ಮಡಿಕೇರಿ, ಸೆ.೨೨ : ರಾಷ್ಟಿçÃಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಇದೇ ತಾ. ೨೬ ರಿಂದ ಅಕ್ಟೋಬರ್ ೨೫ ರವರೆಗೆ ನಾಲ್ಕನೇ ಸುತ್ತಿನಲ್ಲಿ ಜಾನುವಾರುಗಳಿಗೆ ಕಾಲುಬಾಯಿ ಲಸಿಕೆ ನೀಡಲಾಗುತ್ತಿದ್ದು, ಈ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟಿçÃಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮ ಸಂಬAಧ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರ ೨೦೩೦ ರೊಳಗೆ ಜಾನುವಾರುಗಳ ಕಾಲುಬಾಯಿ ಜ್ವರವನ್ನು ನಿಯಂತ್ರಿಸುವಲ್ಲಿ ಹಲವು ಸುತ್ತಿನ ಲಸಿಕಾ ಕಾರ್ಯಕ್ರಮ ಹಮ್ಮಿಕೊಂಡಿದೆ. ಆ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸುವಂತೆ ಅವರು ಕೋರಿದರು. ಕೃಷಿಗೆ ಪೂರಕವಾಗಿ ಜಾನುವಾರು ಸಾಕಾಣಿಕೆ ರೈತರ ಅವಿಭಾಜ್ಯ ಅಂಗವಾಗಿದೆ. ಆರ್ಥಿಕ ಚಟುವಟಿಕೆಗೆ ಪಶುಪಾಲನೆ ಸಹಕಾರಿಯಾಗಿದೆ. ಆ ದಿಸೆಯಲ್ಲಿ ಜಾನುವಾರು/ ರಾಸುಗಳಿಗೆ ಯಾವುದೇ ರೀತಿಯ ರೋಗ ಬರದಂತೆ ನಿಯಂತ್ರಿಸುವುದು ಅತ್ಯಗತ್ಯವಾಗಿದ್ದು, ಅಗತ್ಯ ಕ್ರಮವಹಿಸುವಂತೆ ಸಂಬAಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಯಾವುದೇ ಜಾನುವಾರುಗಳು ಲಸಿಕಾ ಕಾರ್ಯಕ್ರಮದಿಂದ ಬಿಟ್ಟು ಹೋಗದಂತೆ ಗಮನಹರಿಸುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ಯಾವ ಯಾವ ದಿನದಂದು ಯಾವ ಯಾವ ಗ್ರಾಮದಲ್ಲಿ ಲಸಿಕೆ ನೀಡಲಾಗುತ್ತದೆ ಎಂಬ ಬಗ್ಗೆ ಮುಂಚಿತವಾಗಿ ಪ್ರಚುರಪಡಿಸುವಂತೆ ಸಲಹೆ ಮಾಡಿದರು. ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ಲಿಂಗರಾಜು ದೊಡ್ಡಮನಿ ಅವರು ಮೂರನೇ ಸುತ್ತಿನ ಲಸಿಕಾ ಕಾರ್ಯಕ್ರಮದ ಸಂದರ್ಭದಲ್ಲಿ ೭೬,೯೨೦ ಜಾನುವಾರು ಸಂಖ್ಯೆ ಗುರಿಯಲ್ಲಿ ೬೬,೭೧೦ ಜಾನುವಾರುಗಳಿಗೆ ಲಸಿಕೆಯನ್ನು ನೀಡಿ ಶೇ.೮೪ ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದರು.
ರಾಷ್ಟಿçÃಯ ಜಾನುವಾರು ರೋಗ ನಿಯಂತ್ರಣ ಸಂಬAಧಿಸಿದAತೆ ಲಸಿಕೆ ನೀಡುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ೨ ಎಂ.ಎಲ್.ಒಳಗೊAಡ ೭೫,೩೨೫ ಸಿರೀಂಜ್‌ಗಳನ್ನು ದಾಸ್ತಾನು ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. ಪಶುಪಾಲನಾ ಇಲಾಖೆಯ ಮೂರು ಸಂಚಾರಿ ಪಶು ಚಿಕಿತ್ಸಾ ವಾಹನಗಳು ಹಾಗೂ ೮ ಹಾಲು ಉತ್ಪಾದಕರ ಮಹಾ ಮಂಡಳದ ವಾಹನಗಳನ್ನು ಬಳಕೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಈಗಾಗಲೇ ಪಶುಪಾಲನಾ ಇಲಾಖೆಯ ಆಯುಕ್ತಾಲಯದಿಂದ ೭೭ ಸಾವಿರ ಡೋಸ್ ಲಸಿಕೆ ಸರಬರಾಜು ಆಗಿದೆ. ಒಂದು ವಾಕ್ ಇನ್ ಕೂಲರ್, ೭ ಐಸ್ ಲೈನ್ ರೆಫ್ರಿಜರೇಟರ್, ೫ ಐಎಲ್ ಆರ್‌ಎಫ್, ೪೭ ಶೀತಲೀಕರಣಯಂತ್ರ ಹಾಗೂ ೧೮೨ ವ್ಯಾಕ್ಸಿನ್ ಕ್ಯಾರಿಯರ್ ಗಳನ್ನು ಸುಸ್ಥಿತಿಯಲ್ಲಿ ಇಡಲಾಗಿದೆ ಎಂದು ಡಾ.ಲಿಂಗರಾಜು ದೊಡ್ಡಮನಿ ಅವರು ವಿವರಿಸಿದರು.
