹಲವು ರಸ್ತೆಗಳಲ್ಲಿ ಬೃಹತ್ ಬೈಕ್ ರ‍್ಯಾಲಿ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಕೊಡಗಿನಿಂದ ಬೆಂಗಳೂರಿಗೆ ಪ್ರಯಾಣ ಮಾಡುವ ಜನರು ಮಂಡ್ಯ ನಗರದ ಮೂಲಕ ತೆರಳುವ ಬದಲು, ಬದಲಿ ರಸ್ತೆಗಳನ್ನು ಬಳಸುವದು ಉತ್ತಮ ಎಂಬ ಅಭಿಪ್ರಾಯ ಹಲವರದ್ದಾಗಿದೆ. ಮೂಲಗಳ ಪ್ರಕಾರ ಮುಖ್ಯ ಹೆದ್ದಾರಿ ಬಂದ್ ಇರುವುದಿಲ್ಲ ಎಂದು ಹೇಳಿಲಾಗಿದ್ದರೂ ಸಮಸ್ಯೆಗೆ ಸಿಲುಕುವ ಬದಲು ಮುಂಜಾಗ್ರತೆ ಒಳಿತು ಎಂದು ಅಭಿಪ್ರಾಯ ವ್ಯಕ್ತಗೊಂಡಿದೆ.