ಕೊಡಗು ಜಿಲ್ಲೆಯಲ್ಲಿ ಲಸಿಕೆ ಅನುಷ್ಠಾನ ಸಂಬAಧಿಸಿದAತೆ ೧೪ ತಾಂತ್ರಿಕ ಸಿಬ್ಬಂದಿ, ೩೩ ಅರೆ ತಾಂತ್ರಿಕ ಸಿಬ್ಬಂದಿ, ೦೯ ಇಲಾಖಾ ಡಿ ದರ್ಜೆ ಸಿಬ್ಬಂದಿ, ೧೨ ಬಾಹ್ಯ ಮೂಲದ ಡಿ ದರ್ಜೆ ಸಿಬ್ಬಂದಿ, ೪ ಹೆಚ್ಚುವರಿ ಸಿಬ್ಬಂದಿ ಒಟ್ಟು ೭೨ ಲಸಿಕಾ ಸಿಬ್ಬಂದಿಗಳನ್ನು ನಿಯೋಜಿಸಲಾಗುತ್ತದೆ ಎಂದು ಪಶುಪಾಲನಾ ಇಲಾಖೆ ಉಪ ನಿರ್ದೇಶಕರು ಮಾಹಿತಿ ನೀಡಿದರು.
ಪಾಲಿಕ್ಲಿನಿಕ್ ಉಪ ನಿರ್ದೇಶಕರಾದ ಡಾ.ತಿಮ್ಮಯ್ಯ, ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕರಾದ ಪ್ರಸನ್ನ(ಮಡಿಕೇರಿ), ಡಾ.ಶಾಂತೇಶ್(ಪೊನ್ನAಪೇಟೆ), ಡಾ.ನವೀನ್ (ವಿರಾಜಪೇಟೆ), ಡಾ.ಬಾದಾಮಿ(ಸೋಮವಾರಪೇಟೆ), ಡಾ.ಶ್ರೀದೇವು (ಕುಶಾಲನಗರ), ಹಾಸನ ಹಾಲು ಒಕ್ಕೂಟದ ವ್ಯವಸ್ಥಾಪಕರಾದ ಡಾ.ಬಿ.ಎಲ್.ಪ್ರಸನ್ನ ಇತರರು ಹಲವು ಮಾಹಿತಿ ನೀಡಿದರು. ಹೆಚ್ಚಿನ ಮಾಹಿತಿಗೆ ತಾಲ್ಲೂಕಿನ ಸಹಾಯಕ ನಿರ್ದೇಶಕರು ಪಶು ಆಸ್ಪತ್ರೆ ಮಡಿಕೇರಿ ೯೪೪೮೬೪೭೨೭೬, ಸಹಾಯಕ ನಿರ್ದೇಶಕರು ಪಶುಆಸ್ಪತ್ರೆ ಸೋಮವಾರಪೇಟೆ ೯೪೪೮೬೫೫೬೬೦, ಸಹಾಯಕ ನಿರ್ದೇಶಕರು ಪಶುಆಸ್ಪತ್ರೆ ವಿರಾಜಪೇಟೆ ೯೧೪೧೦೯೩೯೯೬, ಸಹಾಯಕ ನಿರ್ದೇಶಕರು ಪಶುಆಸ್ಪತ್ರೆ ಕುಶಾಲನಗರ ೮೯೫೧೪೦೪೦೨೫, ಸಹಾಯಕ ನಿರ್ದೇಶಕರು ಪಶುಆಸ್ಪತ್ರೆ ಪೊನ್ನಂಪೇಟೆ ೯೪೪೯೦೮೧೩೪೩ ನ್ನು ಸಂಪರ್ಕಿಸಬಹುದು.